AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಬ್ಯಾಡರಹಳ್ಳಿ ಪೊಲೀಸ್​ ಠಾಣೆ PSI ಹರೀಶ್​​ನನ್ನು ಠಾಣೆಯಲ್ಲೇ ಬಂಧಿಸಿದ ಸಿಐಡಿ ಅಧಿಕಾರಿಗಳು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಬ್ಯಾಡರಹಳ್ಳಿ ಠಾಣೆ PSI ಹರೀಶ್​​ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

PSI Recruitment Scam: ಬ್ಯಾಡರಹಳ್ಳಿ ಪೊಲೀಸ್​ ಠಾಣೆ PSI ಹರೀಶ್​​ನನ್ನು ಠಾಣೆಯಲ್ಲೇ ಬಂಧಿಸಿದ ಸಿಐಡಿ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 15, 2022 | 2:46 PM

Share

ಬೆಂಗಳೂರು:  545 ಪಿಎಸ್​ಐ (PSI Recruitment Scam)  ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಬ್ಯಾಡರಹಳ್ಳಿ (Byadarahalli) ಪೊಲೀಸ್​ ಠಾಣೆ PSI ಹರೀಶ್​​ರನ್ನು ಸಿಐಡಿ ಅಧಿಕಾರಿಗಳು (CID Police) ಬಂಧಿಸಿದ್ದಾರೆ. 2018 ರ ಬ್ಯಾಚ್ ನ ಸಬ್ ಇನ್ಸ್ ಪೆಕ್ಟರ್ ಆಗಿದ್ದು, ಕಳೆದ 1 ವರ್ಷದಿಂದ ಬ್ಯಾಡರಹಳ್ಳಿ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.  PSI ಹರೀಶ್​​ರನ್ನು ಸಿಐಡಿ ಅಧಿಕಾರಿಗಳು ಠಾಣೆಯಲ್ಲೇ  ಬಂಧಿಸಿ ಕರೆದೊಯ್ದಿದ್ದಾರೆ.  ಹರೀಶ ಇತ್ತೀಚಿಗೆ ಪಿಎಸ್ ಐ ನಲ್ಲಿ ಸೆಲೆಕ್ಟ್ ಆದ ಹರ್ಷನ ಊರಿನವನಾಗಿದ್ದಾರೆ.

ಹರ್ಷನಿಗೆ ಹರೀಶ ಆರ್​​​​ಎಸ್ ಐ ಒಬ್ಬನನ್ನ ಪಿಎಸ್ ಐ ಪರೀಕ್ಷೆಗೂ ಮುನ್ನ ಪರಿಚಯ ಮಾಡಿಸಿದ್ದರು. ಹರೀಶ ಕೂಡ ಆ ಆರ್​​ಎಸ್ ಐ ಮೂಲಕವೇ 2018 ರಲ್ಲಿ ಪಿಎಸ್ ಐ ಪರೀಕ್ಷೆ ಪಾಸಾಗಿದ್ದನಂತೆ‌. ನನ್ನ ತರಾನೇ ಇಲಾಖೆಗೆ ಬಾ ಅಂತ ಹರೀಶ ಆರ್​​ಎಸ್ ಐ ನನ್ನ ಪರಿಚಯ ಮಾಡಿಕೊಟ್ಟಿದ್ದನು. ಹರೀಶನ ಮಾತಿನಂತೆ ಹರ್ಷ 60 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದನು. ಹರ್ಷ ಬಂಧನದ ಬಳಿಕ ಸತ್ಯ ಹೊರಗಡೆ ಬಂದಿದೆ.

ಇದನ್ನು ಓದಿ:  ಮಾನನಷ್ಟ ಮೊಕದ್ದಮೆ ಪ್ರಕರಣ; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್​ಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್

ಕಳೆದ ಇಪ್ಪತ್ತು ದಿನದಿಂದ ಹರೀಶನನ್ನ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೀತಾನೇ ಇದ್ದರು. ವಿಚಾರಣೆಗೆ ಹೆದರಿದ ಪಿಎಸ್ ಐ ಹರೀಶ ಸಿಐಡಿ ತನಿಖೆಯ ಮೇಲೆ ಹೈಕೋರ್ಟ್ ನಲ್ಲಿ ರಿಟ್ ಪಿಟಿಷನ್ ಹಾಕಿದ್ದನು. ಇದೀಗ ಹರೀಶನನ್ನ ಸಿಐಡಿ ಟೀಂ ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸ್ತಿದೆ.

ಏನಿದು 545 ಪಿಎಸ್​ಐ  ಹುದ್ದೆಗಳಿಗೆ ನೇಮಕಾತಿ ಪ್ರಕರಣ

ಪೊಲೀಸ್​ ಸಬ್​ಇನ್​ಸ್ಪೆಕ್ಟರ್ ನೇಮಕಾತಿ ಹಗರಣದ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪಿಎಸ್​ಐ ಪರೀಕ್ಷೆ ಅಕ್ರಮ ನಡೆದಿತ್ತು. ಸಿಐಡಿ ಪೊಲೀಸರು ಪ್ರಕರಣದ ತನಿಖೆಯನ್ನ ಮುಂದುವರೆಸಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯಾ ಹಾಗರಗಿ, ರುದ್ರಗೌಡ ಸೇರಿದಂತೆ ಹಲವು ಪೊಲೀಸ್​​ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈಗ ಮತ್ತೊಬ್ಬ PSI ಅಧಿಕಾರಿಯ ತೆಲೆದಂಡವಾಗಿದ್ದು, ಬ್ಯಾಡರಹಳ್ಳಿ ಠಾಣೆ PSI ಹರೀಶ್​​ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ

ಇದನ್ನು ಓದಿ: ನಾವು ಲಂಚ ಪಡೆದಿದ್ದೆವಾ? ಮಂಚಕ್ಕೆ ಹೋಗಿದ್ದೆವಾ? ಬಿಜೆಪಿಗೆ ಹೆದರೋ ಮಾತೇ ಇಲ್ಲ; ಡಿಕೆ ಶಿವಕುಮಾರ್

ಪರೀಕ್ಷೆ ಬರೆಯಲು 1. ಬ್ಲೂಟೂತ್ ಬಳಕೆ  2. ಒಎಂಆರ್ ಪ್ರತಿಯನ್ನ ಎಕ್ಸಾಂ ಸೆಂಟರ್​ನಲ್ಲಿ ತಿದ್ದುಪಡಿ ಮಾಡಿದ್ದಾರೆ. 3. ನೇಮಕಾತಿ ವಿಭಾಗದಲ್ಲಿ ಒಎಂಆರ್ ಪ್ರತಿಯಲ್ಲಿ ಅಕ್ರಮ ತಿದ್ದುಪಡಿ ಮಾಡಿದ್ದಾರೆ. 4. ಸೀಟಿಂಗ್ ವ್ಯವಸ್ಥೆ ಮಾಡಿ ಅಕ್ರಮ ಎಸಗಿ ಬರೆಯಲಾಗಿದೆ. 5. ಫಿಸಿಕಲ್ ವೇಳೆ ಹಣ ನೀಡಿ ಅಕ್ರಮ ಎಸಗಿದ್ದಾರೆ. 6. ಸಂಪೂರ್ಣ ಹುದ್ದೆಯನ್ನು ಡೀಲ್ ಮಾಡಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ. 7. ಮೊದಲ ಪ್ರಶ್ನೆ ಪತ್ರಿಕೆ ಡೀಲ್ ಮಾಡಿ ಬರೆಯಲಾಗಿದೆ. 8. ಎರಡನೆ ಪ್ರಶ್ನೆ ಪತ್ರಿಕೆ ಡೀಲ್ ಮಾಡಿ ಪರೀಕ್ಷೆ ಬರೆಯಲಾಗಿದೆ. 9. ಎಕ್ಸಾಂ ಸೆಂಟರ್ ಬುಕ್ ಮಾಡಿ ಅಕ್ರಮ ಎಸಗಿರುವುದು ಪತ್ತೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?