Bengaluru News: ಬೆಂಗಳೂರು ನಗರದಲ್ಲಿ ಇನ್ನೂ 2 ದಿನ ಸಾಧಾರಣ ಮಳೆ ಸಾಧ್ಯತೆ

Bengaluru Rains: ಬೆಂಗಳೂರಿನಲ್ಲಿ ಮೇಲ್ಮೈ ಸುಳಿಗಾಳಿ ದುರ್ಬಲವಾಗಿದೆ. ಹೀಗಾಗಿ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

Bengaluru News: ಬೆಂಗಳೂರು ನಗರದಲ್ಲಿ ಇನ್ನೂ 2 ದಿನ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಮಳೆ
Follow us
TV9 Web
| Updated By: ganapathi bhat

Updated on:Nov 21, 2021 | 3:08 PM

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇನ್ನೂ 2 ದಿನ ಸಾಧಾರಣ ಮಳೆ ಮುಂದುವರಿಕೆ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೇಲ್ಮೈ ಸುಳಿಗಾಳಿ ದುರ್ಬಲವಾಗಿದೆ. ಹೀಗಾಗಿ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

16 ಜಿಲ್ಲೆಗಳಿಗೆ ಅತಿವೃಷ್ಟಿ ಪರಿಹಾರವಾಗಿ 352.99 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಜುಲೈ, ಆಗಸ್ಟ್​ನಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಸಂತ್ರಸ್ತರಿಗೆ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲಾಗಿದೆ. NDRF, SDRF ಅಡಿಯಲ್ಲಿ ₹352.99 ಕೋಟಿ ಪರಿಹಾರ ನೀಡಲಾಗಿದೆ.

ಬೆಂಗಳೂರಿನಲ್ಲಿ ನವೆಂಬರ್ 23 (ಮಂಗಳವಾರ)ರ ಬೆಳಗ್ಗೆಯವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಇದರ ಹೊರತಾಗಿ ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳು, ಉತ್ತರ ಒಳನಾಡು ಪ್ರದೇಶಗಳು, ಮಲೆನಾಡು, ಕರಾವಳಿ ತೀರಗಳಲ್ಲಿ ನವೆಂಬರ್​ 21 (ಇಂದು)ರವರೆಗೂ ಮಳೆ ಮುಂದುವರಿಯಲಿದೆ.  ನಿನ್ನೆ ಶನಿವಾರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ರಾಮನಗರಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿತ್ತು.  ಅದರಲ್ಲಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯವರೆಗೂ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.

ಹಾಗೇ, ಇಂದು ಮಧ್ಯಾಹ್ನದವರೆಗೂ ದಕ್ಷಿಣ ಒಳನಾಡು ಪ್ರದೇಶಗಳಾದ ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಕೆಲವೆಡೆ ಭಾರಿ ಮಳೆ ಸುರಿಯಲಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಣ್ಣಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ. ಹಾಸನ, ಕೊಡಗು, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಸಣ್ಣ, ಮಧ್ಯಮ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿಮೀ ಇರಲಿದ್ದು, ಅದು 60ಕಿಮೀ ವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ: ಅಕಾಲಿಕ ಮಳೆಗೆ ಮೂಕ ಪ್ರಾಣಿಗಳ ರೋಧನೆ; ಮೂರು ದಿನಗಳಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಗೋವುಗಳು

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಹೀಗಿದೆ

Published On - 3:08 pm, Sun, 21 November 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್