ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಗೆಲವು; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ನಿರ್ಮಲಾ ಸೀತಾರಾಮನ್
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಅವರು ಜಯಗಳಿಸಿದ್ದು, ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ.
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha) ಬಿಜೆಪಿ (BJP) ಅಭ್ಯರ್ಥಿ ನಿರ್ಮಲಾ (Nirmala Sitharaman) ಸೀತಾರಾಮನ್ ಅವರು ಜಯಗಳಿಸಿದ್ದು, ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ವಿಧಾನಸೌಧದ ಸಿಎಂ ಬೊಮ್ಮಾಯಿ ಕಚೇರಿಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ, ಮುನಿರತ್ನ , ಬೈರತಿ ಬಸವರಾಜ್ ಸೇರಿದಂತೆ ಇನ್ನೂ ಅನೇಕ ಮುಖಂಡರು ನಿರ್ಮಲಾ ಸೀತಾರಾಮನ್ ಅವರಿಗೆ ಶುಭಾಶಯ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಿದ ನಿರ್ಮಲಾ ಸೀತಾರಾಮನ್ ಬೆಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಳೀನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದದಿಂದ 2 ಬಾರಿ ಆಯ್ಕೆ ಸಾಧ್ಯವಾಯಿತು. ರಾಜ್ಯದ ಜನರ ಸೇವೆಗೆ 2ನೇ ಬಾರಿ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ.
ಇದನ್ನು ಓದಿ: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್ಗೆ ಗೆಲುವು
ರಾಜ್ಯದ ಜನತೆಗೆ ಸೇವೆ ಮಾಡಲು ಎರಡನೇ ಅವಕಾಶ ಸಿಕ್ಕಿದ್ದಕ್ಕೆ ಎಲ್ಲರಿಗೂ ಧನ್ಯವಾದ. ರಾಜ್ಯ ಬಿಜೆಪಿ, ಪ್ರತಿಯೊಬ್ಬ ಕಾರ್ಯಕರ್ಯರಿಗೂ ಧನ್ಯವಾದ ತಿಳಿಸುತ್ತೇನೆ. ಹೊಸ ಸದಸ್ಯರಾದ ಜಗ್ಗೇಶ್, ಲೆಹರ್ ಸಿಂಗ್ ಗೆ ಅಭಿನಂದನೆ ತಿಳಿಸುತ್ತೇನೆ. ಅಬ್ಸರ್ ವರ್ ಗಳಾದ ಕಿಶನ್ ರೆಡ್ಡಿ, ಸಿಟಿ ರವಿಗೆ ಧನ್ಯವಾದ ತಿಳಿಸುತ್ತೇನೆ. ಕಳೆದ ಹತ್ತು ದಿನಗಳಿಂದ ರೂಪಿಸಿದ ತಂತ್ರದಿಂದ ನಾವೂ ಗೆಲುವು ಸಾಧಿಸಿದ್ದೇವೆ ಎಂದರು.
ಇನ್ನು ರಾಜ್ಯಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಶೂನ್ಯ ಎಂಬ ಟೀಕೆ ವಿಚಾರವಾಗಿ ಮಾತನಾಡಿದ ಅವರು ವಿಪಕ್ಷಗಳ ಆರೋಪದಲ್ಲಿ ಸತ್ಯಾಂಶವಿಲ್ಲ. ಸತ್ಯಾಂಶ ಗೊತ್ತಿಲ್ಲದೆ ವಿರೋಧ ಪಕ್ಷದವರು ಆರೋಪ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಕೊವಿಡ್ ವೇಳೆ ಹಲವು ಕಾರ್ಯಕ್ರಮ ಕೊಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:17 pm, Fri, 10 June 22