ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ಪ್ರತಿಭಟನೆ: ಹಲವೆಡೆ ವಾಹನ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ನಾಳೆ(ಆಗಸ್ಟ್ 08) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ನಾಳೆ  ರಾಹುಲ್ ಗಾಂಧಿ ಪ್ರತಿಭಟನೆ: ಹಲವೆಡೆ ವಾಹನ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ
Rahul Gandhi

Updated on: Aug 07, 2025 | 3:27 PM

ಬೆಂಗಳೂರು, (ಆಗಸ್ಟ್ 07): ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮತಗಳ್ಳತನ ಆರೋಪ ಮಾಡಿದ್ದು, ಸಂಬಂಧ ನಾಳೆ(ಆಗಸ್ಟ್ 07) ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್​​ ನಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರತಿಭಟನಾ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಇದರಿಂದ ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ (Bengaluru Traffic) ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ಎಲ್ಲೆಲ್ಲಿ ಸಂಚಾರ ಬಂದ್ ಹಾಗೂ ಪರ್ಯಾಯ ಮಾರ್ಗಗಳು

  • ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್‌ನಿಂದ ಆನಂದ್ ರಾವ್ ಫ್ಲೈಓವರ್, ಒಲ್ಡ್ ಜೆಡಿಎಸ್ ರಸ್ತೆ, ಶೇಷಾದ್ರಿಪುರ ರಸ್ತೆಯಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಇವುಗಳ ಬದಲು ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕರ್, ರೇಸ್ ಕೋರ್ಸ್ ಫ್ಲೈಓವರ್ ಕಡೆಯಿಂದ ಪ್ರಯಾಣಿಸಬಹುದು.
  • ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಮೂಲಕ ಹೋಗಬಹುದು.

ಇದನ್ನೂ ಓದಿ:  ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ; ‘ಅಟಂ ಬಾಂಬ್ಸಿಡಿಸಿದ ರಾಹುಲ್ ಗಾಂಧಿ

 

  • ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚಾರ ನಿಷೇಧಿಸಲಾಗಿದ್ದು, ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಸಂಚರಿಸಲು ಸೂಚಿಸಲಾಗಿದೆ.
  • ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್‌ಕಡೆಯಿಂದ ಫ್ರೀಡಂಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್‌ನಿಂದ ಬಲ ತಿರುವು ಪಡೆದು ಸಾಗರ ಜಂಕ್ಷನ್‌ಕಡೆಗೆ ಸಂಚರಿಸಬಹುದು.
  • ಮೌರ್ಯ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂಪಾರ್ಕ್‌ಗೆ ತೆರಳುವವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು

ವಾಹನ ಸವಾರರು ನಾಳೆ(ಆಗಸ್ಟ್ 08) ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿರುವ ಮಾರ್ಗಗಳಲ್ಲೇ ಸಂಚರಿಸುವುದು ಒಳಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us