AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಡಿವೈಎಸ್​ಪಿ ಶಾಂತಕುಮಾರ್ ಬಂಧನವಾಗಿಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

ಡಿವೈಎಸ್​ಪಿ ಶಾಂತಕುಮಾರ್ ಸೇರಿದಂತೆ ಹಲವು ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

PSI Recruitment Scam: ಡಿವೈಎಸ್​ಪಿ ಶಾಂತಕುಮಾರ್ ಬಂಧನವಾಗಿಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: May 13, 2022 | 12:52 PM

Share

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಸದ್ದು ಮಾಡುತ್ತಿರುವ ಪಿಎಸ್ಐ ಅಕ್ರಮ ನೇಮಕಾತಿ (PSI Recruitment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಹತ್ವದ ಹೇಳಿಕೆ ನೀಡಿದ್ದಾರೆ. ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್ (DYSP Shantkumar) ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ಅವರು ಬಾಯಿಬಿಟ್ಟರೆ ಇನ್ನೂ ಕೆಲ ಹಿರಿಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಮೂಲಗಳನ್ನು ಉದ್ದೇಶಿಸಿ ಮಾಧ್ಯಮಗಳು ಮಾಡಿದ್ದ ವರದಿಗಳನ್ನು ಅವರು ಶುಕ್ರವಾರ ನಿರಾಕರಿಸಿದರು. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ, ಡಿವೈಎಸ್​ಪಿ ಶಾಂತಕುಮಾರ್ ಬಂಧನವಾಗಿಲ್ಲ ಎಂದರು.

ಪಿಎಸ್​ಐ ನೇಮಕಾತಿ ಹಗರಣ ಬಗ್ಗೆ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿ ಶಾಂತಕುಮಾರ್ ಸೇರಿದಂತೆ ಹಲವು ಆರೋಪಿಗಳ ವಿಚಾರಣೆ ನಡೆದಿದೆ. ಸೂಕ್ತ ಸಾಕ್ಷ್ಯಗಳು ಲಭಿಸಿದರೆ ಇತರರನ್ನು ಬಂಧಿಸುತ್ತೇವೆ. ಈ ಹಿಂದೆ ಬಂಧಿಸಿ ವಿಚಾರಣೆ ನಡೆಸಿದ ಸಿಬ್ಬಂದಿ ಹಲವು ಮಾಹಿತಿ ನೀಡಿದ್ದಾರೆ. ಅವರು ಕೊಟ್ಟ ಮಾಹಿತಿ ಆಧರಿಸಿ, ಡಿವೈಎಸ್​ಪಿ ಶಾಂತಕುಮಾರ್ ಅವರ ವಿಚಾರಣೆ ನಡೆಸಲಾಯಿತು. ಪರೀಕ್ಷೆಯ ಎಲ್ಲ ಕೇಂದ್ರಗಳಲ್ಲಿಯೂ ಪೊಲೀಸರು ಕೆಲಸ ಮಾಡಿದ್ದರು. ವಿವಿಧ ಕೇಂದ್ರಗಳಲ್ಲಿ ಕೆಲಸ ಮಾಡಿದ್ದ ಸಿಬ್ಬಂದಿಯ ವಿಚಾರಣೆಯೂ ಆರಂಭವಾಗಿದೆ. ಸಿಐಡಿ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿದೆ, ತಪ್ಪಿತಸ್ಥರು ಯಾರೇ ಇದ್ದರೂ ಬಿಡುವುದಿಲ್ಲ, ಕಾನೂನಿನ ವ್ಯಾಪ್ತಿಗೆ ತರುತ್ತೇವೆ ಎಂದರು.

ನಾನು ಯಾವತ್ತೂ ಸಚಿವ ಸ್ಥಾನಕ್ಕಾಗಿ ಯಾರಿಗೂ ಬೆನ್ನುಬಿದ್ದಿಲ್ಲ. ಯಡಿಯೂರಪ್ಪ, ಬೊಮ್ಮಾಯಿ ನನಗೆ ಸಚಿವಸ್ಥಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವಸ್ಥಾನ ಸಿಕ್ಕರೂ, ಸಿಗದಿದ್ದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾವೆಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ‌ಬದ್ಧರಾಗಿರುತ್ತೇವೆ. ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಪಕ್ಷದ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ ಎಂದು ಹೇಳಿದರು.

ಯಾರು ಶಾಂತಕುಮಾರ್

1996ರ ಬ್ಯಾಚ್​ನಲ್ಲಿ ನಗರ ಸಶಸ್ತ್ರ ಮೀಸಲು ಪಡೆಯಲ್ಲಿ (CAR) ಕಾನ್​ಸ್ಟೆಬಲ್ ಆಗಿದ್ದ ಶಾಂತಕುಮಾರ್ ತಾಂತ್ರಿಕವಾಗಿ ಚುರುಕಾಗಿದ್ದ. 2006ರಲ್ಲಿ ಮೀಸಲು ಪಡೆಯ ಸಬ್​ಇನ್​ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು ಆಯ್ಕೆಯಾಗಿದ್ದ. ಗುಲ್ಬರ್ಗದಲ್ಲಿ ಒಂದು ವರ್ಷ ತರಬೇತಿ ಮುಗಿಸಿದ ನಂತರ ತುಮಕೂರಿನಲ್ಲಿ ಎರಡು ವರ್ಷ ಪ್ರೊಬೆಷನರಿ ಅವಧಿ ಪೂರೈಸಿದ್ದ. ನಂತರ PSI ನೇಮಕಾತಿ ವಿಭಾಗಕ್ಕೆ ಹಿರಿಯ ಅಧಿಕಾರಿಗಳು ಶಾಂತಕುಮಾರ್​ನನ್ನು ನೇಮಿಸಿದ್ದರು.

2007-08ರಿಂದ ಶಾಂತಕುಮಾರ್ ನೇಮಕಾತಿ ವಿಭಾಗದಲ್ಲೇ ಮುಂದುವರಿದಿದ್ದರು. ನೇಮಕಾತಿಯ ಒಳಹೊರಗೆ ಏನೆಲ್ಲಾ ಆಗುತ್ತದೆ ಎನ್ನುವುದನ್ನು ತಿಳಿದಿದ್ದರು. ಕಳೆದ 2 ವರ್ಷಗಳ ಹಿಂದೆ ಡಿವೈಎಸ್​ಪಿ ಆಗಿ ಬಡ್ತಿ ಪಡೆದಿದ್ದರು. ಈ ಹೊತ್ತಿಗಾಗಲೇ ಇಡೀ ನೇಮಕಾತಿ ವಿಭಾಗದಲ್ಲಿ ಶಾಂತಕುಮಾರ್ ಹಿಡಿತ ಸಾಧಿಸಿದ್ದರು. ಸಿಐಡಿ ವಿಚಾರಣೆ ಬಳಿಕ ಶಾಂತಕುಮಾರ್ ಈವರೆಗೆ ಮಾಡಿರುವ ಅಕ್ರಮಗಳ ಸಂಪೂರ್ಣ ಮಾಹಿತಿ ಬೆಳಕಿಗೆ ಬರಲಿದೆ.

Follow Us
Web contact
Web contact

TV9 Kannada

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?