ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ, ಸರ್ಕಾರ ರೈತರ ಜೊತೆ ಸದಾ ಇರುತ್ತದೆ: ಕಂದಾಯ ಸಚಿವ ಆರ್.ಅಶೋಕ್
ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆ ಅಡಿ 2 ಸಾವಿರ ಪಿಂಚಣಿ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ಕಾರ್ಡ್ ನೀಡಲಾಗುತ್ತದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಶಿಕ್ಷಣ, ಪಿಜಿ ಪದವಿ ಮುಂದುವರಿಸಲು ಕ್ರಮವಹಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ನ ಕಲಾಪ ಆರಂಭಗೊಂಡಿದ್ದು, ನೂತನ ವಿಧಾನ ಪರಿಷತ್ ಬಿಜೆಪಿ ಸದಸ್ಯ ತುಳಸಿ ಮುನಿರಾಜು ಗೌಡ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ್ದಾರೆ. ಇನ್ನು ಮುನಿರಾಜು ಗೌಡ ಭಗವಂತ ಮತ್ತು ಸತ್ಯ ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಆರಂಭವಾಗಿದ್ದು, ಕಲಾಪದಲ್ಲಿ ಚಂದ್ರಶೇಖರ ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ 3 ವರ್ಷದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆ ಹೆಚ್ಚಾಗಿದೆ. 3 ವರ್ಷದಲ್ಲಿ ಸುಮಾರು 366 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆ ಅಡಿ 2 ಸಾವಿರ ಪಿಂಚಣಿ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಶಿಕ್ಷಣ, ಪಿಜಿ ಪದವಿ ಮುಂದುವರಿಸಲು ಕ್ರಮವಹಿಸಲಾಗಿದೆ. ಈಗಾಗಲೇ 357 ರೈತರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಉಳಿದವರಿಗೆ ಒಂದು ವಾರದಲ್ಲಿ ಪರಿಹಾರ ನೀಡಲಾಗುತ್ತದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ. ಸರ್ಕಾರ ರೈತರ ಜೊತೆ ಸದಾ ಇರುತ್ತದೆ ಎಂದು ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸುಮಾರು 29 ಸಾವಿರ ಹಳ್ಳಿಗಳಿವೆ. ಈ ಪೈಕಿ 21,336 ಗ್ರಾಮಗಳಲ್ಲಿ ಸ್ಮಶಾನಗಳು ಇವೆ. ಉಳಿದ 7,069 ಗ್ರಾಮಗಳಲ್ಲಿ ಸ್ಮಶಾನ ಇಲ್ಲ. ಎಲ್ಲಾ ಗ್ರಾಮಗಳಲ್ಲಿ ಸ್ಮಶಾನ ಇರಬೇಕು ಎಂಬುವುದು ನಮ್ಮ ಮೊದಲ ಆದ್ಯತೆ. ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಲಾಗಿದೆ. ಸ್ಮಶಾನಗಳಿಗಾಗಿ ಜಾಗ ಖರೀದಿಗೆ 10 ಕೋಟಿ ಮೀಸಲು ಜಾಗ ಖರೀದಿಸಿ ಸ್ಮಶಾನ ಮಾಡಲಾಗುವುದು ಎಂದು ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
2020-21 ನೇ ಸಾಲಿನಲ್ಲಿ ಸ್ಮಶಾನ ಇಲ್ಲದೆ ಇರುವ ಕಡೆ ಜಾಗ ಖರೀದಿಗೆ 10 ಕೋಟಿ ಮೀಸಲಿಡಲಾಗಿದೆ. ಪ್ರತಿ ಗ್ರಾಮದಲ್ಲಿ ಸ್ಮಶಾನ ನಿರ್ಮಾಣ ಮಾಡುವ ಕೆಲಸ ಸರ್ಕಾರ ಮಾಡುತ್ತದೆ. ಜಾಗ ಇಲ್ಲದ ಕಡೆ ಜಾಗ ಖರೀದಿ ಮಾಡಿ ಸ್ಮಶಾನ ನಿರ್ಮಾಣ ಮಾಡಲಾಗುತ್ತದೆ ಎಂದು ವಿಧಾನ ಪರಿಷತ್‌ನಲ್ಲಿ ತಳವಾರ್ ಸಾಬಣ್ಣ ಪ್ರಶ್ನೆಗೆ ಸಚಿವ ಅಶೋಕ್ ಉತ್ತರ ನೀಡಿದ್ದಾರೆ.
ಇದನ್ನೂ ಓದಿ: ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ
ಇದನ್ನೂ ಓದಿ: Assembly Elections 2021: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು? ಸಮೀಕ್ಷೆ ಏನು ಹೇಳುತ್ತಿದೆ?