“ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು!” -ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ

|

Updated on: Jun 02, 2024 | 1:42 PM

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ₹187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್​ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು! -ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ
ಆರ್​. ಅಶೋಕ್​
Follow us on

ಬೆಂಗಳೂರು, ಜೂನ್.02: ವಾಲ್ಮಿಕಿ ನಿಗಮದ ಹಗರಣ ತೆಲಂಗಾಣಕ್ಕೆ ಲಿಂಕ್ ಇದೆ ಎಂಬ ಬಗ್ಗೆ ಸುದ್ದಿ ಹರಿದಾಡುತ್ತಿದ್ದು ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಟ್ವೀಟ್ ಮಾಡಿ ಆರೋಪಗಳ ಸುರಿಮಳೆಗೈದಿದ್ದಾರೆ. ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್​ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ. ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆರ್.ಅಶೋಕ್ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ​, ಸೋನಿಯಾ ಗಾಂಧಿಗೂ ಪಾಲು ಸಿಕ್ಕಿದೆ: ಅಶೋಕ್ ಗಂಭೀರ ಆರೋಪ​

ಕರ್ನಾಟಕದ ಜನತೆಯಲ್ಲಿ ಮೂಡಿರುವ ಈ ಅನುಮಾನ ನಿವಾರಿಸಲು, ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ₹187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಇನ್ನು ಈ ಅಕ್ರಮ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಮೂಲಕ ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ‌‌ ವರದಿ ನೀಡಲಿದೆ. ಅಗತ್ಯ ಬಿದ್ದರೆ ಸಿಬಿಐಗೂ ಕೊಡೋಣ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:33 pm, Sun, 2 June 24