Bengaluru Rain: ಸಂಜೆ ವೇಳೆಗೆ ಸುರಿದ ಮಳೆ, ವಾಹನ ಸವಾರರ ಪರದಾಟ
ಬೆಂಗಳೂರು ನಗರದ ಹಲವೆಡೆ ಇಂದು ಭಾರಿ ಮಳೆಯಾಗಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದೆ. ಶಾಂತಿನಗರ, ಮೆಜೆಸ್ಟಿಕ್, ಕಾರ್ಪೊರೇಷನ್ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಬೆಂಗಳೂರು: ನಗರದ ಹಲವೆಡೆ ಇಂದು ಭಾರಿ ಮಳೆಯಾಗಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ತುಂಬೆಲ್ಲಾ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಶಾಂತಿನಗರ, ಮೆಜೆಸ್ಟಿಕ್, ಕಾರ್ಪೊರೇಷನ್, ಕೆ.ಆರ್.ಮಾರ್ಕೆಟ್, ಕೋರಮಂಗಲ, ಮೈಸೂರು ಬ್ಯಾಂಕ್ ಸರ್ಕಲ್, ಲಾಲ್ಬಾಗ್, ಸದಾಶಿವನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬೆಂಗಳೂರು ನಗರ (Bengaluru City)ದಲ್ಲಿ ಭಾರಿ ಮಳೆ (Rain)ಯಾಗುವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿತ್ತು. ಅದರಂತೆ ಸಂಜೆ ಅಲ್ಲಲ್ಲಿ ಆರಂಭವಾದ ಮಳೆ ಈಗಲೂ ಮುಂದುವರಿದಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಕರಾವಳಿ, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ 2 ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಮುಂದಿನ 3 ದಿನ ಭಾರೀ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇಂದಿನಿಂದ ಜೂನ್ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
ನೆಲಮಂಗಲ: ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಸಂಜೆ ಗುಡುಗು, ಸಿಡಿಲು, ಮಿಂಚು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ದಾಸರಹಳ್ಳಿ, ಬಾಗಲಗುಂಟೆ, ಚಿಕ್ಕಬಾಣಾವರ, ಹೆಸರಘಟ್ಟದಲ್ಲೂ ಮಳೆಯಾಗುತ್ತಿದೆ. ಈ ಹಿನ್ನೆಲೆ ಬೆಸ್ಕಂ ನೆಲಮಂಗಲದಲ್ಲಿ ವಿದ್ಯುತ್ ಸ್ಥಗಿತಗೊಳಿಸಿದೆ.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:11 pm, Sat, 4 June 22