AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ; ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದು ಚಂಡಮಾರುತವಾಗಿ ಬದಲಾವಣೆಯಾಗಬಹುದು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ; ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 20, 2022 | 10:54 AM

Share

ಬೆಂಗಳೂರು: ಬಂಗಾಳಕೊಲ್ಲಿ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಾರ್ಚ್ 23ರವರೆಗೆ ಬೆಂಗಳೂರು ನಗರದಲ್ಲಿ ಗಾಳಿ, ಗುಡಗು ಸಹಿತ ಮಳೆಯಾಗುವ (Rain) ಸಾಧ್ಯತೆಯಿದೆ ಅಂತ ರಾಜ್ಯ ಹವಾಮಾನ ಇಲಾಖೆ (State Meteorological Department) ಮುನ್ಸೂಚನೆ ನೀಡಿದೆ. ಜೊತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದು ಚಂಡಮಾರುತವಾಗಿ ಬದಲಾವಣೆಯಾಗಬಹುದು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಎರಡು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅಕಾಲಿಕ ಮಳೆಗೆ ರೈತರು ಬೆಳೆದ ಬೆಳೆ ನಾಶವಾಗಿದೆ. ಚಾಮರಾಜನಗರದಲ್ಲಿ 10 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಮೈಸೂರಿನ ಹುಲ್ಲೇಮಾಳದಲ್ಲಿ ಸಿಡಿಲು ಬಡಿದು ಮರಕ್ಕೆ ಬೆಂಕಿ ತಗುಲಿತ್ತು. ಮಂಡ್ಯ ಜಿಲ್ಲೆಯಲ್ಲಿ ಗಾಳಿಸಹಿತ ಮಳೆಗೆ ಬಾಲಕಿ ಬಲಿಯಾಗಿದ್ದಾಳೆ. ಕೊಪ್ಪಳದಲ್ಲಿ ಹನುಮಸಾಗರದಲ್ಲಿ ಭಾರಿ ಮಳೆಗೆ ಬೈಕ್‌ಗಳು ಮುಳುಗಡೆಯಾಗಿವೆ. ಇನ್ನು ಮೈಸೂರಿನ ಹನಸೋಗೆ ಗ್ರಾಮದಲ್ಲಿ ಸಿಡಿಲು ಬಡಿದು ವೃದ್ಧ ಸಾವನ್ನಪ್ಪಿರುವ ಘಟನೆ ನಡೆದಿದೆ.

ಭಾರತದಲ್ಲಿ ಅಸಾನಿ ಚಂಡಮಾರುತ ಅಪ್ಪಳಿಸಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ನೆರೆಯ ತಮಿಳುನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅಕಾಲಿಕವಾಗಿ ಮಳೆಯಾಗುತ್ತಿದೆ. ಶುಕ್ರವಾರ ಸುರಿದ ಮಳೆಗೆ ಹಾವೇರಿ ಜಿಲ್ಲೆಯ ರವಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರ ನಡುವೆ ನಿನ್ನೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇಂದು ಕೂಡ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಮಾ.20) ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ

WI vs ENG: ಬರೋಬ್ಬರಿ 419 ಎಸೆತ, 27 ಮೇಡನ್ ಓವರ್! 49 ವರ್ಷಗಳ ಹಳೆದ ದಾಖಲೆ ಮುರಿದ ಆಂಗ್ಲ ಸ್ಪಿನ್ನರ್

RRR ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಜ್ಯೂ. ಎನ್​ಟಿಆರ್ ಕನ್ನಡ ಮಾತು; ಫ್ಯಾನ್ಸ್​ ಮನಗೆದ್ದ ಸ್ಟಾರ್​ ನಟ

Published On - 10:43 am, Sun, 20 March 22