ನಗರದ ಹಲವೆಡೆ ಮುಂಜಾನೆ 4 ಗಂಟೆಯಿಂದ ಜಿಟಿಜಿಟಿ ಮಳೆ; ಇಂದೂ ನಾಳೆ ಸಿಲಿಕಾನ್ ಸಿಟಿ ಜನಕ್ಕೆ ಮಳೆ ಕಾಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ನಗರದ ಹಲವೆಡೆ ಮುಂಜಾನೆ 4 ಗಂಟೆಯಿಂದ ಜಿಟಿಜಿಟಿ ಮಳೆ; ಇಂದೂ ನಾಳೆ ಸಿಲಿಕಾನ್ ಸಿಟಿ ಜನಕ್ಕೆ ಮಳೆ ಕಾಟ
ಮಳೆ
Follow us
TV9 Web
| Updated By: ಆಯೇಷಾ ಬಾನು

Updated on:Nov 11, 2021 | 9:53 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಮುಂಜಾನೆ 4 ಗಂಟೆಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಶಾಂತಿನಗರ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯ ಜೊತೆಗೆ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಇನ್ನೆರಡು ದಿನ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿರಲಿದೆ. ಶಾಲಾ-ಕಾಲೇಜು, ಕೆಲಸಗಳಿಗೆ ತೆರಳೋರಿಗೆ ಮಳೆಯ ಕಿರಿಕಿರಿ ಉಂಟಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ. ದಕ್ಷಿಣ ಒಳನಾಡು ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಮೋಡಕವಿದ ವಾತವರಣ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಸುರಿದ ಮಳೆ ನ. 12ರವರೆಗೆ ಮುಂದುವರಿಯಲಿದೆ. ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಆಗುತ್ತಿದೆ. ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ ಸಾಧ್ಯತೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ತಮಿಳುನಾಡಿನಲ್ಲೂ ವರುಣನ ಆರ್ಭಟ ಮುಂದುವರೆದಿದೆ. ಚೆನ್ನೈ, ತಿರುವಳ್ಳೂರ್, ಚೆಂಗಲ್‌ಪಟ್ಟು, ಕಾಂಚೀಪುರಂ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಂದೇ ದಿನ 20 ಸೆಂ.ಮಿಗೂ ಹೆಚ್ಚು ಮಳೆಯಾಗುವ ಸಾಧ್ಯತೆಗಳ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಇದನ್ನೂ ಓದಿ: ದುಬಾರಿ ಪೆಟ್ರೋಲ್​ಗೆ ಹಣ ತೆತ್ತು ಸರ್ಕಾರವನ್ನು ಶಪಿಸುತ್ತಿರುವವರ ಚಿತ್ತ ಈಗ ಜಾಸ್ತಿ ಮೈಲೇಜ್ ನೀಡುವ ಇ-ಸ್ಕೂಟರ್​ಗಳತ್ತ!

Karnataka Dams Water Level: ಇನ್ನು 3 ದಿನ ರಾಜ್ಯಾದ್ಯಂತ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 8:49 am, Thu, 11 November 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ