Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೆ ಬುಡಿಯೆರ್.. ಬೆಂಗಳೂರಿನಲ್ಲಿ ಕೋಣಗಳ ಗತ್ತಿನ ಓಟದ ಕಂಬಳ ಕ್ರೀಡೆ ಆಯೋಜನೆಗೆ ಪ್ಲಾನ್

ಕರಾವಳಿ ಭಾಗದ ಪ್ರಸಿದ್ಧ ಕ್ರೀಡೆ ಕಂಬಳ ವಿದೇಶಗಳಲ್ಲೂ ಸುದ್ದು ಮಾಡಿತ್ತು. ಈ ಕ್ರೀಡೆಯಲ್ಲಿ ಕೋಣಗಳ ಗತ್ತಿನ ಓಟ ನೋಡಲೆಂದೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಾರೆ. ಇದೀಗ ಈ ಕ್ರೀಡೆ, ಬೆಂಗಳೂರಿನಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ.

ಅಲೆ ಬುಡಿಯೆರ್.. ಬೆಂಗಳೂರಿನಲ್ಲಿ ಕೋಣಗಳ ಗತ್ತಿನ ಓಟದ ಕಂಬಳ ಕ್ರೀಡೆ ಆಯೋಜನೆಗೆ ಪ್ಲಾನ್
ಕರಾವಳಿಯ ಪ್ರಸಿದ್ಧ ಕ್ರೀಡೆ ಕಂಬಳ ಬೆಂಗಳೂರಿನಲ್ಲಿ ಆಯೋಜನೆಗೆ ಪ್ಲಾನ್
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on:Aug 07, 2023 | 7:45 PM

ಮಂಗಳೂರು, ಆಗಸ್ಟ್ 7: ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು (Kambala) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಯೋಜನೆ ಮಾಡಲು ಯೋಜನೆ ರೂಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕೆರೆ ಕಂಬಳದ ರೂವಾರಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Rai) ಅವರ ನೇತ್ರತ್ವದಲ್ಲಿ ಈ ಕಂಬಳ ನಡೆಸಲು ಸಿದ್ದತೆಗಳು ನಡೆಯುತ್ತಿದೆ.

ಕರಾವಳಿಯ ಜನಪದ ಕ್ರೀಡೆ ಕಂಬಳ ಇತ್ತೀಚೆಗೆ ಸಾಕಷ್ಟು ಪ್ರಸಿದ್ದಿ ಪಡೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುವ ಕಂಬಳವನ್ನು ವೀಕ್ಷಿಸಲೆಂದು ಲಕ್ಷಾಂತರ ಜನ ಆಗಮಿಸುತ್ತಾರೆ. ಅದರಲ್ಲೂ ಕಾಂತಾರ ಸೇರಿದಂತೆ ವಿವಿಧ ಸಿನಿಮಾಗಳಲ್ಲಿ ಕಂಬಳ ದೃಶ್ಯದ ಚಿತ್ರೀಕರಣವಾದ ಬಳಿಕ ಕಂಬಳ ಕ್ರೇಝ್ ಹೆಚ್ಚಿನವರಲ್ಲಿ ಮೂಡಿದೆ. ಹೀಗಾಗಿ ಕರಾವಳಿಯಲ್ಲಿ ಮಾತ್ರ ನಡೆಯುತ್ತಿದ್ದ ಈ ಕಂಬಳವನ್ನು ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಆಯೋಜನೆ ಮಾಡುವ ಸಿದ್ಧತೆಗಳು ನಡೆಯುತ್ತಿದೆ.

ಉದ್ಯೋಗ ಸೇರಿದಂತೆ ಇನ್ನಿತರ ಕಾರಣಕ್ಕಾಗಿ ಸಾಕಷ್ಟು ಮಂದಿ ಕರಾವಳಿಗರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ಪ್ರಾರಂಭಿಸಿರುವಂತಹ ತುಳುಕೂಟ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಇದರ ಪ್ರಯುಕ್ತ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ. ಉಪ್ಪಿನಂಗಡಿಯಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕೆರೆ ಕಂಬಳದ ರೂವಾರಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತ್ರತ್ವದಲ್ಲಿ ಈ ಕಂಬಳ ನಡೆಯಲಿದೆ.

ಇದನ್ನೂ ಓದಿ: ಮಂಗಳೂರು: ಮುಸ್ಲಿಂ ವ್ಯಕ್ತಿಯಿಂದ ಸೀತಾ ದೇವಿ ಕುರಿತು ಅವಹೇಳನಕಾರಿ ಕಾಮೆಂಟ್; ಆರೋಪಿ ಅರೆಸ್ಟ್​​

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಂಬಳದ ದಿನಾಂಕ ನಿಗದಿ ಮಾಡಬೇಕಾಗಿದೆ. ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ನೇತ್ರತ್ವದಲ್ಲಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈ ಕಂಬಳ ಆಯೋಜನೆ ಮಾಡಲು ಹಲವು ಸವಾಲಿದ್ದು ಕೋಣಗಳನ್ನು ಓಡಿಸಲು ಭೂಮಿಯನ್ನು ವಿಶೇಷವಾಗಿ ಸಿದ್ಧಗೊಳಿಸಬೇಕು. ಕೋಣಗಳನ್ನು ಓಡಿಸುವ ಟ್ರ್ಯಾಕ್ ನಿರ್ಮಾಣ, ಕೋಣಗಳನ್ನು ಕರೆತಂದು ನಿಲ್ಲಿಸಲು ವ್ಯವಸ್ಥೆ ಹೀಗೆ ಅನೇಕ ಸಿದ್ಧತೆಗಳು ಆಗಬೇಕಿದೆ. ಹೀಗಾಗಿ ಅರಮನೆ ಮೈದಾನದಲ್ಲಿ ಕಂಬಳ ಅಂಕಣ, ನೀರು, ಪಾರ್ಕಿಂಗ್‌ಗೆ ವ್ಯವಸ್ಥೆ, ಪ್ರೇಕ್ಷಕರಿಗೆ ಕಂಬಳ ವೀಕ್ಷಿಸಲು ಬೇಕಾದಷ್ಟು ಜಾಗದ ವ್ಯವಸ್ಥೆ ಸೇರಿದಂತೆ ಎಲ್ಲದರ ಬಗ್ಗೆಯು ಪರಿಶೀಲನೆ ನಡೆಸಲಾಗಿದೆ.

ಕರಾವಳಿಯಲ್ಲಿ ಕಂಬಳ ರುತು ಪ್ರಾರಂಭವಾಗುವ ಮೊದಲೇ ಬೆಂಗಳೂರಿನಲ್ಲಿ ಕಂಬಳ ನಡೆಸುವುದಕ್ಕೆ ಸಿದ್ಧತೆ ಮಾಡಲಾಗಿದೆ. ಇದರ ಜೊತೆ ಈ ಬೆಂಗಳೂರು ಕಂಬಳಕ್ಕೆ ಯಾವ ಕೋಣಗಳನ್ನು ಆಯ್ಕೆ ಮಾಡಬೇಕು, ಅವುಗಳನ್ನು ಊರಿನಿಂದ ರಾಜ್ಯ ರಾಜಧಾನಿಗೆ ಕರೆ ತರುವುದು ಹೇಗೆ ಎಂಬ ನಿಟ್ಟಿನಲ್ಲಿಯೂ ಚರ್ಚೆ ನಡೆಯುತ್ತಿದೆ. ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಕಂಬಳ ಆಯೋಜನೆಯಾದಲ್ಲಿ ನಗರದಲ್ಲಿರುವ ಕರಾವಳಿಗರಿಗೆ ಮಾತ್ರವಲ್ಲದೆ, ಉಳಿದವರಿಗೂ ಕೋಣಗಳ ಗತ್ತಿನ ಓಟವನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ಒದಗಿ ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Mon, 7 August 23

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ