ವೀಕೆಂಡ್ ಮಸ್ತಿಯಲ್ಲಿರುವ ಬೆಂಗಳೂರಿಗರಿಗೆ ತುಂತುರು ಮಳೆ ಚುಂಬನ; ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ದಾಖಲಾಗಲಿದೆ.

ವೀಕೆಂಡ್ ಮಸ್ತಿಯಲ್ಲಿರುವ ಬೆಂಗಳೂರಿಗರಿಗೆ ತುಂತುರು ಮಳೆ ಚುಂಬನ; ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್
ಮಳೆImage Credit source: Getty Images
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Oct 13, 2024 | 11:08 AM

ಬೆಂಗಳೂರು, ಅ.13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತುಂತುರು ಮಳೆ ಆರಂಭವಾಗಿದೆ (Bengaluru Rains). ನಗರದ ಶಾಂತಿನಗರ, ಡಬಲ್ ರೋಡ್, ಲಾಲ್ ಬಾಗ್ ರಸ್ತೆಗಳಲ್ಲಿ‌ ತುಂತುರು ಮಳೆಯಾಗುತ್ತಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಮತ್ತಷ್ಟು ಜೋರಾಗಲಿದೆ. 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ (Karnataka Rains).

ಮುಂದಿನ 24 ಗಂಟೆಗಳಿಗೆ ಅನ್ವಯಾಗುವಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಳಗಾವಿ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ದಾಖಲಾಗಲಿದೆ.

ಇದನ್ನೂ ಓದಿ: ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್ ​

ಹಿಂಗಾರು ಮಳೆ ಚುರುಕಾಗಲು ಕಾರಣವೇನು?

ಇನ್ನು, ಗೋವಾ ಮತ್ತು ಉತ್ತರ ಕರ್ನಾಟಕದ ಕರಾವಳಿ ಬಳಿಯ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ನಿರ್ಮಾಣವಾಗಿದ್ದು, ಅದು ಮಹಾರಾಷ್ಟ್ರ ಕರಾವಳಿಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಸಾಗಲಿದೆ. ಇಂದು ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಳ್ಳಲಿದೆ. ಹೀಗಾಗಿ ದಕ್ಷಿಣ ಕೇರಳ ಕರಾವಳಿಯಿಂದ ಆಗ್ನೇಯ ಅರೇಬಿಯನ್ ಸಮುದ್ರದವರೆಗೆ ಟ್ರಘ್ ಸಾಗಲಿದೆ. ಇನ್ನು ತಮಿಳುನಾಡು ಕರಾವಳಿಯಿಂದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಮೊತ್ತೊಂದು ಚಂಡಮಾರುತದ ಪರಿಚಲನೆಯಿದ್ದು ದಕ್ಷಿಣ ತಮಿಳುನಾಡು ಕರಾವಳಿಯ ಮೇಲೆ ನೆಲೆಗೊಂಡಿದೆ. ಅದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿದೆ. ಈ ಹಿನ್ನಲೆಯಲ್ಲಿ ಹಿಂಗಾರು ಮಳೆ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ