AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಸರ ಕದಿಯಲು ಬಂದ ಕಳ್ಳರು, ಸಾಧ್ಯವಾಗದಿದ್ದಾಗ ಮಹಿಳೆ ಕೈ ಕತ್ತರಿಸಿ ಪರಾರಿಯಾಗಿದ್ದವರು ಅರೆಸ್ಟ್

ಸರ ಕಳ್ಳತನಕ್ಕೆ ಬಂದ ಖದೀಮರ ವಿರುದ್ಧ ಹೋರಾಟಲು ನಿಂತ ಮಹಿಳೆ ಕೈ ಕತ್ತರಿಸಿ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿನ್ನದ ಸರ ಕದಿಯಲು ಬಂದ ಕಳ್ಳರು, ಸಾಧ್ಯವಾಗದಿದ್ದಾಗ ಮಹಿಳೆ ಕೈ ಕತ್ತರಿಸಿ ಪರಾರಿಯಾಗಿದ್ದವರು ಅರೆಸ್ಟ್
ಫ್ರಾಂಕ್ಲಿನ್, ಮನೋಜ್ ಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on:Mar 26, 2023 | 9:49 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆ ಸರ ಕದಿಯಲು ಬಂದ ಕಳ್ಳರು(Chain Snatching) ಮಹಿಳೆಯ ಕೈಯನ್ನೇ ಕತ್ತರಿಸಿರುವ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳನ್ನು(Puttenahalli Police) ಪತ್ತೆ ಮಾಡಿ ಬಂಧಿಸಿದ್ದಾರೆ. ಮಾರ್ಚ್ 6 ರಂದು ಪುಟ್ಟೇನಹಳ್ಳಿ ಲೇಕ್ ಬಳಿ ನಡೆದಿದ್ದ ಘಟನೆ ಸಂಬಂಧಿಸಿ ಪೊಲೀಸರು ಈಗ ಆರೋಪಿಗಳನ್ನು ಬಂಧಿಸಿದ್ದಾರೆ.

ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆ ಆಭರಣದ ಮೇಲೆ ಕಣ್ಣಾಕಿದ ಖದೀಮರು ಬೈಕ್​ನಲ್ಲಿ ಫಾಲೋ ಮಾಡಿಕೊಂಡು ಬಂದು ಚಿನ್ನ ಎಗರಿಸಲು ಸ್ಕೆಚ್ ಹಾಕಿದ್ದರು. ಈ ವೇಳೆ ಪ್ರತಿರೋಧ ಒಡ್ಡಿದಕ್ಕೆ ಮಹಿಳೆಯ ಕೈ ಕತ್ತರಿಸಿದ್ದರು. ಆದರೂ ಚಿನ್ನದ ಸರ ಕಳ್ಳರ ಪಾಲಾಗಲು ಬಿಡದ ಮಹಿಳೆ ನೋವಿನಲ್ಲೂ ಖದೀಮರ ವಿರುದ್ಧ ಹೋರಾಡಿದ್ದರು. ಬಳಿಕ ಚಿನ್ನದ ಸರ ತಮಗೆ ಸಿಗುವುದಿಲ್ಲ ಎಂದು ಕೊಂಡ ಖದೀಮರು ಬರಿಗೈಯಲ್ಲಿ ಎಸ್ಕೇಪ್ ಆಗಿದ್ದದ್ದರು. ಸದ್ಯ ಈಗ ಪುಟ್ಟೇನಹಳ್ಳಿ ಪೊಲೀಸರು ಖದೀಮರನ್ನು ಬಂಧಿಸಿದ್ದಾರೆ. ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಬಂಧಿತ ಆರೋಪಿಗಳು. ವಿಚಾರಣೆ ವೇಳೆ ಮನೋಜ್ ಈ ಹಿಂದೆ ಕೊಲೆ ಕೇಸ್ ನಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ; ನಾಲ್ವರಿಂದ ಅತ್ಯಾಚಾರ ಶಂಕೆ

ಮದುವೆಯಾದ ಒಂಬತ್ತೇ ತಿಂಗಳಲ್ಲಿ ಗೃಹಿಣಿ ಶವ ಬಾವಿಯಲ್ಲಿ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ

ಚಾಮರಾಜನಗರ: ಮಗಳ ಮೃತದೇಹದ ಎದುರು ಆಕ್ರಂಧನ ವ್ಯಕ್ತಪಡಿಸುತ್ತಿರುವ ಮೃತ ಶಾಲಿನಿ (22) ತಂದೆ ಶಾಂತಪ್ಪ ಮತ್ತು ಚಿಕ್ಕಮ್ಮ ಚಿನ್ನಮ್ಮ. ಮರಣೋತ್ತರ ಪರೀಕ್ಷೆ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ, ಶವ ಪರೀಕ್ಷೆಗೆ ಅನುವು ಮಾಡಿಕೊಡಿ ಎನ್ನುತ್ತಿರುವ ಪೊಲೀಸರು. ಇದೆಲ್ಲ ಕಂಡುಬಂದಿದ್ದು ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ. ಕಳೆದ ಒಂಬತ್ತು ತಿಂಗಳ ಹಿಂದೆ ಮಾದಾಪಟ್ಟಣ ಗ್ರಾಮದ ಶಾಲಿನಿ ಅವರನ್ನ ಮೂಡ್ನಾಕೂಡು ಗ್ರಾಮದ ಮಹೇಶ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಸರಳ ಮದುವೆ ಮಾಡಿಕೊಟ್ಟಿದ್ದ ಶಾಂತಪ್ಪ 50 ಸಾವಿರ ರೂಪಾಯಿ ವರದಕ್ಷಿಣೆ ಸಹ ನೀಡಿದ್ದನಂತೆ. ಆದರೆ ಪತಿ ಮಹೇಶ್ ಹಾಗೂ ಆತನ ಪೋಷಕರು ಶಾಲಿನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಂತೆ. ಈ ವಿಚಾರವಾಗಿ ಆಗಾಗ ಗಲಾಟೆಯಾಗಿ ಶಾಲಿನಿ ತವರು ಮನೆಗೆ ಹೋಗಿದ್ದಳಂತೆ. ಆದರೆ ಶನಿವಾರ ಬೆಳಗ್ಗೆ ಗ್ರಾಮದ ತಮ್ಮದೇ ಜಮೀನಿನ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮೃತಳ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:46 am, Sun, 26 March 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ