ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟಾಚಾರ ಮತ್ತು ಅರಾಜಕತೆಯ ಆರೋಪ ಮಾಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರು, ಧಾರವಾಡದಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಸಮುದಾಯಗಳ ಪ್ರತಿಭಟನೆಗಳನ್ನು ಉದಾಹರಿಸಿದ್ದಾರೆ. ನಿಮ್ಮ ಆಡಳಿತದಲ್ಲಿ ಜನ ನೆಮ್ಮದಿಯಿಂದ ಇದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ
Image Credit source: R Ashoka X account

Updated on: Feb 25, 2026 | 2:23 PM

ಬೆಂಗಳೂರು, ಫೆಬ್ರವರಿ 25: ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ (Congress) ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರಿಂದ ಮತ್ತು ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಸೇರಿದಂತೆ ಹಲವು ಹೋರಾಟಗಳನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್​ ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಹಲವು ಬಾರಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ನಡೆದಿದ್ದು, ಖಾಲಿ ಹುದ್ದೆ ಭರ್ತಿಗಾಗಿ ರಾಜ್ಯ ಸರ್ಕಾರಿ ವೈದ್ಯರ OPD ಬಂದ್, ಪರಿಶಿಷ್ಟ ಜಾತಿ ಸಮುದಾಯಗಳು ಹಾಗೂ ಎಸ್ಸಿ ಬಲಗೈ ಸಮುದಾಯಗಳ ಪ್ರತಿಭಟನೆ ಸೇರಿದಂತೆ ಮುಂದೆ ನಡೆಯಬೇಕಿರುವ ಹೋರಾಟಗಳ ಪಟ್ಟಿಯನ್ನೇ ಉಲ್ಲೇಖಿಸಿರುವ ಅಶೋಕ್, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಎಂದು ಸಿಎಂ ಸಿದ್ದರಾಮಯ್ಯಗೆ ಪ್ರಶ್ನಿಸಿದ್ದಾರೆ.

ಅಶೋಕ್ ಟ್ವೀಟ್​ನಲ್ಲೇನಿದೆ?

ಇದನ್ನೂ ಓದಿ ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ

ಕಾಂಗ್ರೆಸ್ ಆಡಳಿತವು ಭ್ರಷ್ಟತೆ ಮತ್ತು ಅರಾಜಕತೆಯಿಂದ ಕೂಡಿದೆ ಎಂದು ಆರೋಪಿಸುತ್ತಾ, ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಎಂದು ಪ್ರಶ್ನಿಸಿದ್ದಾರೆ. ಅವರ ಟ್ವೀಟ್‌ನಲ್ಲಿ ರಾಜ್ಯದ ಪ್ರತಿ ಹಂತದಲ್ಲಿ ಜನರ ಆಕ್ರೋಶ ಹೆಚ್ಚುತ್ತಿರುವುದನ್ನು, ಸರ್ಕಾರವು ಜನರ ಬೇಡಿಕೆಗಳಿಗೆ ಸ್ಪಂದಿಸುವ ಅಗತ್ಯವಿರುವುದನ್ನು ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:11 pm, Wed, 25 February 26

Follow Us