AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ!

ರಾಜ್ಯ ಸರ್ಕಾರವು 20 ಕೆಎಎಸ್ ಅಧಿಕಾರಿಗಳಿಗೆ ನೀಡಿದ ಬಡ್ತಿ ಪಟ್ಟಿಯಲ್ಲಿ ನಿವೃತ್ತರಾಗಿ ಸಂನ್ಯಾಸ ಸ್ವೀಕರಿಸಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಭಾರಿ ವಿವಾದ ಸೃಷ್ಟಿಸಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಇದನ್ನು ಸರ್ಕಾರದ ಗಂಭೀರ ಆಡಳಿತಾತ್ಮಕ ಎಡವಟ್ಟು ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅದಕ್ಷತೆ ಮತ್ತು ಅಸಮರ್ಥತೆಯ ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ!
ನಿವೃತ್ತ ಅಧಿಕಾರಿ ಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ!
ಭಾವನಾ ಹೆಗಡೆ
|

Updated on:Feb 14, 2026 | 3:00 PM

Share

ಬೆಂಗಳೂರು, ಫೆಬ್ರವರಿ 14: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R. Ashoka) ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಎಂದು ಟೀಕಿಸಿದ್ದಾರೆ.

ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸಂನ್ಯಾಸ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ ಎಂದು ಅಶೋಕ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಆರ್.ಅಶೋಕ್ ಎಕ್ಸ್ ಪೋಸ್ಟ್ ಇಲ್ಲಿದೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ಸಾಮರ್ಥ್ಯವೇ ಪ್ರಶ್ನಾರ್ಥಕವಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಫೈಲುಗಳಿಗೆ ಸಹಿ ಮಾಡುವ ಮುನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆಯೇ ಎಂಬ ಅನುಮಾನ ವ್ಯಕ್ತಪಡಿಸಿರುವ ಅಶೋಕ್, ಸೇವೆಯಲ್ಲಿ ಇರುವವರು ಯಾರು, ನಿವೃತ್ತರಾದವರು ಯಾರು ಎಂಬ ಮೂಲಭೂತ ಮಾಹಿತಿಯೂ ಸರ್ಕಾರಕ್ಕೆ ತಿಳಿದಿಲ್ಲದಿರುವುದು ದುರಂತವೆಂದಿದ್ದಾರೆ.

ಇದು ಕೇವಲ ಒಂದು ಆಕಸ್ಮಿಕ ತಪ್ಪಲ್ಲ, ಆಡಳಿತ ವ್ಯವಸ್ಥೆಯ ಕುಸಿತದ ಸೂಚನೆ ಎಂದು ಅಶೋಕ್ ಆರೋಪಿಸಿದ್ದಾರೆ. ಮುಂದೆಯೂ ಇಂತಹ ಗಂಭೀರ ಎಡವಟ್ಟುಗಳು ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಅಶೋಕ್, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:59 pm, Sat, 14 February 26

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?