AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಸಿಲಿನ ಬೇಗೆಯ ನಡುವೆ ರಾಜ್ಯದ ಹಲವೆಡೆ ತಂಪೆರೆದ ವರುಣ: ಬೆಂಗಳೂರು, ಯಾದಗಿರಿಯಲ್ಲಿ ಭರ್ಜರಿ ಮಳೆ

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರು, ಯಾದಗಿರಿ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ದಿಢೀರ್ ಭರ್ಜರಿ ಮಳೆಯಾಗಿದ್ದು, ಹನೂರಿನಲ್ಲಿ ಮಳೆಯಿಂದಾಗಿ ಬೆಳೆ ನಷ್ಟ ಹಾಗೂ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನ ಸಂಭವಿಸಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯ ಮಳೆ ಇಲ್ಲದೆ ಚಿಂತೆಗೀಡಾಗಿದ್ದ ಅನ್ನದಾತರ ಮೇಲೆ ವರುಣ ಕೊಂಚ ದಯೆ ತೋರಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬೀಸಿಲಿನ ಬೇಗೆಯ ನಡುವೆ ರಾಜ್ಯದ ಹಲವೆಡೆ ತಂಪೆರೆದ ವರುಣ: ಬೆಂಗಳೂರು, ಯಾದಗಿರಿಯಲ್ಲಿ ಭರ್ಜರಿ ಮಳೆ
ಬೆಂಗಳೂರಲ್ಲಿ ಮಳೆImage Credit source: Tv9 Kannada
ಅರುಣ್ ಕುಮಾರ್​ ಆರ್​.
| Edited By: |

Updated on: Sep 21, 2026 | 5:34 PM

Share

ಬೆಂಗಳೂರು/ಯಾದಗಿರಿ, ಸೆಪ್ಟೆಂಬರ್​​ 21: ಮುಂಜಾನೆಯಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ಬೆಂಗಳೂರಿಗರಿಗೆ ಸಂಜೆಯಾಗುತ್ತಲೇ ವರುಣ ತಂಪೆರೆದಿದ್ದಾನೆ. ಕಾರ್ಪೊರೇಷನ್, ವಿಧಾನಸೌಧ, ಲಾಲ್‌ಬಾಗ್, ಜಯನಗರ, ಶಾಂತಿನಗರ, ವಿಜಯನಗರ, ಶಿವಾನಂದ ಸರ್ಕಲ್, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಉತ್ತಮ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದ ಜನ ಸಾಮಾನ್ಯರು ಪರದಾಟ ನಡೆಸಿದ್ದು, ಮಳೆಯಲ್ಲಿ ನೆನೆಯುತ್ತಲೇ ದ್ವಿಚಕ್ರ ವಾಹನ ಸವಾರರು ತೆರಳುತ್ತಿರುವ ದೃಶ್ಯಗಳು ಕಂಡುಬಂದಿವೆ.

ಯಾದಗಿರಿಯಲ್ಲಿಯೂ ಮಳೆಯ ಅಬ್ಬರ

ಯಾದಗಿರಿ ಸೇರಿದಂತೆ ಜಿಲ್ಲೆಯ ವಿವಿಧೆಡ ಒಂದು ಗಂಟೆಗೂ ಅಧಿಕ ಕಾಲ ಭರ್ಜರಿ ಮಳೆಯಾಗಿದ್ದು, ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣನ ಆಗಮನದಿಂದ ಕೊಂಚ ರಿಲೀಫ್ ಸಿಕ್ಕಿದೆ. ಭೀಕರ ಬರದಿಂದ ಕಂಗೆಟ್ಟಿದ್ದ ಅನ್ನದಾತರು ಕಂಗೆಟ್ಟಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ಮಳೆ ಇಲ್ಲದೆ ಚಿಂತೆಗೀಡಾಗಿದ್ದರು. ಆದರೆ ಇದೀಗ ವರುಣ ಕೊಂಚ ದಯೆ ತೋರಿರುವ ಕಾರಣ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ

ಭಾರೀ ಮಳೆಗೆ ಹನೂರು ಮಂದಿ ಕಂಗಾಲು

ತೀವ್ರ ಬರ ಪರಿಸ್ಥಿತಿಯ ನಡುವೆಯೂ ಅನಿರೀಕ್ಷಿತವಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಾದ್ಯಂತ ಕಳೆದ ರಾತ್ರಿ ರಣಭೀಕರ ಮಳೆ ಸುರಿದಿದ್ದು, ಅಪಾರ ಆಸ್ತಿ ಪಾಸ್ತಿ ಹಾನಿಯಾಗಿದೆ. ತಾಲೂಕಿನ ಬಂಡೆಪಾಳ್ಯ ಗ್ರಾಮದಲ್ಲಿ ಕೊಟ್ಟಿಗೆ ಕುಸಿದು ಒಂದು ಹಸು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿವೆ. ರಾಮಾಪುರ ಗ್ರಾಮದಲ್ಲಿ ಮುಖ್ಯ ರಸ್ತೆಯಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದ ಪರಿಣಾಮ ರಾಮಾಪುರದಿಂದ ತಮಿಳುನಾಡಿಗೆ ಸಂಪರ್ಕಿಸುವ ರಸ್ತೆಯಲ್ಲಿ ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಲೊಕ್ಕನಹಳ್ಳಿ ಗ್ರಾಮದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಎಲೆಕ್ಟ್ರಾನಿಕ್ ವಸ್ತುಗಳು, ದಿನಸಿ ಪದಾರ್ಥಗಳು ಹಾನಿಗೊಳಗಾಗಿವೆ. ಅಲ್ಲದೆ, ಸಾವಿರಕ್ಕೂ ಅಧಿಕ ಬಾಳೆ ಬೆಳೆ ನಾಶವಾಗಿದ್ದು, ಕಟಾವಿಗೆ ಬಂದಿದ್ದ ಬೆಳೆ ನೆಲಕಚ್ಚಿದ್ದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?