ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣ ಕಾಮಗಾರಿ: ತಾತ್ಕಾಲಿಕ ಮಾರ್ಗ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ

ಜೆ.ಬಿ.ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್​ಸಿಸಿ ಬಾಕ್ಸ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಕೆಆರ್​ಪುರದ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ.

ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣ ಕಾಮಗಾರಿ: ತಾತ್ಕಾಲಿಕ ಮಾರ್ಗ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ
ಬೆಂಗಳೂರು ಸಂಚಾರ ಪೊಲೀಸ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jul 15, 2023 | 9:15 PM

ಬೆಂಗಳೂರು: ಜೆ.ಬಿ.ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೈಲ್ವೆ ರಸ್ತೆ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್​ಸಿಸಿ ಬಾಕ್ಸ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಕೆಆರ್​ಪುರದ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ (route change) ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಿದೆ.

ಹಳೇ ಮದ್ರಾಸ್ ರಸ್ತೆಯ ಬೆನ್ನಿಗಾನಹಳ್ಳಿ ಬಳಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದಿಂದ ಹೊಸೂರು ರೈಲ್ವೇ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗದ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್.ಸಿ.ಸಿ ಬಾಕ್ಸ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಹಾಗಾಗಿ ನಗರದಿಂದ ಕೆ.ಆರ್.ಪುರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಲು ಬೆನ್ನಿಗಾನಹಳ್ಳಿ ರೈಲ್ವೆ ಮೇಲ್ವೇತುವೆ ಬಳಿ ಇರುವ 02 ಮಾರ್ಗಗಳಲ್ಲಿ ಬಲ ಭಾಗದ ಮಾರ್ಗದಲ್ಲಿ ಸಂಚಾರವನ್ನು ನಿರ್ಬಂಧಿಸಿ, ಸದರಿ ಸಂಚಾರವು ಎಡ ಭಾಗದ ಮಾರ್ಗದ ಮುಖಾಂತರ ನಗರದ ಕಡೆಯಿಂದ ಕೆ.ಆರ್.ಪುರದ ಕಡೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸುಗಮ ಸಂಚಾರದ ಹಿತದೃಷ್ಠಿಯಿಂದ ಈ ಕೆಳಕಂಡ ಬದಲಿ ಮಾರ್ಗದ ವ್ಯವಸ್ಥೆಯನ್ನು ಸಹ ಬಳಸಬಹುದಾಗಿದೆ.

ಇದನ್ನೂ ಓದಿ: Bengaluru Police: ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್; ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’

ಹಳೇ ಮದ್ರಾಸ್ ರಸ್ತೆ ಮೂಲಕ ನಗರದ ಕಡೆಯಿಂದ ಕೆ.ಆರ್.ಪುರದ ಕಡೆಗೆ ಸಂಚರಿಸುವ ವಾಹನಗಳನ್ನು ಹಳೇ ಮದ್ರಾಸ್ ರಸ್ತೆ ಸದಾನಂದ ನಗರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ಸದಾನಂದ ನಗರ ರಸ್ತೆ, ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಜಂಕ್ಷನ್, ಕಸ್ತೂರಿ ನಗರದ ಮುಖಾಂತರ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆ ಮೂಲಕ ಕೆ.ಆರ್.ಪುರದ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:13 pm, Sat, 15 July 23

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು