AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡುವುದು ಬೇಡವೆಂದಿದ್ದ ಅಭ್ಯರ್ಥಿಗಳ ಅರ್ಜಿ ವಜಾ

ಪಿಎಸ್ಐ ಅಭ್ಯರ್ಥಿಗಳು ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದ್ರೆ ಈಗ ಕಾರಣಕೊಟ್ಟು ಅಭ್ಯರ್ಥಿಗಳ ಅರ್ಜಿ ವಜಾಗೊಂಡಿದೆ.

PSI Recruitment Scam: 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡುವುದು ಬೇಡವೆಂದಿದ್ದ ಅಭ್ಯರ್ಥಿಗಳ ಅರ್ಜಿ ವಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 19, 2022 | 2:37 PM

Share

ಬೆಂಗಳೂರು: 545 ಪಿಎಸ್ಐ ನೇಮಕಾತಿ(PSI Recruitment Scam) ಪರೀಕ್ಷೆ ರದ್ದು ಹಿನ್ನೆಲೆ ಪರೀಕ್ಷೆ ರದ್ದು ಪ್ರಶ್ನಿಸಿದ್ದ ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ. ಪಿಎಸ್ಐ ಅಭ್ಯರ್ಥಿಗಳು ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದ್ರೆ ಈಗ ಕಾರಣಕೊಟ್ಟು ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.

ನೇಮಕಾತಿ ಪ್ರಾಧಿಕಾರದ ಮೇಲೆಯೇ ಆರೋಪಗಳಿರುವ ಹಿನ್ನೆಲೆ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ಎಎಜಿ ಸುಬ್ರಹ್ಮಣ್ಯ ಆಕ್ಷೇಪಣೆ ಸಲ್ಲಿಸಿದ್ದರು. ಸರ್ಕಾರದ ವಾದ ಎತ್ತಿಹಿಡಿದು ಕೆಎಟಿ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಪಿಎಸ್​ಐ ನೇಮಕಾತಿ ಹಗರಣ, ಕೊಲೆಗಿಂತಲೂ ಗಂಭೀರ ಅಪರಾಧ ಎಂದ ಹೈಕೋರ್ಟ್​

ಬೆಂಗಳೂರು (ಜುಲೈ 14): ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಇಂದು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ, ಕೊಲೆಯಾದರೆ ಒಬ್ಬ ಸಾವಿಗೀಡಾಗುತ್ತಾನೆ, ಇಲ್ಲಿ 50 ಸಾವಿರ ಅಭ್ಯರ್ಥಿಗಳು ತೊಂದರೆಗೀಡಾಗಿದ್ದಾರೆ ಎಂದು ನ್ಯಾ.ಹೆಚ್.ಪಿ.ಸಂದೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಕ್ರಮ ನೇಮಕಾತಿ ಸಮಾಜಕ್ಕೇ ಬಹು ದೊಡ್ಡ ಬೆದರಿಕೆಯಾಗಿದೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ ಎಂದು ಪ್ರಶ್ನಿಸಿದ್ದಾರೆ. ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ, ಪಿಎಸ್​ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ‌ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಗಳ ಕರೆ ವಿವರವನ್ನು ಪರಿಶೀಲಿಸಲಾಗುತ್ತಿದೆ, ಸಿಐಡಿ ಡಿಜಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ನಿರ್ಲಜ್ಜ ವ್ಯಕ್ತಿಗಳಿಂದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಹೀಗಾಗಿ ಜಾಮೀನು ನೀಡದಂತೆ ಎಸ್​ಪಿಪಿ ವಿ.ಎಸ್.ಹೆಗ್ಡೆ ಮನವಿ ಮಾಡಿದ್ದಾರೆ.

ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಎಸಗಿರುವ ಆರೋಪದಡಿ ‌ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಬುಧವಾರ ಕಸ್ಟಡಿ ಅಂತ್ಯ ಹಿನ್ನೆಲೆ ಇಂದು ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿ ಮತ್ತೆ ಮೂರು ದಿನಗಳವರೆಗೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

Published On - 2:31 pm, Tue, 19 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್