ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ
ಇದು ಮೂರನೇ ಭಾರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತಿದ್ದು, ಪರೀಕ್ಷಾ ಕೇಂದ್ರಗಳಿಗೆ ಬಂದು ವಿದ್ಯಾರ್ಥಿಗಳು ವಾಪಸ್ ಹೋಗುತ್ತಿದ್ದಾರೆ.
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇವತ್ತು ನಡೆಯಬೇಕಿದ್ದ ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆ ರದ್ದುಪಡಿಸಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಇದು ಮೂರನೇ ಭಾರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತಿದ್ದು, ಪರೀಕ್ಷಾ ಕೇಂದ್ರಗಳಿಗೆ ಬಂದು ವಿದ್ಯಾರ್ಥಿಗಳು ವಾಪಸ್ ಹೋಗುತ್ತಿದ್ದಾರೆ. ಎರಡು ಪತ್ರಿಕೆಗಳು ಸೋರಿಕೆ ಹಿನ್ನೆಲೆ ಮೊದಲ ಸೆಮಿಸ್ಟರ್ನ ಬಿಕಾಂನ ಪ್ರಿನ್ಸಿಪಲ್ ಆಫ್ ಮಾರ್ಕೆಟಿಂಗ್ ಮತ್ತು ಬಿಸಿಎಯ ಪದವಿಯ ಮ್ಯಾಥಮೆಟಿಕಲ್ ಫೌಂಡೇಶನ್ ಪತ್ರಿಕೆಗಳು ಡಾಮಿನಿಕ್ ಪರೀಕ್ಷಾ ವಿಭಾಗದ ಕುಲಸಚಿವರು ಮುಂದೂಡಿದ್ದಾರೆ.
ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 10 ಆರೋಪಿಗಳ ಬಂಧನ
ರಾಮನಗರ: ಪಿಎಸ್ಐ ಅಕ್ರಮ ನೇಮಕಾತಿ ಹಗರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಅದು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಆಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನ ಪರೀಕ್ಷೆ ಆರಂಭಕ್ಕೂ ಮುನ್ನವೇ ವಾಟ್ಸ್ ಅಪ್ ಮೂಲಕ ಕಳುಹಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟು ಇದೀಗ ಶಿಕ್ಷಕರು ಸೇರಿದಂತೆ ಕೆಲವರು ಇದೀಗ ಪೊಲೀಸರ ಅತಿಥಿಯಾಗಿದ್ದರು. ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಗಡಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ರಾಮನಗರ ಜಿಲ್ಲೆ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಗಡಿ ಕೆಂಪೇಗೌಡ ಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ಶಿಕ್ಷಕರಾದ ಕೃಷ್ಣಮೂರ್ತಿ, ಅರ್ಜುನ್, ನಾಗರಾಜ್, ಅಲೀಂ, ಶ್ರೀನಿವಾಸ್, ಲೋಕೇಶ್ ಸುಬ್ರಹ್ಮಣ್ಯ, ಪತ್ರಕರ್ತ ವಿಜಯ್ ಬಂಧಿತ ಆರೋಪಿಗಳು.
SSLC ಪರೀಕ್ಷೆ ವೇಳೆ ಎಲ್ಲಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಸೋರಿಕೆ ಮಾಡಲಾಗುತ್ತಿತ್ತು. ನಂತರ ಶಿಕ್ಷಕರಿಂದ ಪ್ರಶ್ನೆಗಳಿಗೆ ಉತ್ತರ ಬರೆಸಲಾಗುತ್ತಿತ್ತು. ಉತ್ತರಗಳನ್ನು ರಂಗೇಗೌಡನ ವಾಟ್ಸಾಪ್ಗೆ ಕಳಿಸಲಾಗುತ್ತಿತ್ತು. ಬಳಿಕ ಉತ್ತರಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ರಂಗೇಗೌಡ ಭೇಟಿ ನೀಡುತ್ತಿದ್ದರು. ಪರೀಕ್ಷಾ ಕೇಂದ್ರಕ್ಕೆ ಹೋಗಿ ರಂಗೇಗೌಡ ಉತ್ತರ ಬರೆಸುತ್ತಿದ್ದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.