Karnataka Rain: ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ 2 ದಿನ ಮಳೆ ಸಾಧ್ಯತೆ; ಹಿರಿಯ ವಿಜ್ಞಾನಿ ಗವಾಸ್ಕರ್ ಮಾಹಿತಿ

ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು. ಬೆಂಗಳೂರಿನಲ್ಲಿ ಇಡೀ ರಾತ್ರಿ ತುಂತುರು ಮಳೆ ಆಗಿದೆ. ಇದೇ ರೀತಿ ಇನ್ನು ಎರಡು ದಿನ ಮಳೆ ಆಗುವ ಸಂಭವ ಇದೆ ಅಂತ ಹಿರಿಯ ವಿಜ್ಞಾನಿ ಗವಾಸ್ಕರ್ ತಿಳಿಸಿದ್ದಾರೆ.

Karnataka Rain: ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ 2 ದಿನ ಮಳೆ ಸಾಧ್ಯತೆ; ಹಿರಿಯ ವಿಜ್ಞಾನಿ ಗವಾಸ್ಕರ್ ಮಾಹಿತಿ
ಸಾಂಕೇತಿಕ ಚಿತ್ರ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕಡೆ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ 2 ದಿನ ಮಳೆಯಾಗುವ ಸಾಧ್ಯತೆಯಿದೆ ಅಂತ ಪ್ರಾಕೃತಿಕ ಮತ್ತು ನೈಸರ್ಗಿಕ ವಿಕೋಪ ಇಲಾಖೆಯ ಹಿರಿಯ ವಿಜ್ಞಾನಿ ಗವಾಸ್ಕರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತುಂತುರು ಮಳೆಯಾಗಬಹುದು.

ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು. ಬೆಂಗಳೂರಿನಲ್ಲಿ ಇಡೀ ರಾತ್ರಿ ತುಂತುರು ಮಳೆ ಆಗಿದೆ. ಇದೇ ರೀತಿ ಇನ್ನು ಎರಡು ದಿನ ಮಳೆ ಆಗುವ ಸಂಭವ ಇದೆ ಅಂತ ಹಿರಿಯ ವಿಜ್ಞಾನಿ ಗವಾಸ್ಕರ್ ತಿಳಿಸಿದ್ದಾರೆ.

ನಿನ್ನೆ ರಾತ್ರಿಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್​ಆರ್​ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಹನುಮಂತನಗರ, ಗಿರಿನಗರ ಸೇರಿದಂತೆ ಹಲವೆಡೆ ರಾತ್ರಿಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನದಿಯಂತಾದ ರಸ್ತೆಗಳಲ್ಲಿ ಸಂಚರಿಸಲಾಗದೆ ವಾಹನ ಸವಾರರು ಕಂಗಾಲಾಗಿದ್ದಾರೆ. ಇಂದು ಬೆಳಗ್ಗೆಯಿಂದ ಮತ್ತೆ ಮಳೆಯಾಗುತ್ತಿದ್ದು, ಹಲವು ಏರಿಯಾಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ದಾಖಲಾಗಲಿದೆ. ಮಳೆಯಿಂದ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್​ಮೆಂಟ್​ಗಳಿಗೆ ನೀರು ನುಗ್ಗಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಇದನ್ನೂ ಓದಿ

ಪ್ರಕೃತಿ ಪ್ರಿಯರಿಂದ ಪಂಚಗಿರಿಗಳಿಗೆ ಭಾರೀ ಬೇಡಿಕೆ; ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಲು ಸಜ್ಜುಗೊಂಡ ಅರಣ್ಯ ಇಲಾಖೆ

ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ

Read Full Article

Click on your DTH Provider to Add TV9 Kannada