ರಾಹುಲ್ ಗಾಂಧಿ ಅನರ್ಹ: ಬಿಜೆಪಿ ನಾಯಕರೇ ನಿಮ್ಮ ಹಿಂಬದಿ ಹೋರಾಟ ನಿಲ್ಲಿಸಿ, ಖಡಕ್​ ಎಚ್ಚರಿಕೆ ಕೊಟ್ಟ ನಲಪಾಡ್

|

Updated on: Mar 27, 2023 | 8:51 AM

ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ನಿನ್ನೆ(ಮಾ.26) ರಾತ್ರಿ ಯೂತ್​ ಕಾಂಗ್ರೆಸ್​ ರಾಜ್ಯಾಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

ರಾಹುಲ್ ಗಾಂಧಿ ಅನರ್ಹ: ಬಿಜೆಪಿ ನಾಯಕರೇ ನಿಮ್ಮ ಹಿಂಬದಿ ಹೋರಾಟ ನಿಲ್ಲಿಸಿ, ಖಡಕ್​ ಎಚ್ಚರಿಕೆ ಕೊಟ್ಟ ನಲಪಾಡ್
ಬಿಜೆಪಿಗೆ ​ ಖಡಕ್​ ಎಚ್ಚರಿಕೆ ಕೊಟ್ಟ ನಲಪಾಡ್
Follow us on

ಬೆಂಗಳೂರು: ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ(Rahul Gandhi) ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಸಂಸದ ಸ್ಥಾನದಿಂದ ರಾಹುಲ್​ಗಾಂಧಿ ಅನರ್ಹ ಹಿನ್ನೆಲೆ. ನಿನ್ನೆ ರಾತ್ರಿ ಯೂತ್​ ಕಾಂಗ್ರೆಸ್​ ರಾಜ್ಯಾಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ