AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸುತ್ತೇವೆ: ಶಾಸಕ ಪ್ರಿಯಾಂಕ್ ಖರ್ಗೆ

545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಹಗರಣವನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಹೈಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಸುತ್ತೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪಿಎಸ್​ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸುತ್ತೇವೆ: ಶಾಸಕ ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ
TV9 Web
| Edited By: |

Updated on:Sep 12, 2022 | 2:19 PM

Share

ಬೆಂಗಳೂರು: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ  (PSI Recruitment Scam) ಹಗರಣವನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಹೈಕೋರ್ಟ್​ನಲ್ಲಿ (High Court) ಪಿಐಎಲ್​ ಸಲ್ಲಿಸುತ್ತೇವೆ ಎಂದು ಕೆಪಿಸಿಸಿ (KPCC) ಕಚೇರಿಯಲ್ಲಿ ವಕ್ತಾರ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ವಕ್ತಾರ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿದ ಅವರು ವಿಧಾನಸಭೆಯಲ್ಲಿ ಸರ್ಕಾರದ 40 ಪರ್ಸೆಂಟ್​ ಹಗರಣದ ಬಗ್ಗೆ ಪ್ರಸ್ತಾಪಿಸುತ್ತೇವೆ.

ಪಿಎಸ್​ಐ ಹಗರಣ, ಮಳೆ ಹಾನಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಜನರ ಪರವಾಗಿ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ. ಇದರ ಜೊತೆಗೆ ಕಾನೂನು ಹೋರಾಟಕ್ಕೂ ಮುಂದಾಗುತ್ತಿದ್ದೇವೆ ಎಂದು ಹೇಳಿದರು.

 ಆಡಿಯೋದಲ್ಲಿರುವ ಧ್ವನಿ ನನ್ನದೆ ಎಂದ ಶಾಸಕ ಬಸವರಾಜ ದಡೇಸಗೂರು

ಕೊಪ್ಪಳ: ಆಡಿಯೋದಲ್ಲಿರುವ ಧ್ವನಿ ನನ್ನದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸಗೂರು ನಗರದಲ್ಲಿ ಹೇಳಿಕೆ ನೀಡಿದರು. ಪ್ರಕರಣದ ಕುರಿತು ಮಧ್ಯಸ್ತಿಕೆ ವಹಿಸಲು ನನ್ನೊಂದಿಗೆ ಮಾತನಾಡಿದರು. ನಾನು ಈ ಕುರಿತು ಬಗೆಹರಿಸುತ್ತೇನೆ ಎಂದು ಹೇಳಿದ್ದೆ. ನಾನು ಹಿರಿಯನಾಗಿ ಮಾತನಾಡಿದ್ದೇನೆ. ಇದರಲ್ಲಿ ನಾನು ದುಡ್ಡು ತೆಗೆದುಕೊಂಡಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಯಾರೋ ರೆಕಾರ್ಡ್ ಮಾಡಿ ಬಿಟ್ಟಿದ್ದಾರೆ. ನಾನು ಸರಕಾರಕ್ಕೆ ಹಣ ಕೊಟ್ಟಿದ್ದೇನೆ ಎಂದು ಹೇಳಿಲ್ಲ ಎಂದು ಸಂಪೂರ್ಣವಾದ ಮಾಹಿತಿ ನೀಡದೆ ಶಾಸಕ ಬಸವರಾಜ ದಡೇಸಗೂರು ಹೋದರು.

ಶಾಸಕ ಬಸವರಾಜ ದಡೇಸಗೂರು ಬಂಧಿಸಬೇಕು: ಶಿವರಾಜ ತಂಗಡಗಿ

ಈ ಕುರಿತಾಗಿ ಮಾಜಿ ಸಚಿವ ಶಿವರಾಜ ತಂಗಡಗಿ ನಗರದಲ್ಲಿ ಹೇಳಿಕೆ ನೀಡಿದ್ದು, ಪ್ರಕರಣದ ಹಿನ್ನಲೆಯಲ್ಲಿ ಶಾಸಕ ಬಸವರಾಜ ದಡೇಸಗೂರು ಬಂಧಿಸಬೇಕು. ನೇರವಾಗಿ ಸರಕಾರಕ್ಕೆ ಹಣ ನೀಡಿದ್ದಾಗಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅವರನ್ನು ಬಂಧಿಸದಿದ್ದರೆ ಕಾಂಗ್ರೆಸ್ ಪಕ್ಷದಿಂದ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಾಗುವುದು. ಶಾಸಕರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕಿಂಗ್ ಪಿನ್ ಸಂಬಂಧಿ ಅರೆಸ್ಟ್

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧ ಕಲ್ಯಾಣ ಕರ್ನಾಟಕ ಕೋಟಾದಡಿ 22ನೇ ರ್ಯಾಂಕ್ ಪಡೆದಿದ್ದ ಸಿದ್ದು ಎಂಬಾತನನ್ನು ಕಲಬುರ್ಗಿಯ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅರೆಸ್ಟ್ ಆಗಿರುವ ಅಭ್ಯರ್ಥಿ ಸಿದ್ದಗೌಡ ಯಾದಗಿರಿ ತಾಲೂಕಿನ ಮುದ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡ್ತಾಯಿದ್ದ‌.

22ನೇ Rank ಪಡೆದಿದ್ದ ಸಿದ್ದಗೌಡ ಇದಕ್ಕೂ ಮೊದಲು ಎರಡು ಬಾರಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದ. ವಿಚಾಣೆಗೆಂದು ಕರೆದುಕೊಂಡು ಬಂದು ಅರೆಸ್ಟ್ ಮಾಡಲಾಗಿದೆ. ಸಿದ್ದುಗೌಡ ಅಭ್ಯರ್ಥಿ ಹಾಗೂ ಮದ್ಯವರ್ತಿಯೂ ಆಗಿದ್ದ. ಬಂಧಿತ ಸಿದ್ದು, ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಸಂಬಂಧಿ ಎಂಬುದು ಗಮನಾರ್ಹ. ಹಗರಣ ಬಯಲಾಗುತ್ತಿದ್ದ ಹಾಗೆಯೇ ಜೂನ್ 4 ರಿಂದ 19 ರ ವರೆಗೆ ಅನಾರೋಗ್ಯದ ನೆಪವೊಡ್ಡಿ ಸಿದ್ದು ರಜೆಯಲ್ಲಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Mon, 12 September 22