ಪಿಎಸ್ಐ ನೇಮಕಾತಿ ಹಗರಣ: ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ರಚನಾಳನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು
545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ.
ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ್ ಮೊದಲ ರ‍್ಯಾಂಕ್ ಪಡೆದಿದ್ದಳು. ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದಳು.
ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ರಚನಾ ಹೆಸರು ಕೇಳಿ ಬಂದಿತ್ತು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು.
ರಚನಾ ಸರ್ಕಾರದ ಮರುಪರಿಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು. ರಚನಾ ಎಫ್ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಳು.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:40 pm, Sat, 27 August 22