AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆ ವೇಳೆ ಏರುಪೇರು ಸಹಜ, ಚುನಾವಣೆ ಹೀಗೆಯೇ ಆಗುತ್ತೆ ಎನ್ನಲು ಆಗದು: ಸಿಎಂ ಬಸವರಾಜ ಬೊಮ್ಮಾಯಿ

ನಾವು ಯಾವುದೇ ಹೊಂದಾಣಿಕೆಯನ್ನು ನೆಚ್ಚಿಕೊಂಡಿಲ್ಲ. ಆದರೆ ಏನು ಹೊಂದಾಣಿಕೆ ಆಗುತ್ತದೆ ಎಂಬುದು ಮುಂದಿನ ದಿನಗಳಲ್ಲಿ ನಿಮಗೇ ತಿಳಿಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯಸಭೆ ಚುನಾವಣೆ ವೇಳೆ ಏರುಪೇರು ಸಹಜ, ಚುನಾವಣೆ ಹೀಗೆಯೇ ಆಗುತ್ತೆ ಎನ್ನಲು ಆಗದು: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jun 08, 2022 | 10:13 PM

Share

ಬೆಂಗಳೂರು: ರಾಜ್ಯಸಭೆ (Rajya Sabha Elections) ಚುನಾವಣೆಗಳು ನಡೆದಾಗಲೆಲ್ಲ ವಿವಿಧ ಪಕ್ಷಗಳಲ್ಲಿ ಏರುಪೇರಾಗಿದೆ. ಹೀಗೆಯೇ ಚುನಾವಣೆ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ. ಚುನಾವಣೆ ಪ್ರಕ್ರಿಯೆಯ ಮಧ್ಯದಲ್ಲಿಯೂ ಬದಲಾವಣೆ ಆಗಿದ್ದು ಉಂಟು. ನಾವು ಯಾವುದೇ ಹೊಂದಾಣಿಕೆಯನ್ನು ನೆಚ್ಚಿಕೊಂಡಿಲ್ಲ. ಆದರೆ ಏನು ಹೊಂದಾಣಿಕೆ ಆಗುತ್ತದೆ ಎಂಬುದು ಮುಂದಿನ ದಿನಗಳಲ್ಲಿ ನಿಮಗೇ ತಿಳಿಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯು ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ನಡೆಯುತ್ತದೆ. 4ನೇ ಅಭ್ಯರ್ಥಿಯ ಕೋಟಾ ತಲುಪುವಷ್ಟು ಮತಗಳು ಯಾರ ಬಳಿಯೂ ಇಲ್ಲ. ಎಲಿಮಿನೇಶನ್ ಆಗುವವರ ಮತಗಳು ವರ್ಗಾವಣೆ ಆಗುತ್ತವೆ. ನಮಗೆ 32 ಹೆಚ್ಚುವರಿ ಮತ ಇದ್ದು, ದ್ವಿತೀಯ ಪ್ರಾಶಸ್ತ್ಯದ ಮತಗಳೂ ಇರುವುದರಿಂದ ಯಥಾರ್ಥವಾಗಿ ಮತದಾನ ಆದರೆ ನಮ್ಮ ಮೂರನೇ ಅಭ್ಯರ್ಥಿ ಆಯ್ಕೆ ಆಗುತ್ತಾರೆ ಎಂದು ವಿಶ್ಲೇಷಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಮುಖ್ಯಮಂತ್ರಿ ಬೊಮ್ಮಾಯಿ‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಸಭಾ ಚುನಾವಣಾ ಉಸ್ತುವಾರಿ ಕಿಶನ್ ರೆಡ್ಡಿ, ಶಾಸಕರು, ರಾಜ್ಯಸಭಾ ಅಭ್ಯರ್ಥಿಗಳಾದ ಜಗ್ಗೇಶ್, ಲೆಹರ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಹಲವು ನಾಯಕರು ಸಭೆಗೆ ಗೈರಾಗಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಶಾಸಕರು ಗೈರು ಹಾಜರಾಗಿದ್ದರು.

ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಎಲ್ಲ ಶಾಸಕರಿಗೂ ವಿಪ್ ಜಾರಿ ಮಾಡಲಾಯಿತು. ಶಾಸಕರಿಂದ ಸಮರ್ಪಕ ರೀತಿಯಲ್ಲಿ ಮತ ಹಾಕುವುದನ್ನು ಖಾತ್ರಿಪಡಿಸುವ ಜವಾಬ್ದಾರಿಯನ್ನು ಸಚಿವರಾದ ಆರ್.ಅಶೋಕ್, ಸುನಿಲ್ ಕುಮಾರ್​, ಬಿ.ಸಿ.ನಾಗೇಶ್ ಅವರಿಗೆ ನೀಡಲಾಯಿತು. ಇವರಿಗೆ ಮೂರು ತಂಡಗಳಲ್ಲಿ ಮತ ಹಾಕಿಸಬೇಕು ಎಂಬ ಸೂಚನೆ ನೀಡಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Wed, 8 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್