AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಹೊಸ ರೂಲ್ಸ್​; ಬೆಂಗಳೂರಿಗರ ರಿಯಾಕ್ಷನ್ ಏನು?

ಹೊಸವರ್ಷಾಚರಣೆಗೆ ಕೊರೊನಾ ಹೊಸ ರೂಲ್ಸ್​ ಜಾರಿಗೆ ಮಾಡಿದ್ದು, ಸರ್ಕಾರದ ನಿಯಮ ಪಾಲಿಸುತ್ತೇವೆ ಎಂದು ಹೊಟೇಲ್​ ಮಾಲಿಕರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಹೊಸ ರೂಲ್ಸ್​; ಬೆಂಗಳೂರಿಗರ ರಿಯಾಕ್ಷನ್ ಏನು?
TV9 Web
| Edited By: ವಿವೇಕ ಬಿರಾದಾರ|

Updated on: Dec 26, 2022 | 4:32 PM

Share

ಬೆಂಗಳೂರು: ಜಗತ್ತಿನಾದ್ಯಂತ ಕೊರೊನಾ (Covid) ಸೋಂಕು ಮತ್ತೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದು ಭಾರತಕ್ಕೂ ಒಕ್ಕರಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ (Karnataka Government) ಕೂಡ ಇಂದು (ಡಿ. 26) ರಂದು ಹೊಸವರ್ಷಾಚರಣೆಗೆ (New Year) ಕೊರೊನಾ ಹೊಸ ರೂಲ್ಸ್​ ಜಾರಿಗೆ ಮಾಡಿದೆ. ಹೊಟೇಲ್​ (Hotel), ಬಾರ್​ (Bar), ರೆಸ್ಟೋರೆಂಟ್ (Restorent) ಮತ್ತು ಪಬ್​ಗಳಲ್ಲಿ (PUB) ಮಾಸ್ಕ್​​, ಸೆನಿಟೈಸ್​ ಮತ್ತು ಲಸಿಕೆ ಕಡ್ಡಾಯಗೊಳಿಸಿದೆ. ಸರ್ಕಾರದ ಆದೇಶ ಸ್ವಾಗತಿಸುತ್ತೇವೆ. ಕೊರೊನಾ ವಿಚಾರವಾಗಿ ಸರ್ಕಾರದ ನಿಯಮ ಪಾಲಿಸುತ್ತೇವೆ ಎಂದು ಹೊಟೇಲ್​ ಮಾಲಿಕರು ಹೇಳಿದ್ದಾರೆ.

ಟಿವಿ9 ನೊಂದಿಗೆ ಮಾತನಾಡಿದ ಅವರು ನಮ್ಮ ಎಲ್ಲ ಸಿಬ್ಬಂದಿಗೂ ಎರಡೂ ಡೋಸ್ ಲಸಿಕೆ ಆಗಿದೆ. 3ನೇ ಡೋಸ್ ಲಸಿಕೆ ಪಡೆಯಲು ಅವಕಾಶ ಕಲ್ಪಿಸಬೇಕು. ಹೋಟೆಲ್​ಗಳಲ್ಲಿ ಎಲ್ಲಾ ಸಿಬ್ಬಂದಿ ಮಾಸ್ಕ್ ಧರಿಸಲಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ ಕೆಲಸ ಮಾಡುತ್ತೇವೆ ಎಂದರು.

ಜೀವಕ್ಕಿಂತ ಯಾವುದು ದೊಡ್ಡದಲ್ಲ

ಇನ್ನೂ ವಿದ್ಯಾರ್ಥಿಗಳ ಪೋಷಕರು ಕೂಡ ಸರ್ಕಾರದ ನಿಯಮವನ್ನು ಸ್ವಾಗತಿಸಿದ್ದಾರೆ. ತರಗತಿಯಲ್ಲಿ ಕೂರುವಾಗ ಮಾಸ್ಕ್ ಸಮಸ್ಯೆ ಆಗಬಹುದು. ಆದರೆ ಜೀವಕ್ಕಿಂತ ದೊಡ್ಡದು ಯಾವುದು ಇಲ್ಲ. ಮಾಸ್ಕ್ ಕಿರಿಕಿರಿ ಆದರೂ ಇಂತಹ ಸಮಯದಲ್ಲಿ ಅತ್ಯಗತ್ಯ. ನಮ್ಮ ಜೀವ ರಕ್ಷಿಸಿಕೊಳ್ಳಲು ಮಾಸ್ಕ್ ಬೇಕೆಬೇಕು.

ಮಾಸ್ಕ್​ನ್ನು ಮರು ವೆಲ್ ಕಂ ಯುವ ಜನತೆ

ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ, ಚಿತ್ರಮಂದಿರಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಕಡ್ಡಾಯಗೊಳಿಸಿದೆ. ಸರ್ಕಾರದ ಈ ನಿರ್ಧಾರವನ್ನು ಬೆಂಗಳೂರಿನ ಯುವ ಜನತೆ ಸ್ವಾಗತಿಸಿದ್ದು. ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆವರೆಗೂ ಪಾರ್ಟಿ ಓಕೆ. ಮಾಸ್ಕ್ ಕಡ್ಡಾಯ ನಮ್ಮ ಆರೋಗ್ಯದ ದೃಷ್ಟಿ ಒಳ್ಳೆಯ ನಿರ್ಧಾರವಾಗಿದೆ ಎಂದು ಯುವ ಜನತೆ ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ