Karnataka Weather: ಕರಾವಳಿ ಜಿಲ್ಲೆಗಳಿಗೆ ಇಂದು, ನಾಳೆ ಆರೆಂಜ್ ಅಲರ್ಟ್ ಘೋಷಣೆ! ಬೆಂಗಳೂರಿನಲ್ಲಿ ಇನ್ನು ಎರಡು ದಿನ ಮಳೆ
Coastal Karnataka Rain: ಹಾವೇರಿ ಹೊರತುಪಡಿಸಿ ಉತ್ತರ ಒಳನಾಡು ಜಿಲ್ಲೆಗಳಿಗೆ ನಾಳೆಯಿಂದ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇನ್ನು ಎರಡು ದಿನ ಮಳೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರು: ರಾಜ್ಯದಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ (Heavy Rain) ಇದೀಗ ಕೊಂಚ ಕಡಿಮೆಯಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ (Meteorological Department) ಕರಾವಳಿ ಜಿಲ್ಲೆಗಳಿಗೆ ಇಂದು (ಜುಲೈ 13) ಮತ್ತು (ಜುಲೈ 14) ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿ ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಿಗೆ 5 ದಿನ ಯಲ್ಲೋ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಮಾಡಲಾಗಿರುವ ಜಿಲ್ಲೆಗಳಲ್ಲಿ 115 ಮಿಮೀ ಯಿಂದ 204 ಮಿಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಹಾವೇರಿ ಹೊರತುಪಡಿಸಿ ಉತ್ತರ ಒಳನಾಡು ಜಿಲ್ಲೆಗಳಿಗೆ ನಾಳೆಯಿಂದ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇನ್ನು ಎರಡು ದಿನ ಮಳೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: Jammu Kashmir: ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡೇಟಿಗೆ ಪೊಲೀಸ್ ಅಧಿಕಾರಿ ಬಲಿ; ಹಲವರಿಗೆ ಗಾಯ
ಗರ್ಭಿಣಿಯರ ಸ್ಥಳಾಂತರ: ಪ್ರವಾಹ ಹಿನ್ನೆಲೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿದ್ದ ಗರ್ಭಿಣಿಯರನ್ನ ಸ್ಥಳಾಂತರ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಾಂತರ ಮಾಡಿದ್ದಾರೆ. ಶೀಲಹಳ್ಳಿ ಸೇತುವೆ ಮುಳುಗಡೆ ಸಾಧ್ಯತೆ ಹಿನ್ನೆಲೆ ಶಿಫ್ಟಿಂಗ್ ಮಾಡಲಾಗಿದ್ದು, ಅಲ್ಲಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.
ಗೋಡೆ ಕುಸಿದು ಯುವಕನಿಗೆ ಗಾಯ: ಮಳೆಯಿಂದ ಮನೆ ಗೋಡೆ ಕುಸಿದು ಯುವಕನಿಗೆ ಗಾಯವಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಯು.ಬೇವಿನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಗೃಹಬಳಕೆ ವಸ್ತುಗಳು ನಾಶವಾಗಿವೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಜನರಿಗೆ ಎಚ್ಚರಿಕೆ ನೀಡಿದ ಜಿಲ್ಲಾಡಳಿತ: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟಿದ್ದರಿಂದ ಕೊಪ್ಪಳ ತಾಲೂಕಿನ ಆನೆಗೊಂದಿ ಬಳಿ ಇರುವ ಶ್ರೀಕೃಷ್ಣ ದೇವರಾಯ ಮಂಟಪ ಬಹುತೇಕ ಜಲಾವೃತವಾಗಿದೆ. ಡ್ಯಾಂನಿಂದ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
Published On - 9:04 am, Wed, 13 July 22