Bengaluru Rain: ಬೆಂಗಳೂರು ಜನರೇ ಅಲರ್ಟ್! ಇಂದೂ ಸಹ ನಗರದಲ್ಲಿ ಮಳೆಯಾಗುವ ಸಾಧ್ಯತೆ

ನಗರದಲ್ಲಿ 15.5ರಿಂದ 60 ಮಿ.ಮೀ ಮಳೆ ಬೀಳುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.

Bengaluru Rain: ಬೆಂಗಳೂರು ಜನರೇ ಅಲರ್ಟ್! ಇಂದೂ ಸಹ ನಗರದಲ್ಲಿ ಮಳೆಯಾಗುವ ಸಾಧ್ಯತೆ
ಮಳೆ (ಸಾಂದರ್ಭಿಕ ಚಿತ್ರ)
Edited By:

Updated on: May 05, 2022 | 9:04 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರಿನಲ್ಲಿ (Bengaluru) ಇಂದೂ ಸಹ ಮಳೆಯಾಗುವ ಸಾಧ್ಯತೆಯಿದೆ ಅಂತ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ. ನಗರದಲ್ಲಿ 15.5ರಿಂದ 60 ಮಿ.ಮೀ ಮಳೆ ಬೀಳುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಜೊತೆಗೆ ಹಲವೆಡೆ ಆಲಿಕಲ್ಲು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ತೀರಾ ಪರದಾಡಿದ್ದಾರೆ. ಕರ್ನಾಟಕದ ಹಲವೆಡೆ ಇನ್ನೂ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಮುಂದಿನ 4 ದಿನಗಳ ಕಾಲ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಮಳೆ ಅವಾಂತರ:
ನಿನ್ನೆ ಕೂಡಾ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಮಳೆಯಿಂದ ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿದೆ. ಮೈಸೂರಿನ ನಂಜನಗೂಡು ತಾಲೂಕಿನ ಬಂಚಹಳ್ಳಿ ಹುಂಡಿ ಗ್ರಾಮದದಲ್ಲಿ ಕೆಂಪಶೆಟ್ಟಿ ಎಂಬುವವರ ಮನೆ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪಾರಾಗಿದ್ದಾರೆ.

ಇದನ್ನೂ ಓದಿ

ಎಂಟಿಬಿ ಮತ್ತು ಶರತ್ ಬಚ್ಚೇಗೌಡ ನಡುವೆ ಕಿತ್ತಾಟ; ಅವಿಮುಕ್ತೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವದ ಕನ್ವಿನಿಯರ್ ನೇಮಕ ಜಟಾಪಟಿ

ಬೆಂಗಳೂರು- ಚೆನ್ನೈ ಪಂದ್ಯದ ವೇಳೆ ವಿಶೇಷ ಕ್ಷಣ; ಆರ್​ಸಿಬಿ ಜೆರ್ಸಿ ತೊಟ್ಟ ಗೆಳೆಯನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ- ವಿಡಿಯೋ ಇಲ್ಲಿದೆ

Published On - 8:55 am, Thu, 5 May 22