ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ

ಜೂನ್ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಹಸ್ತಾಂತರಿಸಿದ ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರು ಉಪಸ್ಥಿತರಿದ್ದು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ

Updated on: Jun 05, 2026 | 2:54 PM

ಬೆಂಗಳೂರು, ಜೂನ್ 05: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್​ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು  ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮುಖ್ಯಾಂಶಗಳು

  • ಜೂನ್ 18ರ ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ನಾಮಪತ್ರ ಸಲ್ಲಿಕೆ.
  • ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
  • ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಒಗ್ಗಟ್ಟು ಪ್ರದರ್ಶನ.

ಕಾಂಗ್ರೆಸ್ ವರಿಷ್ಠರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಖರ್ಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರ ದಂಡೇ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಮ್ಮ ಎಲ್ಲಾ ಶಾಸಕರು ಮತ್ತು ನಾಯಕರು ನನ್ನನ್ನು ಒಮ್ಮತದಿಂದ ಆಯ್ಕೆ ಮಾಡಿದ್ದಾರೆ. ಜೂನ್ 18 ರ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Fri, 5 June 26

Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us