ಬೆಂಗಳೂರಿನಲ್ಲಿ ಜನಾಂಗೀಯ ನಿಂದನೆ; ‘ಚೀನೀ’ ಎಂದು ನಿಂದಿಸಿ ಸಿಕ್ಕಿಂ ಯುವಕನ ಮೇಲೆ ಹಲ್ಲೆ

| Updated By: Ganapathi Sharma

Updated on: Aug 19, 2023 | 6:05 PM

ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯನೆಂದು ತಿಳಿದಿದ ನಂತರವೂ ಆರೋಪಿಗಳು ಹಲ್ಲೆ ಮುಂದುವರೆಸಿದ್ದರು ಎಂದು ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯಿಂದ ದಿನೇಶ್ ಅವರ ತಲೆ ಹಾಗೂ ಮುಖದ ಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಜನಾಂಗೀಯ ನಿಂದನೆ; ‘ಚೀನೀ’ ಎಂದು ನಿಂದಿಸಿ ಸಿಕ್ಕಿಂ ಯುವಕನ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಆಗಸ್ಟ್ 19: ‘ಚೀನೀ’ ಎಂದು ನಿಂದಿಸಿ ಸಿಕ್ಕಿಂ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ (Bangalore crime) ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic city) ಆಗಸ್ಟ್ 16ರಂದು ನಡೆದಿದೆ. 30 ವರ್ಷದ ದಿನೇಶ್ ಸುಬ್ಬಾ ಎಂಬವರ ಮೇಲೆ ಮೂರು ಜನ ಅಪರಿಚಿತರು ‘ಚೀನೀ’ ಎಂದು ಕರೆದು ಹಲ್ಲೆ ನಡೆಸಿದ್ದಾರೆ. ದಿನೇಶ್ ಅವರು ಹೋಟೆಲ್​​ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 16ರಂದು ಸಹೋದರ ಹಾಗೂ ಸ್ನೇಹಿತನೊಂದಿಗೆ ಊಟ ಮಾಡಿಕೊಂಡು ವಾಪಸ್ ಆಗುವಾಗ, ಬೈಕ್​​ನಲ್ಲಿ ಬಂದ ಮೂವರು ವ್ಯಕ್ತಿಗಳು ಚೂಪಾದ ವಸ್ತುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ.

ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯನೆಂದು ತಿಳಿದಿದ ನಂತರವೂ ಆರೋಪಿಗಳು ಹಲ್ಲೆ ಮುಂದುವರೆಸಿದ್ದರು ಎಂದು ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯಿಂದ ದಿನೇಶ್ ಅವರ ತಲೆ ಹಾಗೂ ಮುಖದ ಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಎಲೆಕ್ಟ್ರಾನಿಕ್ ಸಿಟಿ ಪೋಲಿಸರು ಅಪರಿಚಿತ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಕ್ಷಿಸಲಾಗುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು: ಮೃತದೇಹ ತರಿಸಿಕೊಡುವಂತೆ ಸರ್ಕಾರಕ್ಕೆ ತಾಯಿ ಮನವಿ

ಇನ್​​ಸ್ಟಾಗ್ರಾಂ ಲೈಕ್​​ಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದವರ ಬಂಧನ

ಬೈಕ್ ಕದ್ದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಿತಿಕ್, ಪವನ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಆರ್​​ಎಕ್ಸ್ ಬೈಕ್​​ಗಳನ್ನು ಕಳ್ಳತನ ಮಾಡಿ, ವ್ಹೀಲಿಂಗ್ ಸ್ಟಂಟ್​​ಗಳನ್ನು ಮಾಡುತ್ತಿದ್ದರು. ಬಳಿಕ ಸ್ಟಂಟ್ ವೀಡಿಯೋಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದರು. ಇನ್ ಸ್ಟಾಗ್ರಾಂನಲ್ಲಿ ಹೆಚ್ಚು ಲೈಕ್ ಪಡೆಯುವ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ರಿತಿಕ್, ಪವನ್ ಇಬ್ಬರನ್ನು ಹೆಚ್ಚಿನ ತನಿಖೆಗಾಗಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Sat, 19 August 23