ಮೊಬೈಲ್​​ ಟಾರ್ಚ್​​ ಬೆಳಕಲ್ಲಿ ಬಸ್​​ ಚಾಲನೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ

ಧಾರವಾಡದ ಕುಂದಗೋಳದಲ್ಲಿ ಬಸ್ ಹೆಡ್‌ಲೈಟ್ ಕೈಕೊಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ 15 ಕಿ.ಮೀ ಬಸ್ ಚಲಾಯಿಸಿದ ಘಟನೆ ಖಂಡಿಸಿ, ಪ್ರಯಾಣಿಕರ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಿನ್ನೆ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯಿಂದ ಅತ್ತಿಗೇರಿಗೆ ಹೊರಟಿದ್ದ ಬಸ್​​ನ ಹೆಡ್‌ಲೈಟ್ ತಾಂತ್ರಿಕ ದೋಷದಿಂದ ಕುಂದಗೋಳ ತಾಲೂಕಿನ ಸಂಶಿ ಬಳಿ ಬಂದ್​​ ಆಗಿತ್ತು. ಪ್ರಯಾಣಿಕರನ್ನು ಅರ್ಧಕ್ಕೆ ಇಳಿಸಲು ಸಾಧ್ಯವಾಗದ ಕಾರಣ, ಪ್ರಯಾಣಿಕರ ಮೊಬೈಲ್​​ ಟಾರ್ಚ್‌ ಬೆಳಕಿನಲ್ಲಿ ಚಾಲಕ ಅತ್ತಿಗೇರಿವರೆಗೆ ಬಸ್ ಚಲಾಯಿಸಿದ್ದರು.

ಮೊಬೈಲ್​​ ಟಾರ್ಚ್​​ ಬೆಳಕಲ್ಲಿ ಬಸ್​​ ಚಾಲನೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ
ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ
Image Credit source: Tv9 Kannada and PTI
Edited By:

Updated on: Sep 06, 2026 | 11:47 AM

ಬೆಂಗಳೂರು/ಧಾರವಾಡ, ಸೆಪ್ಟೆಂಬರ್​​ 06: ಬಸ್​​ನ ಹೆಡ್​​ಲೈಟ್​​ ಕೆಟ್ಟ ಪರಿಣಾಂ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಿನ ಸಹಾಯದಿಂದ ಚಾಲಕ ಸುಮಾರು 15 ಕಿ.ಮೀ. ದೂರ ಬಸ್ ಚಲಾಯಿಸಿರುವ ಘಟನೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ್​​ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್​​ ಪೋಸ್ಟ್​​ ಮಾಡಿರುವ ಅವರು, ಕಲಬುರಗಿಯಿಂದ ಚಿಂಚೋಳಿಗೆ ಪ್ರಯಾಣಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (KKRTC) ಬಸ್‌ನ ಹೆಡ್‌ಲೈಟ್ ಕೆಟ್ಟುಹೋಗಿ, ಮೊಬೈಲ್ ಫೋನ್ ಟಾರ್ಚ್ ಬೆಳಕಿನಲ್ಲಿ ಚಾಲಕ ಬಸ್ ಚಲಾಯಿಸುವ ಪರಿಸ್ಥಿತಿ ಬಂದೊದಗಿತ್ತು. ಈ ಘಟನೆ ಮಾಸುವ ಮುನ್ನವೇ ಧಾರವಾಡ ಜಿಲ್ಲೆಯ ಕುಂದಗೋಳದಲ್ಲೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ (NWKRTC) ಬಸ್‌ನ ಹೆಡ್‌ಲೈಟ್ ಕೈಕೊಟ್ಟು, ಕತ್ತಲಿನಲ್ಲಿ ಮೊಬೈಲ್ ಟಾರ್ಚ್ ಆಸರೆಯಲ್ಲೇ ಚಾಲಕ ಪ್ರಯಾಣಿಕರನ್ನು ತಲುಪಿಸಬೇಕಾಯಿತು. ಪ್ರಯಾಣಿಕರ ಜೀವವನ್ನು ಪಣಕ್ಕಿಟ್ಟು ಬಸ್ಸುಗಳನ್ನು ರಸ್ತೆಗೆ ಇಳಿಸುತ್ತಿರುವ ಈ ನಾಲಾಯಕ್ ಕಾಂಗ್ರೆಸ್​​ ಸರ್ಕಾರಕ್ಕೆ ಜನಸಾಮಾನ್ಯರ ಭದ್ರತೆಯ ಬಗ್ಗೆ ಕನಿಷ್ಠ ಕಾಳಜಿಯಾದರೂ ಇದೆಯೇ? ಎಂದವರು ಪ್ರಶ್ನಿಸಿದ್ದಾರೆ.

‘ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲವೇ?’

ಧಾರವಾಡ ಜಿಲ್ಲಾ ಉಸ್ತುವಾರ ಸಚಿವರಾಗಿರುವ ಸಂತೋಷ್​​ ಲಾಡ್​​ ಅವರೇ, ನಿಮ್ಮ ಉಸ್ತುವಾರಿ ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆ ಇಷ್ಟು ದಯನೀಯವಾಗಿದೆ. ಮೈಕು ಸಿಕ್ಕರೆ ಸಾಕು ದೇಶ-ವಿದೇಶದ ಉಸಾಬರಿ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ನಿಮಗೆ ಜನಸಾಮಾನ್ಯರಿಗೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸಲು ಏಕೆ ಸಾಧ್ಯವಾಗುತ್ತಿಲ್ಲ? ಸಾರಿಗೆ ಸಚಿವ ಭೈರತಿ ಸುರೇಶ್​​ ಅವರೇ, ಬಸ್ಸುಗಳ ಸೂಕ್ತ ನಿರ್ವಹಣೆ ಇಲ್ಲದೆ ಚಾಲಕರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುವಂತಾಗಿದೆ. ನಿಮ್ಮ ದಿವಾಳಿ ಆಡಳಿತಕ್ಕೆ ಜನರು ಪ್ರಾಣಾಪಾಯಕ್ಕೆ ಸಿಲುಕಬೇಕೆ? ಸಿಎಂ ಡಿಕೆ ಶಿವಕುಮಾರ್​​ ಅವರೇ, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ನೀಡಿದ ಮಾತ್ರಕ್ಕೆ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲವೇ? ಉಚಿತ ಪ್ರಯಾಣ ನೀಡುತ್ತಿದ್ದೇವೆ ಎಂಬ ನೆಪದಲ್ಲಿ ಕನಿಷ್ಠ ರಕ್ಷಣೆ ಇಲ್ಲದ ಬಸ್ಸುಗಳನ್ನು ನೀಡಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಎಂದು ಅಶೋಕ್​​ ಪ್ರಶ್ನಿಸಿದ್ದಾರೆ. ಕೂಡಲೇ ಹಾಳಾಗಿರುವ ಎಲ್ಲಾ ಸಾರಿಗೆ ಬಸ್ಸುಗಳನ್ನು ತಪಾಸಣೆಗೊಳಪಡಿಸಿ, ದುರಸ್ತಿಪಡಿಸಬೇಕು. ಇಲ್ಲವಾದಲ್ಲಿ ಈ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು ಹಾಗೂ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದವರು ಖಡಕ್​​ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಮಾರ್ಗಮಧ್ಯೆ ಕೈಕೊಟ್ಟ ಹೆಡ್‌ಲೈಟ್: ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲೇ 15 ಕಿ.ಮೀ ಬಸ್ ಓಡಿಸಿದ ಚಾಲಕ

ನಿನ್ನೆ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯಿಂದ ಅತ್ತಿಗೇರಿಗೆ ಹೊರಟಿದ್ದ ಬಸ್​​ನ ಹೆಡ್‌ಲೈಟ್ ತಾಂತ್ರಿಕ ದೋಷದಿಂದ ಕುಂದಗೋಳ ತಾಲೂಕಿನ ಸಂಶಿ ಬಳಿ ಬಂದ್​​ ಆಗಿತ್ತು. ಪ್ರಯಾಣಿಕರನ್ನು ಅರ್ಧಕ್ಕೆ ಇಳಿಸಲು ಸಾಧ್ಯವಾಗದ ಕಾರಣ, ಪ್ರಯಾಣಿಕರ ಮೊಬೈಲ್​​ ಟಾರ್ಚ್‌ ಬೆಳಕಿನಲ್ಲಿ ಚಾಲಕ ಸಂಶಿಯಿಂದ ಗುಡಗೇರಿ, ಅತ್ತಿಗೇರಿವರೆಗೆ ಬಸ್ ಚಲಾಯಿಸಿದ್ದರು. ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ತಲುಪುವ ಈ ಮಾರ್ಗವನ್ನು, ಚಾಲಕ ಒಂದೂವರೆ ಗಂಟೆ ಸಮಯ ತೆಗೆದುಕೊಂಡು ನಿಧಾನವಾಗಿ ಚಲಾಯಿಸಿ, ಪ್ರತಿಯೊಬ್ಬ ಪ್ರಯಾಣಿಕರನ್ನು ಅವರ ಗ್ರಾಮಗಳಿಗೆ ಸುರಕ್ಷಿತವಾಗಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:46 am, Sun, 6 September 26

Loading...
Unable to load recommendations.
Follow Us