AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸದ ಕತೆ ಫೇಕ್: ಸುಳ್ಳು ಸುದ್ದಿ ಹಬ್ಬಿಸಿದ 23 ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಬೆಂಗಳೂರಿನ ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ 23 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಬಸವನಗುಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆತ ಜೈಲಿನಲ್ಲಿ ಊಟ ಸೇವಿಸುತ್ತಿರುವುದು ಸಿಸಿಟಿವಿ ಮೂಲಕ ದೃಢಪಟ್ಟಿದೆ. ಅಲ್ಲದೆ, 10 ಲಕ್ಷ ರೂ. ಶರತ್ತುಬದ್ಧ ಬಾಂಡ್ ಉಲ್ಲಂಘಿಸಿದ್ದಕ್ಕಾಗಿ ಪುನೀತ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸದ ಕತೆ ಫೇಕ್: ಸುಳ್ಳು ಸುದ್ದಿ ಹಬ್ಬಿಸಿದ 23 ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!
ಪುನೀತ್ ಕೆರೆಹಳ್ಳಿ
ಪ್ರದೀಪ್​ ಚಿಕ್ಕಾಟಿ
| Edited By: |

Updated on: Oct 03, 2026 | 9:11 AM

Share

ಮುಖ್ಯಾಂಶಗಳು

  • ಪುನೀತ್ ಕೆರೆಹಳ್ಳಿ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಸಂಪೂರ್ಣ ಸುಳ್ಳು.
  • ಸುಳ್ಳು ಸುದ್ದಿ ಹಬ್ಬಿಸಿದ 23 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್‌ಐಆರ್.
  • ಶರತ್ತುಬದ್ಧ ಬಾಂಡ್ ಉಲ್ಲಂಘನೆಗಾಗಿ ಪುನೀತ್ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಿದ್ಧತೆ.

ಬೆಂಗಳೂರು, ಅಕ್ಟೋಬರ್ 03: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸುತ್ತ ಹೊಸ ವಿವಾದಗಳು ಸುತ್ತುವರಿದಿವೆ. ಜೈಲಿನಲ್ಲಿ ಆತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾನೆಂದು ಸುಳ್ಳು ಸುದ್ದಿ ಹಬ್ಬಿಸಿದ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೆ, ಇನ್ನೊಂದೆಡೆ ಸೌಹಾರ್ದತೆ ಕಾಯ್ದುಕೊಳ್ಳುವ ಬಾಂಡ್ ಉಲ್ಲಂಘಿಸಿದ್ದಕ್ಕಾಗಿ ಆತನ ವಿರುದ್ಧ ಮತ್ತೊಂದು ಕೇಸ್ ದಾಖಲಿಸಲು ದಕ್ಷಿಣ ವಿಭಾಗದ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಸಿಸಿಟಿವಿ ಸಾಕ್ಷಿ ನೀಡಿದ ಜೈಲಾಧಿಕಾರಿಗಳು

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಹಾಗೂ ಆತನ ಬೆಂಬಲಿಗರ ವಿರುದ್ಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

“ಪುನೀತ್ ಕೆರೆಹಳ್ಳಿ ಮೇಲೆ ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ, ನ್ಯಾಯಕ್ಕಾಗಿ ಆತ ಜೈಲಿನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ವೈರಲ್ ಆಗಿದ್ದವು. ಈ ಬಗ್ಗೆ ಅನುಮಾನಗೊಂಡ ಪೊಲೀಸರು ಜೈಲಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ಕೋರಿದ್ದರು. ಪರಿಶೀಲನೆ ನಡೆಸಿದ ಜೈಲಾಧಿಕಾರಿಗಳು, ಪುನೀತ್ ಕೆರೆಹಳ್ಳಿ ಯಾವುದೇ ಉಪವಾಸ ಸತ್ಯಾಗ್ರಹ ನಡೆಸದೆ ನಿಯಮಿತವಾಗಿ ಊಟ ಸೇವಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ಸಹಿತ ದಕ್ಷಿಣ ವಿಭಾಗದ ಡಿಸಿಪಿಗೆ ಮಾಹಿತಿ ನೀಡಿದ್ದಾರೆ.

ಸುಳ್ಳು ಸುದ್ದಿ ಹಾಗೂ ದಾರಿ ತಪ್ಪಿಸುವ ಪೋಸ್ಟ್ ಹಬ್ಬಿಸಿದ ಹಿನ್ನೆಲೆಯಲ್ಲಿ ಬಸವನಗುಡಿ ಠಾಣೆ ಪೊಲೀಸರು ‘ಸಂವಾದ’ ಎಂಬ ಸೋಶಿಯಲ್ ಮೀಡಿಯಾ ಪುಟ ಸೇರಿದಂತೆ 14 ಇನ್‌ಸ್ಟಾಗ್ರಾಮ್ ಹಾಗೂ 9 ಫೇಸ್‌ಬುಕ್ ಅಕೌಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಖಾತೆದಾರರಿಗೆ ಪೊಲೀಸರು ನೋಟಿಸ್ ಜಾರಿ ಮಾಡುತ್ತಿದ್ದಾರೆ.

ಬಾಂಡ್ ಉಲ್ಲಂಘನೆ: ಮತ್ತೊಂದು ಪ್ರಕರಣಕ್ಕೆ ಸಿದ್ಧತೆ

ಈ ನಡುವೆ, ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಕಳೆದ ವರ್ಷ ದಕ್ಷಿಣ ವಿಭಾಗದ ಪೊಲೀಸರ ಮುಂದೆ “ಯಾವುದೇ ಅಪರಾಧ ಅಥವಾ ಶಾಂತಿಭಂಗ ಪ್ರಕರಣಗಳಲ್ಲಿ ಭಾಗಿಯಾಗುವುದಿಲ್ಲ” ಎಂದು 2027ರ ಅವಧಿಯವರೆಗೆ 10 ಲಕ್ಷ ರೂ. ಮೊತ್ತದ ಬಾಂಡ್ ಬರೆದುಕೊಡಲಾಗಿತ್ತು. ಆದಾಗ್ಯೂ, ಬಾಂಡ್ ಅವಧಿ ಚಾಲ್ತಿಯಲ್ಲಿರುವಾಗಲೇ ಬಸವನಗುಡಿ ವ್ಯಾಪ್ತಿಯಲ್ಲಿ ಗಲಾಟೆ ನಡೆಸಿ ಬಾಂಡ್ ಷರತ್ತುಗಳನ್ನು ಉಲ್ಲಂಘಿಸಿರುವ ಕಾರಣ, ಆತನ ವಿರುದ್ಧ ಬಾಂಡ್ ಉಲ್ಲಂಘನೆ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್