ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಕರ್ತವ್ಯಕ್ಕೆ ಕಚೇರಿಗೆ ತೆರಳಲು ಉದ್ಯೋಗಿಗಳು (Employees) ಪರದಾಡುತ್ತಿದ್ದಾರೆ. ವಿಧಾನಸೌಧ, ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ.

ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:May 12, 2022 | 9:10 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ನಿನ್ನೆ (ಮೇ 11) ರಾತ್ರಿಯಿಂದ ಮಳೆ ಸುರಿಯುತ್ತಿದೆ. ತುಂತುರು ಮಳೆಯಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕರ್ತವ್ಯಕ್ಕೆ ಕಚೇರಿಗೆ ತೆರಳಲು ಉದ್ಯೋಗಿಗಳು (Employees) ಪರದಾಡುತ್ತಿದ್ದಾರೆ. ವಿಧಾನಸೌಧ, ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ. ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಮೈಸೂರಿನಲ್ಲೂ ವರುಣನ ಆರ್ಭಟ ಮುಂದುವರಿದಿದೆ. ನಾಗಮಂಗಲ, ಅತ್ತಿಕುಪ್ಪೆ ಗ್ರಾಮದಲ್ಲಿ ತಂಬಾಕು ಸಸಿಗಳು ಜಲಾವೃತವಾಗಿವೆ. ಸಾಲಸೋಲಮಾಡಿ ಬೆಳೆದಿದ್ದ ತಂಬಾಕು ಬೆಳೆ ಸಂಪೂರ್ಣ ಜಲಾವೃತವಾದ ಹಿನ್ನೆಲೆ ಸೂಕ್ತ ಪರಿಹಾರ ನೀಡುವಂತೆ ಬೆಳೆಗಾರರು ಒತ್ತಾಯಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೂ‌ ನಿರಂತರವಾಗಿ ಮಳೆ ಸುರಿಯುತ್ತಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ. ನಿರಂತರ ಸುರಿದ ಮಳೆಗೆ ಕೆಲವೆಡೆ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದಾವಣಗೆರೆ ನಗರದ ರೈಲ್ವೆ  ಅಂಡರ್ ಪಾಸ್​ನಲ್ಲಿ‌ ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನದಿಂದ ‌ನಿರಂತರವಾಗಿ ಸುರಿಯುತ್ತಿದೆ.

ನೆಲಕ್ಕೆ ಉರುಳಿದ ವಿದ್ಯುತ್ ಕಂಬಗಳು, ಮರಗಳು: ಬಿರುಗಾಳಿ, ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಾದಾಪುರ ಹೋಬಳಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಹಲವು ಮನೆಗಳ ಮೇಲೆ ವಿದ್ಯುತ್ ಕಂಬಗಳು, ಮರಗಳು ಬಿದ್ದಿವೆ. ವಿದ್ಯುತ್ ತಂತಿಗಳು ನೆಲಕ್ಕೆ ತಾಗುತ್ತಿದೆ. ಮೂರು ದಿನಗಳಿಂದ ಗ್ರಾಮದಲ್ಲಿ ವಿದ್ಯುತ್ ಇಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ಬಗ್ಗೆ ಬೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದರೂ ಕ್ರಮ ಕೈಗೊಂಡಿಲ್ಲ.

ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಕಾಮಗಾರಿಗಾಗಿ ಅಗೆದ ಗುಂಡಿಯಲ್ಲಿ ಬಿದ್ದು ಬಾಲಕಿ ಸಾವು ಪ್ರಕರಣ; ಗುಂಡಿಯಲ್ಲಿ ಬಿಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಭಾರತಕ್ಕೆ ಶ್ರೀಲಂಕಾ ವಲಸಿಗರ ಪ್ರವೇಶ ತಡೆಯಲು ಕ್ರಮ: ಎರಡೂ ದೇಶಗಳ ನೌಕಾಪಡೆಗಳಿಂದ ಗಸ್ತು

Published On - 8:42 am, Thu, 12 May 22

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್