ಬೆಂಗಳೂರುಮ (ಜೂನ್ 10): ವೈದ್ಯಕೀಯ ವಿದ್ಯಾರ್ಥಿ (Medical Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಬೆಂಗಳುರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಲೋಕೇಂದ್ರನಾಥ, ಹಾಸ್ಟೆಲ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಇಂದು (ಜೂನ್ 10) ಬೆಳಗ್ಗೆ ಪ್ರಯೋಗಾತ್ಮಕ ಪರೀಕ್ಷೆಗೆ ಹಾಜರಾಗಿದ್ದ ಲೋಕೇಂದ್ರನಾಥ, ಮಧ್ಯಾಹ್ನ ಹಾಸ್ಟೆಲ್ಗೆ ರೂಮ್ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿದ್ದಾನೆ,
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು
ವಿಜಯನಗರ: ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರಹಳ್ಳಿ ಗ್ರಾಮದಲ್ಲಿ ನಡೆದಿದೆ. ವರಹಳ್ಳಿ ಗ್ರಾಮದ ಪತ್ರಪ್ಪ (52) ಮೃತ ರೈತ. ಹೊಲದ ಬೋರ್‌ವೇಲ್ ವೈಯರ್ ಸರಿಪಡಿಸಲು ತೆರಳಿದ್ದಾಗ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:59 pm, Mon, 10 June 24