ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪ; ಪ್ರಕರಣದ ತನಿಖೆ ಎಸಿಬಿಗೆ ವಹಿಸಿದ ಕಂದಾಯ ಸಚಿವ
261 ಎಕರೆ ಸರ್ಕಾರಿ ಭೂಮಿ ಪೈಕಿ 200 ಎಕರೆ ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಹಂಚಿಕೆಮಾಡಿದ್ದ ಭೂಮಿಯಲ್ಲಿ ಭೂಮಾಲೀಕರನ್ನು ಹೊರಹಾಕಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಆರೋಪ ಕೇಳಿಬಂದಿದೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಭೂಕಬಳಿಕೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಹೊಸಕೋಟೆ ತಾಲೂಕಿನ ಸರ್ವೆ ನಂಬರ್ 9 ರಲ್ಲಿ ಭೂಮಿ ಕಬಳಿಕೆ ಮಾಡಲಾಗಿದೆ. 261 ಎಕರೆ ಸರ್ಕಾರಿ ಭೂಮಿ ಪೈಕಿ 200 ಎಕರೆ ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಹಂಚಿಕೆಮಾಡಿದ್ದ ಭೂಮಿಯಲ್ಲಿ ಭೂಮಾಲೀಕರನ್ನು ಹೊರಹಾಕಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಆರೋಪ ಕೇಳಿಬಂದಿದೆ.
ಪರಿಷತ್ನಲ್ಲಿ ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಹೇಳಿಕೆ ನೀಡಿದ್ದಾರೆ. ಭೂಕಬಳಿಕೆ ಆಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಬಂದಿದೆ. ವಿಧಾನಪರಿಷತ್ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ. ಎಸ್ಸಿ, ಎಸ್ಟಿಯವರಿಗೆ ಸರ್ಕಾರ ನೀಡಿದ್ದ ಭೂಮಿ ಕಬಳಿಸಿದ್ದಾರೆ. ಭೂಕಬಳಿಕೆ ಪ್ರಕರಣವನ್ನು ಎಸಿಬಿ ತನಿಖೆಗೆ ವಹಿಸಲಾಗಿದೆ.
ಇದನ್ನೂ ಓದಿ: ಸಂಧಾನ ಸಭೆ ವಿಫಲ: ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ವಿಪಕ್ಷ ಕಾಂಗ್ರೆಸ್ ನಿರ್ಧಾರ