ಬೆಂಗಳೂರು ವಿವಿ ಪರೀಕ್ಷಾ ಭವನದ ಮುಂದೆ ಸರತಿ ಸಾಲು; 2 ವಾರಗಳಿಂದ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳ ಅಲೆದಾಟ

ರಾಮನಗರ, ಬಂಗಾರಪೇಟೆ, ಕೋಲಾರ, ಬಿಡದಿ, ಚಿಂತಾಮಣಿ ಭಾಗದಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡೆಹಿಡಿದಿರುವುದು ಸೇರಿ ಹಲವು ಸಮಸ್ಯೆಗಳಿಗೆ ಬೆಂಗಳೂರು ವಿವಿಯತ್ತ ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಬೆಂಗಳೂರು ವಿವಿ ಪರೀಕ್ಷಾ ಭವನದ ಮುಂದೆ ಸರತಿ ಸಾಲು; 2 ವಾರಗಳಿಂದ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳ ಅಲೆದಾಟ
ಪರೀಕ್ಷಾ ಭವನದ ಮುಂದೆ ಸರತಿ ಸಾಲು
Follow us
TV9 Web
| Updated By: preethi shettigar

Updated on:Jan 24, 2022 | 7:36 PM

ಬೆಂಗಳೂರು: 2 ವಾರಗಳಿಂದ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳು(Students) ಪರದಾಟ ನಡೆಸುತ್ತಿರುವ ಘಟನೆ ಬೆಂಗಳೂರು ವಿವಿ ಪರೀಕ್ಷಾ ಭವನದಲ್ಲಿ ನಡೆದಿದೆ. ತಾಂತ್ರಿಕ ದೋಷದ ನೆಪವೊಡ್ಡುತ್ತಿರುವ ಬೆಂಗಳೂರು ವಿಶ್ವವಿದ್ಯಾಲಯ, ನಾಳೆ ಬನ್ನಿ ಎಂದು ಹೇಳಿ ವಿದ್ಯಾರ್ಥಿಗಳನ್ನು ಕಳಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಅಂಕಪಟ್ಟಿಗಾಗಿ (Marks card) ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸಾಮಾಜಿಕ ಅಂತರವಿಲ್ಲದೆ ಗುಂಪು ಗುಂಪಾಗಿ ವಿದ್ಯಾರ್ಥಿಗಳು ನಿಂತಿದ್ದು, ಶಿಕ್ಷಣ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ, ಬಂಗಾರಪೇಟೆ, ಕೋಲಾರ, ಬಿಡದಿ, ಚಿಂತಾಮಣಿ ಭಾಗದಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡೆಹಿಡಿದಿರುವುದು ಸೇರಿ ಹಲವು ಸಮಸ್ಯೆಗಳಿಗೆ ಬೆಂಗಳೂರು ವಿವಿಯತ್ತ(University) ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಧಾರವಾಡದ ಶಾಲೆಯೊಂದರಲ್ಲಿ ಕೊವಿಡ್ ಸ್ಪೋಟ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಅಮೃತೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 3 ಜನ ಶಿಕ್ಷಕರು ಮತ್ತು 29 ವಿದ್ಯಾರ್ಥಿಗಳಿಗೆ ಕೊವಿಡ್ ದೃಢಪಟ್ಟಿದೆ. ಸದ್ಯ ಕಾಲೇಜನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ಕಾಲೇಜಿನಲ್ಲಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇಂದಿನಿಂದ ಜನವರಿ 30 ರವರೆಗೆ ಕಾಲೇಜು ಸೀಲ್ ಡೌನ್ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಮಂಜುನಾಥ್ ಅಮಾಸೆ ಹೇಳಿದ್ದಾರೆ.

ಕೋಲಾರ: ವಿವಾದಕ್ಕೆ ಕಾರಣವಾಯ್ತು ಸರ್ಕಾರಿ ಶಾಲಾ ಕೊಠಡಿಯಲ್ಲಿ ಮಾಡಿದ ನಮಾಜ್​

ಸರ್ಕಾರಿ ಶಾಲೆಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳು ನಮಾಜ್​ ಮಾಡಿರುವ ಘಟನೆಯೊಂದು ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ಬಳೆನಂಜಪ್ಪ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶುಕ್ರವಾರ ಅಂದರೆ ಜನವರಿ 20 ರಂದು ಮಧ್ಯಾಹ್ನ ಬಳೆನಂಜಪ್ಪ ಸರ್ಕಾರಿ ಶಾಲೆಯಲ್ಲಿದ್ದ ಕೆಲವು ಮುಸ್ಲಿಂ ಜನಾಂಗಕ್ಕೆ ಸೇರಿದ ಮಕ್ಕಳು ಶಾಲೆಯ ಕೊಠಡಿಯೊಂದರಲ್ಲಿ ನಮಾಜ್​ ಮಾಡುತ್ತಿದ್ದಾಗ ಅದನ್ನು ಸ್ಥಳೀಯರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದು, ಈ ವಿಡಿಯೋವನ್ನು​ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅದೇ ವಿಡಿಯೋ ಮುಳಬಾಗಿಲು ನಗರದಲ್ಲಿ ಸಾಕಷ್ಟು ವಿವಾದಕ್ಕೂ ಕಾರಣವಾಯಿತು. ಶನಿವಾರ ಬೆಳಿಗ್ಗೆ ಹೊತ್ತಿಗೆ ಅದೇ ಬಳೆನಂಜಪ್ಪ ಶಾಲೆಯ ಬಳಿ ಹತ್ತಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಸ್ಥಳೀಯರು ಶಾಲೆಯಲ್ಲಿ ನಮಾಜ್​ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಮಾಜ್​ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶನಿವಾರ (ಜನವಿರಿ 21) ಬೆಳಿಗ್ಗೆ ಹತ್ತಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಬಳೆನಂಜಪ್ಪ ಸರ್ಕಾರಿ ಶಾಲೆಗೆ ಭೇಟಿಕೊಟ್ಟು ಸರ್ವಧರ್ಮ ಸಮನ್ವಯ ಸಾರಬೇಕಿದ್ದ ಸ್ಥಳದಲ್ಲಿ ಈ ರೀತಿ ಪ್ರಾರ್ಥನೆ ಮಾಡಿರುವುದು ತಪ್ಪು ಎಂದು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಉಮಾದೇವಿ ಅವರ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ.

ಮುಖ್ಯ ಶಿಕ್ಷಕಿ ಅವರ ಕಚೇರಿಗೆ ಬಂದ ಹತ್ತಾರು ಕಾರ್ಯಕರ್ತರು ನಮಾಜ್​ ಮಾಡಲು ಅವಕಾಶ ಮಾಡಿಕೊಟ್ಟ ಮುಖ್ಯಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಬಂದ ಡಿವೈಎಸ್​ಪಿ ಗಿರಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ನಂತರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿ ಕಳಿಸಿದ್ದಾರೆ.

ಇದನ್ನೂ ಓದಿ:

ಬೆಂಗಳೂರು ವಿಶ್ವವಿದ್ಯಾಲಯದಿಂದ ಮಹಾ ಯಡವಟ್ಟು! 70 ಅಂಕದ ಪರೀಕ್ಷೆಗೆ 73 ಅಂಕ ನೀಡಿದ ವಿವಿ

ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಖಂಡಿಸಿ ಇಂದು ಇಡೀ ದಿನ ಕರ್ನಾಟಕ ರಕ್ಷಣಾ ವೇದಿಕೆಯಿಂದ ಟ್ವಿಟರ್ ಅಭಿಯಾನ!

Published On - 7:25 pm, Mon, 24 January 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ