PSI Scam Case: ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ ವಜಾ: ಮಾಜಿ IPS ಅಧಿಕಾರಿಗೆ ಜೈಲೇ ಗತಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 04, 2023 | 7:13 PM

ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಲಾಗಿದೆ.

PSI Scam Case: ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ ವಜಾ: ಮಾಜಿ IPS ಅಧಿಕಾರಿಗೆ ಜೈಲೇ ಗತಿ
ಆರೋಪಿ ಅಧಿಕಾರಿ ಅಮೃತ್ ಪಾಲ್
Image Credit source: varthabharati.in
Follow us on

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ (PSI Recruitment Scam) ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ (Amruth Paul) ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಲಾಗಿದೆ. ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಇಂದು ಇಂದು(ಜ.4) ಆದೇಶ ಹೊರಡಿಸಿದೆ. ಸದ್ಯ ಅಮೃತ್ ಪಾಲ್ ವಿರುದ್ಧ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ಕೆಲ ಆಯಾಮಗಳ ತನಿಖೆ ಮಾತ್ರ ಮುಂದುವರಿದಿದೆ. ಹೀಗಾಗಿ ತನಿಖೆ ಸಂಪೂರ್ಣವಾಗಿಲ್ಲವೆಂಬ ವಾದದಲ್ಲಿ ಹುರುಳಿಲ್ಲ ಎಂದು ಜಾಮೀನು ನೀಡದಂತೆ ಎಸ್​​ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, ನ್ಯಾ. ಕೆ.ಲಕ್ಷ್ಮಿ ನಾರಾಯಣ ಭಟ್ ಜಾಮೀನು ತಿರಸ್ಕರಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಅಮೃತ್ ಪಾಲ್ ಬಳಿಯಿತ್ತು. ಸ್ಟ್ರಾಂಗ್ ರೂಮ್ ಕೀ ಇತರೆ ಆರೋಪಿಗಳಿಗೆ ನೀಡಿದ್ದು, ಒಎಂಆರ್ ಶೀಟ್‌ ತಿದ್ದಿರುವುದಾಗಿ FSL ವರದಿಯಲ್ಲಿ ದೃಢಪಟ್ಟಿತ್ತು.

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದರು. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು ಬಂಧಿಸಿದ್ದರು. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

ಉಪ್ಪು ತಿಂದವರು ನೀರು ಕುಡಿಯಲೇಬೇಕು. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲೇ ಒಎಂಆರ್ ಶೀಟ್‌ ತಿದ್ದಲಾಗಿದೆ. ಯಾವೊಬ್ಬ ಅಧಿಕಾರಿಯನ್ನೂ ಬಿಡದಂತೆ ಸೂಚಿಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇವೆ. ಸಿಐಡಿ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದರು.

ಅಮೃತ್ ಪಾಲ್‌ ನ್ಯಾಯಾಂಗ ಬಂಧನಕ್ಕೆ:

ಐಪಿಎಸ್​ ಅಧಿಕಾರಿ ಅಮೃತ್ ಪಾಲ್​ರನ್ನು ಸಿಐಡಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈಗಾಗಲೇ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್, ಎಫ್ ಡಿ ಎ ಹರ್ಷಾ, ಸಿಬ್ಬಂದಿಗಳಾದ ಶ್ರೀಧರ್, ಶ್ರೀನಿವಾಸ್ ಬಂಧಿತರಾಗಿದ್ದರು. ಡಿವೈಎಸ್ ಪಿ ಶಾಂತಕುಮಾರ್ ಬಂಧನಕ್ಕೂ ಮೊದಲೆ ಬಂಧಿತ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ ಮಾಡಲಾಗಿತ್ತು. ಅಮೃತ್‌ಪಾಲ್​ರಿಂದ ಸಿಐಡಿ ಹಿರಿಯ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು.

ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ.

ಇದನ್ನೂ ಓದಿ: PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ

ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.