ಬೆಂಗಳೂರು: ಬಾತ್ ರೂಂನಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ.. ಸಾವಿನ ಸುತ್ತ ಅನುಮಾನದ ಹುತ್ತ!

| Updated By: ರಮೇಶ್ ಬಿ. ಜವಳಗೇರಾ

Updated on: May 16, 2024 | 3:14 PM

ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಕೊಲೆ ಪ್ರಕರಣ ಎಲ್ಲರನ್ನು ಕಣ್ಣೀರ ಕಡಲಲ್ಲಿ ತೇಲಿಸಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿಯ ಮೃತದೇಹ ಮನೆಯ ಬಾತ್‌ ರೂಮಿನಲ್ಲಿ ಪತ್ತೆಯಾಗಿದೆ.

ಬೆಂಗಳೂರು: ಬಾತ್ ರೂಂನಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ.. ಸಾವಿನ ಸುತ್ತ ಅನುಮಾನದ ಹುತ್ತ!
ಪ್ರಭುಧ್ಯಾ
Follow us on

ಬೆಂಗಳೂರು, (ಮೇ 16): 21 ವರ್ಷದ ಯುವತಿಯ ಮೃತದೇಹ(Dead Body) ಮನೆಯ ಬಾತ್ ರೂಂನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ(Bengaluru) ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಂನಲ್ಲಿ(Bathroom) ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ನಿನ್ನೆ(ಮೇ 15) ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾಳ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.

ಪ್ರಭುಧ್ಯಾಳ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ, ಕೊಲೆಯೋ ಹೀಗೆ ಎಲ್ಲ‌ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆ.. 2 ವರ್ಷದ ಬಳಿಕ ಗಂಡ-ಹೆಂಡ್ತಿ ಇಬ್ಬರೂ ನೇಣಿಗೆ ಶರಣು; ಕಾರಣವೇನು?

ಅನುಮಾನಾಸ್ಪದ ಸಾವಿಗೀಡಾದ ಪ್ರಭುದ್ಯಾ ತಾಯಿ ಹೇಳಿಕೆ

ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳನ್ನು ಜೋಪಾನ ಮಾಡಿದ್ದೆ ಯಾರೋ ಕ್ರೂರವಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ. ಆಫೀಸ್‌ನಲ್ಲಿದ್ದ ನನಗೆ ಮಧ್ಯಾಹ್ನ ಫೋನ್‌ ಮಾಡಿದ್ದಳು. ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತೇನಿ ಎಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳಲ್ಲ. ವ್ಯವಸ್ಥೆಯೇ ನನ್ನ ಮಗಳ ಸಾವಿಗೆ ಕಾರಣವಾಗಿರಬೇಕು. ಪ್ರತಿದಿನ ಕಾಲೇಜಿನಿಂದ ಮನೆಗೆ ಬಂದ ಕೂಡಲೇ ಸೇಫ್ ಆಗಿ ತಲುಪಿದ್ದಕ್ಕೆ ಮೇಸೆಜ್ ಮಾಡುತ್ತಿದ್ದಳು. ಎಜುಕೇಷನ್ ಸಿಸ್ಟಮ್ ಪ್ರಶ್ನೆ ಮಾಡ್ತಿದ್ದಳು. ಮನೆಯ ಹಿಂಬದಿ ಡೋರ್ ಓಪನ್ ಆಗಿದೆ, ನನ್ನ ಮಗಳ ಮೊಬೈಲ್ ಕಳೆದು ಹೋಗಿದೆ. ನನ್ನ ಮಗಳನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಮನೆ ಓನರ್ ಶ್ವೇತಾ ಚಂದ್ರಶೇಖರ್ ಹೇಳುವುದೇನು?

ಪ್ರಭುದ್ಯಾ ತುಂಬಾ ಒಳ್ಳೆಯ ಹುಡುಗಿ. ಹೆಚ್ಚಾಗಿ ಓದುತ್ತಾ ಇದ್ದಳು, ಅಮ್ಮನನ್ನು ಚೆನ್ನಾಗಿ ನೋಡ್ಕೋಬೇಕು ಅಂತಿದ್ದಳು. ನಿನ್ನೆ ಸಂಜೆ ಸುಮಾರಿಗೆ ತಮ್ಮ ಬಂದು ಡೋರು ಬಡೆಯುತ್ತಿದ್ದ. ಈ ವೇಳೆ ಬಾಗಿಲು ತೆಗೆದು ನೋಡಿದಾಗ ಬಾತ್ ರೂಂನಲ್ಲಿ ಬಿದ್ದಿದ್ದಳು. ಕೂಡಲೇ ಆಸ್ಪತ್ರೆಗೆ ಕರ್ಕೊಂಡು ಹೋದ್ರೂ ಪ್ರಯೋಜನೆ ಆಗಲಿಲ್ಲ. ಪೊಲೀಸರು ಕೂಡ ಬಂದು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದಾರೆ. ಪೊಲೀಸರು ಮೂರು ಡೆತ್ ನೋಟ್ ಸಿಕ್ಕಿದೆ ಅಂತಿದ್ದಾರೆ. ಅದರಲ್ಲಿ ಇಂಗ್ಲೀಸ್ ನಲ್ಲಿ ಸಾರಿ ಅಮ್ಮ ಎಂದು ಬರೆದಿದ್ದಾರೆ. ಆದ್ರೆ ನಾವು ಡೆತ್ ನೋಟ್ ನೋಡಿಲ್ಲ, ಪೊಲೀಸರು ತೋರಿಸಿದ್ದಾರೆ ಅಷ್ಟೆ. ಡೆತ್ ನೋಟ್ ಹ್ಯಾಂಡ್ ರೈಟಿಂಗ್ ಮ್ಯಾಚ್ ಆಗ್ತಿಲ್ಲ ಅಂತಿದ್ದಾರೆ ಅದು ನಮಗೆ ಗೊತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಪ್ರತಿಕ್ರಿಯೆ

ಇನ್ನು ಈ ಪ್ರಕರಣದ ಬಗ್ಗೆ ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಪ್ರತಿಕ್ರಿಯಿಸಿದ್ದು, ನಿನ್ನೆ (ಮೇ 15) ಸಂಜೆ 7:30 ರ ಸುಮಾರಿಗೆ ಘಟನೆ ವರದಿಯಾಗಿದೆ. 21 ವರ್ಷದ ವಿದ್ಯಾರ್ಥಿಯ ಕೈ ಹಾಗೂ ಕುತ್ತಿಗೆಗೆ ಚಾಕು ಇರಿತ ಆಗಿದೆ. ಮನೆಯ ಬಾತ್ ರೂಂನಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯಾ ಅನ್ನೋದು ತನಿಖೆ ನಡೆಯುತ್ತಿದೆ. ಮನೆಯವರು ಸಾವಿನ ಹಿಂದೆ ಅನುಮಾನ ಇದೆ ಎಂದು ದೂರು ನೀಡಿದ್ದಾರೆ. ಈಗ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ