ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಮಳೆ ಮತ್ತೆ ಆರಂಭವಾಗಿದೆ. ನೆಲಮಂಗಲ ಪಟ್ಟಣದ ಸುತ್ತಮುತ್ತ ಮಳೆ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.
ಮದ್ಯಸೇವಿಸಿ ಈಜಲು ಹೋದ ವ್ಯಕ್ತಿ ಸಾವು
ದೇವನಹಳ್ಳಿ ತಾಲೂಕಿನ ಬೂದಿಗೆರೆ ಕೆರೆಯಲ್ಲಿ ಮದ್ಯಸೇವಿಸಿ ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತನನ್ನು ಕೇಶವ (36) ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಳೆದ ಹಲವು ದಿನಗಳಿಂದ ಬಿದ್ದ ಮಳೆಗೆ ಕೆರೆ ತುಂಬಿತ್ತು. ಕೆರೆಯ ಬದಿಯಲ್ಲೇ ಇರುವ ವೈನ್ಸ್ ಸ್ಟೋರ್ನಿಂದ ಮದ್ಯ ಖರೀದಿಸಿ ಸೇವಿಸಿ, ಈಜಲೆಂದು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಮೃತನ ಶವಕ್ಕಾಗಿ ಕೆರೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಚನ್ನರಾಯಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶೀಘ್ರ ಪರಿಹಾರ ನೀಡಲು ಸಿದ್ದರಾಮಯ್ಯ ಒತ್ತಾಯ
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಸಾಕಷ್ಟು ನಷ್ಟವಾಗಿದೆ. ಸರ್ಕಾರ ಕೂಡಲೇ ಸರ್ವೆ ಮಾಡಿಸಿ ಪರಿಹಾರ ನೀಡಬೇಕು. ಮುಖ್ಯಮಂತ್ರಿ ಕಾಟಾಚಾರಕ್ಕೆ ಎರಡು-ಮೂರು ಕಡೆ ಭೇಟಿ ನೀಡಿದ್ದಾರೆ. ಸರ್ಕಾರ ಜನರ ಕಷ್ಟಕ್ಕೆ ಕೂಡಲೇ ಸ್ಪಂದಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಪತ್ರವನ್ನು ಬರೆಯುತ್ತೇನೆ. ಕೃಷಿ ಇಲಾಖೆ ಪ್ರಕಾರ ರಾಜ್ಯದ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅವರು ಕೋಲಾರದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ರಾಯಚೂರು: ಮಳೆಯಿಂದ ಅಪಾರ ಹಾನಿ; 40,534 ಹೆಕ್ಟೇರ್‌ನಷ್ಟು ಬೆಳೆ ನಾಶ
ಇದನ್ನೂ ಓದಿ: ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!