Bangalore Rains: ಮತ್ತೆ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ವರ್ಷಧಾರೆ; ಹಲವೆಡೆ ಟ್ರಾಫಿಕ್ ಜಾಮ್‌!

|

Updated on: May 08, 2024 | 5:57 PM

Rain in Bengaluru City: ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಯೆಲ್ಲೋ ಅಲರ್ಟ್ ಘೋಷಿಸಿದೆ. ಅದರಂತೆ ಇಂದು ಬೆಳಗ್ಗೆ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇದೀಗ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ಸಂಜೆಯಾಗುತ್ತಲೇ ಮಳೆರಾಯನ ಎಂಟ್ರಿಯಿಂದ ಬೆಂಗಳೂರು ಫುಲ್​ ಕುಲ್​ ಕುಲ್​​ ಆಗಿದೆ. ಅಲ್ಲದೇ ಮಳೆಯಿಂದ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ,

Bangalore Rains: ಮತ್ತೆ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ವರ್ಷಧಾರೆ; ಹಲವೆಡೆ ಟ್ರಾಫಿಕ್ ಜಾಮ್‌!
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, (ಮೇ 08): ಮಳೆರಾಯ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತಂಪೆರೆಯುತ್ತಿದ್ದಾನೆ. ಇಂದು(ಮೇ 08) ಸಹ ಬೆಂಗಳೂರಿನ ಹಲವೆಡೆ  ಮಳೆಯಾಗಿದೆ. ಇದೀಗ ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದೆ. ಯಲಹಂಕ, ರಿಚ್​ಮಂಡ್​ಟೌನ್ ಸುತ್ತಮುತ್ತ ಹಾಗೂ ನೆಲಮಂಗಲ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ ಆರ್ ಸರ್ಕಲ್, ಶಾಂತಿ ನಗರ, ಎಂ ಜಿ ರಸ್ತೆ , ಕೆಆರ್​ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನಸೌಧ ಸುತ್ತಮುತ್ತ ಧಾರ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಕೆಲಸ ಮುಗಿಸಿ ಮನೆ ಕಡೆ ಹೊರಟ ವಾಹನ ಸವಾರರು ಪರದಾಡುತ್ತಿದ್ದಾರೆ.  ಸಂಜೆಯಾಗುತ್ತಲೇ ಸಿಲಿಕಾನ್ ಸಿಟಿ ಥಂಡಾ ಥಂಡಾ ಕೂಲ್ ಕೂಲ್ ಆಗಿದ್ದು, ಬಿಸಿ‌ ಹವೆ ಹಾಗೂ ಬೇಸಿಗೆಯಿಂದ ಬೇಸತ್ತಿದ್ದ ಜನ ಫುಲ್‌ ಖುಷ್ ಆಗಿದ್ದಾರೆ.

ಸದಾಶಿವನಗರ, ಹೆಬ್ಬಾಳ, ಅರಮನೆ ಮೈದಾನ, ಮಲ್ಲೇಶ್ವರಂ, ಶಿವಾನಂದ ಸರ್ಕಲ್,‌ ಮಂತ್ರಿ ಮಾಲ್, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್ ಬಳಿಯೂ ಜೋರು ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹೆಬ್ಬಾಳ, ಅರಮನೆ ಮೈದಾನ ಬಳಿ ಸಂಚಾರ ದಟ್ಟಣೆಯಾಗಿದೆ.

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ವರುಣ ಮೂರ್ನಾಲ್ಕು ದಿನಗಳಿಂದ ವರುಣ ಕೃಪೆ ತೋರುತ್ತಿದ್ದಾರೆ. ಇದರಿಂದ ಬೆಂಗಳೂರಿಗರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಇಷ್ಟು ದಿನ ಬಿರು ಬಿಸಿಲಿನಿಂದ ಕಂಗಾಲಾಗಿದ್ದವರು ಮಳೆಯಲಿ ಜೊತೆಯಲ್ಲಿ ಅಂತ ಎಂಜಾಯ್ ಮಾಡುತ್ತಿದ್ದಾರೆ.

ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ

ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನು, ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Wed, 8 May 24