Bengaluru Rain: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಳೆಯಾಗಲಿದೆ

| Updated By: preethi shettigar

Updated on: Mar 21, 2022 | 5:16 PM

Bangalore Rain Updates: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅವನಿ ಚಂಡಮಾರುತದ ಪರಿಣಾಮದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೀನುಗಾರರಿಗೆ ಮುಂದಿನ 24 ಗಂಟೆ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲವಾದರೂ, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

Bengaluru Rain: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಳೆಯಾಗಲಿದೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಳೆಯಾಗಲಿದೆ. ಗುಡುಗು ಸಹಿತ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು(Bangalore Rain) ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ(Rain) ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೀನುಗಾರರಿಗೆ ಮುಂದಿನ 24 ಗಂಟೆ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲವಾದರೂ, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ.

ಭಾನುವಾರ (ಮಾರ್ಚ್​ 20) ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಲ್ಲಿ 30 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೇಸಿಗೆಯಲ್ಲಿ ಮಳೆ ಬಂದಿರುವುದಕ್ಕೆ ಜನರು ಮತ್ತು ರೈತಾಪಿ ವರ್ಗ ಸಂತಸಗೊಂಡಿದ್ದಾರೆ. ಕೆಲ ಕಡೆ ಸಿಡಿಲು, ಗಾಳಿಯ ಆರ್ಭಟ ಕೂಡ ಕಂಡು ಬಂದಿದೆ. ಗಾಳಿಯ ಅಬ್ಬರಕ್ಕೆ ಮನೆ, ಕಟ್ಟಡಗಳ ಚಾವಣಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಕಡೆ ಅಡಕೆ, ತೆಂಗು ಬೆಳೆಗೆ ಹಾನಿಯಾಗಿದೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.

ಈ ವರ್ಷದ ಮೊದಲ ಮಳೆ ಬೆಂಗಳೂರು ನಗರದಲ್ಲಿ ನಿನ್ನೆ (ಶನಿವಾರ) ಸುರಿದಿದೆ. ಕೆಲವು ಪ್ರದೇಶಗಳಲ್ಲಿ  ರಸ್ತೆಯ ತುಂಬೆಲ್ಲ ನೀರು ಹರಿದು ಹೋಗುವಷ್ಟು ಮಳೆಯಾಗಿದೆ. ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಮಳೆ

ಸಿಲಿಕಾನ್ ಸಿಟಿಗೆ ನಿನ್ನೆ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಇಂದು ಕೂಡ ಬಹುತೇಕ ಎಲ್ಲ ಬಡಾವಣೆಗಳಲ್ಲಿ ಮಳೆಯಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮತ್ತು ಅಸಾನಿ ಚಂಡಮಾರುತದ ಪರಿಣಾಮವಾಗಿ ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರಂ ಸದಾಶಿವನಗರ, ಚಾಮರಾಜಪೇಟ, ಚಿಕ್ಕಪೇಟೆಯಲ್ಲಿ ಮಳೆಯಾಗಿದೆ. ಗಿರಿನಗರ, ಹನುಮಂತನಗರ, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕುರುಬರಹಳ್ಳಿ, ಪದ್ಮನಾಭನಗರ, ಗಾಂಧಿನಗರ, ಕಾಟನ್ ಪೇಟೆ ಹಾಗೂ ಕಬ್ಬನ್ ಪಾರ್ಕ್, ಕೆಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ನಗರದ ಹೊರ ಭಾಗದಲ್ಲೂ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:
Cyclone Asani: ಅಸನಿ ಚಂಡಮಾರುತದ ಪ್ರಭಾವ; ಅಂಡಮಾನ್​-ನಿಕೋಬಾರ್​​ನಲ್ಲಿ ಭರ್ಜರಿ ಗಾಳಿ-ಮಳೆ, ಜನರ ಸ್ಥಳಾಂತರ

ಮಾರ್ಚ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ; ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ

Published On - 5:37 pm, Sun, 20 March 22