AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಖಾಲಿ ಉಳಿದಿರುವ ಏಕೈಕ ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕಿಯರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಗಾಯತ್ರಿ ಶಾಂತೇಗೌಡ, ನಯನಾ ಮೋಟಮ್ಮ ಹಾಗೂ ಉಮಾಶ್ರೀ ಸೇರಿದಂತೆ ಕಾಂಗ್ರೆಸ್ ಮಹಿಳಾ ನಾಯಕಿಯರು ರೇಸ್​​ನಲ್ಲಿದ್ದು, ಯಾರಿಗೆ ಮಂತ್ರಿಗಿರಿ ಒಲಿಯಲಿದೆ ಎಂಬ ಕುತೂಹಲ ಹೆಚ್ಚಿದೆ.

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ: ರೇಸ್​​ನಲ್ಲಿ ಇರೋದು ಯಾರ್ಯಾರು?
ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Aug 04, 2026 | 7:46 PM

Share

ಮುಖ್ಯಾಂಶಗಳು

  • ಡಿಕೆಶಿ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಸ್ಥಾನ
  • ಮಂತ್ರಿಗಿರಿಗಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ
  • ರೇಸ್​​ನಲ್ಲಿ ಇರುವ ಶಾಸಕರು ಯಾರ್ಯಾರು ಎಂದು ಗೊತ್ತಾ?

ಬೆಂಗಳೂರು, ಆಗಸ್ಟ್​​ 04: 19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್​​ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್​​ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಲಾಗಿತ್ತು. ಹೀಗಾಗಿ ಖಾಲಿ ಉಳಿದಿರುವ ಒಂದು ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್​​ ಪಾಳಯದಲ್ಲಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ ಶುರುವಾಗಿದೆ. ಈ ನಡುವೆ ಸಚಿವ ಸ್ಥಾನದಿಂದ ವಂಚಿತರಾಗಿರುವ ಗಾಯತ್ರಿ ಶಾಂತೇಗೌಡ ಪುನಃ ಯತ್ನ ನಡೆಸುತ್ತಿದ್ದು, ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರೇಸ್​​ನಲ್ಲಿ ಇರೋ ಶಾಸಕಿಯರು ಯಾರ್ಯಾರು?

ಗಾಯತ್ರಿ ಶಾಂತೇಗೌಡ ಅವರ ಜೊತೆಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಎಂಎಲ್​ಸಿ ಉಮಾಶ್ರೀ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​, ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಅನ್ನಪೂರ್ಣ ಕೂಡ ಸಚಿವ ಸ್ಥಾನದ ರೇಸ್​​ನಲ್ಲಿರುವ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ: ‘ಮನಸ್ಸಿಗೆ ನೋವಾಗಿದೆ’ ಎಂದ ಬಸವರಾಜ ಹೊರಟ್ಟಿ

ಆಕಾಂಕ್ಷಿಗಳು ಹೇಳೋದೇನು?

ಸಚಿವ ಸ್ಥಾನ ಸಂಬಂಧ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಮಹಿಳಾ ಮೀಸಲಾತಿ ಪರ ಧ್ವನಿ ಎತ್ತಿದ್ದೇವೆ, ಅವಕಾಶ ಸಿಗಬೇಕು. ಸಂಪುಟದಲ್ಲಿ ಅವಕಾಶ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ನಯನಾ ಮೋಟಮ್ಮ ಹೇಳಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂಬುದು ನಿಜ. ನನಗೆ ಭರವಸೆಯಿದೆ, ಪಕ್ಷ ಸೂಕ್ತ ತೀರ್ಮಾನ ಕೈಗೊಳ್ಳುತ್ತೆ. ಪಕ್ಷಕ್ಕಾಗಿ ದುಡಿದಿದ್ದೇವೆ, ಹೀಗಾಗಿ ಹೈಕಮಾಂಡ್ ಪರಿಗಣಿಸುವ ವಿಶ್ವಾಸವಿದೆ ಎಂದು ಉಮಾಶ್ರೀ ತಿಳಿಸಿದ್ದಾರೆ. ಮತ್ತೊಂದೆಡೆ ಪತಿ ಸಮೇತ ಅನ್ನಪೂರ್ಣಾ ತುಕಾರಾಂ ಸಿಎಂ ಡಿಕೆಶಿ ಅವರನ್ನು ಭೇಟಿಯಾಗಿರುವ ಕಾರಣ ಪೈಪೋಟಿ ತೀವ್ರಗೊಂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:32 pm, Tue, 4 August 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ