Sign In

By signing in or creating an account, you agree with Associated Broadcasting Company's Terms & Conditions and Privacy Policy.

Pub And Restaurant Guidelines: ಹೊಸ ವರ್ಷದಂದು ಪಬ್-ರೆಸ್ಟೋರೆಂಟ್ ಮತ್ತು ಪಿಜಿ​​ಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು

New Year PG Guidelines: ಪಬ್-ರೆಸ್ಟೋರೆಂಟ್​​ಗಳಲ್ಲಿ ಮತ್ತು ಪಿಜಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಉಲ್ಲೇಖಿಸಿ ಪೊಲೀಸ್​ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅಪರಾಧ ನಡೆದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.

Pub And Restaurant Guidelines: ಹೊಸ ವರ್ಷದಂದು ಪಬ್-ರೆಸ್ಟೋರೆಂಟ್ ಮತ್ತು ಪಿಜಿ​​ಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು
ಹೊಸ ವರ್ಷದಂದು ಪಬ್-ರೆಸ್ಟೋರೆಂಟ್ ಹಾಗೂ ಪಿಜಿ​​ಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು (ಫೋಟೋ: ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on:Dec 31, 2022 | 8:16 AM

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆ (New Year’s Eve Celebrations)ಯಂದು ಕೆಲವೊಂದು ಕಹಿ ಘಟನೆಗಳು ನಡೆಯುವ ಸಾಧ್ಯತೆ ಹಿನ್ನಲೆ ಪೊಲೀಸ್ ಇಲಾಖೆ ಪಬ್, ರೆಸ್ಟೋರೆಂಟ್ ಹಾಗೂ ಪಿಜಿ ಮಾಲೀಕರಿಗೆ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ. ಪಬ್-ರೆಸ್ಟೋರೆಂಟ್​​ಗಳಲ್ಲಿ (Pub And Restaurant Guidelines) ಹಾಗೂ ಪಿಜಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ((PG Restaurant Guidelines) ಉಲ್ಲೇಖಿಸಿ ಪೊಲೀಸ್​ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅಪರಾಧ ನಡೆದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ. ಪೊಲೀಸರು ಸೂಚಿಸಿದ ಕ್ರಮಗಳು ಹೀಗಿವೆ.

  1. ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಿಕೊಳ್ಳುವುದು
  2. ಕಾರ್ಯಕ್ರಮ ಆಯೋಜಿಸುವ ಸ್ಥಳಗಳಲ್ಲಿ ಗುಣಮಟ್ಟದ ಸಿಸಿಟಿವಿ ಅಳವಡಿಸಿರಬೇಕು
  3. ಸಿಸಿಟಿವಿಗಳು ಸೂಕ್ತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು
  4. ಮಾಲೀಕರು ಸಿಸಿಟಿವಿ ಫೂಟೇಟ್ ಬ್ಯಾಕಪ್‌ ಇಟ್ಟುಕೊಳ್ಳುವುದು ಕಡ್ಡಾಯ
  5. ಕಾರ್ಯಕ್ರಮಕ್ಕೆ ಬರುವ ಗ್ರಾಹಕರ ಬ್ಯಾಗ್‌, ಲಗೇಜ್ ತಪ್ಪದೇ ಚೆಕ್ ಮಾಡುವುದು
  6. ಆಯುಧ, ಸ್ಫೋಟಕ, ಗಾಂಜಾ ಮತ್ತು ಇತರೆ ಮಾದಕ ವಸ್ತು ಇಲ್ಲದಿರುವ ಬಗ್ಗೆ ಖಚಿತಪಡಿಕೊಳ್ಳಬೇಕು
  7. ಪಬ್​, ಬಾರ್​, ರೆಸ್ಟೋರೆಂಟ್, ಎಂಟ್ರಿ ವೇಳೆ ಮಾಸ್ಕ್​ ತೆಗೆದು ಮುಖವನ್ನು ತೋರಿಸುವುದು ಕಡ್ಡಾಯ
  8. ಗ್ರಾಹಕರ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗುವುದು ಕಡ್ಡಾಯ
  9. ಅಪ್ರಾಪ್ತರಿಗೆ ಒಳಗೆ ಹೋಗಲು ಅವಕಾಶ ನೀಡುವುದು ಕಾನೂನು ಬಾಹಿರ
  10. ಹೆಚ್ಚಾಗಿ ಮದ್ಯಪಾನ ಮಾಡಿದವರು ಸುಧಾರಿಸಿಕೊಳ್ಳಲು ಐಸ್‌ಲ್ಯಾಂಡ್ ಸ್ಥಳ ಕಡ್ಡಾಯ
  11. ಮಹಿಳೆಯರ ಭದ್ರತೆ ಮತ್ತು ಸುರಕ್ಷತೆಗೆ ಮಹಿಳಾ ಬೌನ್ಸರ್ ನೇಮಿಸಿಕೊಂಡಿರಬೇಕು
  12. ಮಹಿಳಾ ಬೌನ್ಸರ್‌ಗಳ ಸಹಾಯದಿಂದ ಮನೆಗೆ ಕಳುಹಿಸುವುದು ಮಾಲೀಕರ ಜವಾಬ್ದಾರಿ
  13. ಮದ್ಯಸೇವಿಸಿ ಅನುಚಿತವಾಗಿ ವರ್ತಿಸುವ ಮಹಿಳೆಯರನ್ನ ಸುರಕ್ಷಿತವಾಗಿ ಕಳಿಸಬೇಕು
  14. ಮಹಿಳೆಯರನ್ನು ಕಳುಹಿಸುವ ವಾಹನದ ನಂಬರ್ ಮತ್ತು ಚಾಲಕರ ಫೋಟೋ ತೆಗೆದುಕೊಳ್ಳುವುದು
  15. ಮದ್ಯದಂಗಡಿ ಒಳಗೆ ಹೊರಗೆ ಯಾವುದೇ ಅಹಿತಕರ ಘಟನೆ ಜರುಗದಂತೆ ಎಚ್ಚರ ವಹಿಸುವುದು
  16. ಅಪರಾಧ ನಡೆದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು

ಇದನ್ನೂ ಓದಿ: Bengaluru New Year Guidelines: ಹೊಸ ವರ್ಷದ ಸಂಭ್ರಮಕ್ಕೆ ರಾಜಧಾನಿ ಬೆಂಗಳೂರು ಸಿದ್ಧ, ಸಂಚಾರ ಮಾರ್ಗದಲ್ಲಿ ಬದಲಾವಣೆ, ಬಿಗಿ ಪೊಲೀಸ್ ಭದ್ರತೆ

ವರ್ಷಾಚರಣೆ ಹಿನ್ನೆಲೆ ಪಿಜಿ ಮಾಲೀಕರಿಗೂ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ. ಪಿಜಿಯಲ್ಲಿ ಇರುವವರ ಆಗಮನ ಮತ್ತು ನಿರ್ಗಮನದ ಬಗ್ಗೆ ನಿಖರವಾದ ಸಮಯವನ್ನ ಲೆಡ್ಜರ್​​ನಲ್ಲಿ ನಮೂದಿಸಬೇಕು, ಪಿಜಿಗಳಲ್ಲಿ ಟೇರಸ್‌ ಮೇಲೆ ಪಾರ್ಟಿ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸುವುದು, ಹೊಸ ವರ್ಷದ ದಿನ ಹೊಸಬರು ಮತ್ತು ಅಪರಿಚಿತರನ್ನು ಪಿಜಿಒಳಗೆ ಸೇರಿಸಿಕೊಳ್ಳಬಾರದು, ಪಿಜಿ ಮುಂಭಾಗದ ರಸ್ತೆಗಳಲ್ಲಿ ಹೊಸ ವರ್ಷದ ಪ್ರಯುಕ್ತ ಕೇಕ್ ಕಟಿಂಗ್​ ನಿಷೇಧ ಹೇರಲಾಗಿದೆ. ಅಲ್ಲದೆ, ಮಹಿಳಾ ಪಿಜಿಗಳಿಗೆ ಶುಭ ಕೋರಲು ಆ ವೇಳೆಯಲ್ಲಿ ಬರುವ ಪುರುಷರಿಗೆ ನಿರ್ಬಂಧ ಹೇರಲಾಗಿದ್ದು, ಪಿಜಿಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಅದಕ್ಕೆ ಮಾಲೀಕರೆ ಹೊಣೆ ಎಂದು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 am, Sat, 31 December 22

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ