PSI Recruitment Scam: ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ಕಾನ್ಸ್ಟೇಬಲ್ ಶ್ರೀಧರ್ ಮನೆಯಲ್ಲಿ 1.55 ಕೋಟಿ ಹಣ ಪತ್ತೆ
ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ಪೊಲೀಸರು ಕಳೆದ ಶುಕ್ರವಾರ ಶ್ರೀಧರ್ರನ್ನ ಬಂಧಿಸಿದ್ದರು. ಶ್ರೀಧರ್ ಡಿವೈಎಸ್ಪಿ ಶಾಂತಕುಮಾರ್ ಆಣತಿಯಂತೆ ಕೆಲಸ ಮಾಡುತ್ತಿದ್ದರು.ಶಾಂತಕುಮಾರ್ ಕೂಡಾ ಸದ್ಯ ಅರೆಸ್ಟ್ ಆಗಿದ್ದಾರೆ.
ಬೆಂಗಳೂರು: ಈಗಾಗಲೇ ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗಿದೆ. ಸಿಐಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮದ ಹಿಂದಿನ ದೊಡ್ಡ ರಹಸ್ಯವೇ ಬಯಲಾಗುತ್ತಿದೆ. ಇನ್ನು ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ಕಾನ್ಸ್ಟೇಬಲ್ (Head Constable) ಶ್ರೀಧರ್ ಮನೆಯಲ್ಲಿ ಇಂದು ಬರೋಬ್ಬರಿ 1.55 ಕೋಟಿ ರೂ. ಹಣ ಪತ್ತೆಯಾಗಿದೆ. ಸಿಐಡಿ ಅಧಿಕಾರಿಗಳ ದಾಳಿ ವೇಳೆ ಸುಮಾರು 20 ಲಕ್ಷ ಹಣ ಪತ್ತೆಯಾಗಿತ್ತು. ಮತ್ತೊಂದು ಮನೆ ಮೇಲೆ ದಾಳಿ ವೇಳೆ 1.55 ಕೋಟಿ ಹಣ ಸಿಕ್ಕಿದೆ.
ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ಪೊಲೀಸರು ಕಳೆದ ಶುಕ್ರವಾರ ಶ್ರೀಧರ್ರನ್ನ ಬಂಧಿಸಿದ್ದರು. ಶ್ರೀಧರ್ ಡಿವೈಎಸ್ಪಿ ಶಾಂತಕುಮಾರ್ ಆಣತಿಯಂತೆ ಕೆಲಸ ಮಾಡುತ್ತಿದ್ದರು.ಶಾಂತಕುಮಾರ್ ಕೂಡಾ ಸದ್ಯ ಅರೆಸ್ಟ್ ಆಗಿದ್ದಾರೆ.
32 ಜನರ ವಿಚಾರಣೆ ಮುಕ್ತಾಯ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿತ್ತು. 32 ಜನರ ವಿಚಾರಣೆ ಮೇ 15ರಂದು ಮುಕ್ತಾಯವಾಗಿದೆ. ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ ತುಂಬಿ ಹೋಗಿತ್ತು. ತಿಂಗಳ ನಂತರ ಮೊದಲ ಬಾರಿಗೆ ಆರೋಪಿಗಳಿಲ್ಲದೆ ಸಿಐಡಿ ಕಚೇರಿ ಖಾಲಿಯಾಗಿದೆ. ಸದ್ಯ ಸಿಐಡಿ ಅಧಿಕಾರಿಗಳು ಎರಡನೇ ಹಂತದ ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ.
ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಹಿಡಿತ ಸಾಧಿಸಿದ್ದ ಶಾಂತಕುಮಾರ್: ನೇಮಕಾತಿ ವಿಭಾಗದ ಡಿವೈಎಸ್ ಆಗಿ ಶಾಂತಕುಮಾರ್ ಕಾರ್ಯನಿರ್ವಹಿಸುತ್ತಿದ್ದರು. ಈ ಬಂಧನದೊಂದಿಗೆ ಎಡಿಜಿಪಿ ಅಮ್ರಿತ್ ಪಾಲ್ ಅವರನ್ನೂ ಮುಂದಿನ ದಿನಗಳಲ್ಲಿ ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಲಾಗುತ್ತಿದೆ. ಸಿಬಿಐ ವಿಚಾರಣೆ ವೇಳೆ ಡಿವೈಎಸ್ಪಿ ಶಾಂತಕುಮಾರ್ ಮತ್ತಷ್ಟು ಸ್ಫೋಟಕ ಸತ್ಯಗಳನ್ನು ಬಾಯಿಬಿಡಬಹುದು ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನು ಸಿಐಡಿ ಬಂಧಿಸಿ ವಿಚಾರಣೆಗೆ ಒಳಪಡಿಸಬಹುದು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:45 pm, Tue, 17 May 22