AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಕ್ಟಿಕಲ್​ ಎಕ್ಸಾಮ್ ಬರೆದು ಬಂದು ನೇಣಿಗೆ ಶರಣಾದ ಮೆಡಿಕಲ್ ವಿದ್ಯಾರ್ಥಿ

ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ (Medical Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೊದಲ ವರ್ಷದ MBBS ವಿದ್ಯಾರ್ಥಿಯಾಗಿದ್ದ ಲೋಕೇಂದ್ರನಾಥ ಎನ್ನುವ ವಿದ್ಯಾರ್ಥಿ ಮೆಡಿಕಲ್ ಕಾಲೇಜು ಹಾಸ್ಟೆಲ್​ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಪ್ರಾಕ್ಟಿಕಲ್​ ಎಕ್ಸಾಮ್ ಬರೆದು ಬಂದು ನೇಣಿಗೆ ಶರಣಾದ ಮೆಡಿಕಲ್ ವಿದ್ಯಾರ್ಥಿ
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: |

Updated on:Jun 10, 2024 | 7:01 PM

Share

ಬೆಂಗಳೂರುಮ (ಜೂನ್ 10): ವೈದ್ಯಕೀಯ ವಿದ್ಯಾರ್ಥಿ (Medical Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಬೆಂಗಳುರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಲೋಕೇಂದ್ರನಾಥ, ಹಾಸ್ಟೆಲ್​ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಇಂದು (ಜೂನ್ 10) ಬೆಳಗ್ಗೆ ಪ್ರಯೋಗಾತ್ಮಕ ಪರೀಕ್ಷೆಗೆ ಹಾಜರಾಗಿದ್ದ ಲೋಕೇಂದ್ರನಾಥ, ಮಧ್ಯಾಹ್ನ ಹಾಸ್ಟೆಲ್​ಗೆ ರೂಮ್ ಲಾಕ್​ ಮಾಡಿಕೊಂಡು ನೇಣಿಗೆ ಶರಣಾಗಿದ್ದಾನೆ,

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

ವಿದ್ಯುತ್ ತಂತಿ ತುಳಿದು ರೈತ ಸಾವು

ವಿಜಯನಗರ: ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ವರಹಳ್ಳಿ ಗ್ರಾಮದ ಪತ್ರಪ್ಪ (52) ಮೃತ ರೈತ. ಹೊಲದ ಬೋರ್‌ವೇಲ್ ವೈಯರ್ ಸರಿಪಡಿಸಲು ತೆರಳಿದ್ದಾಗ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Mon, 10 June 24

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ