ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಲೋಕಸಭಾ ಚುನಾವಣೆ: ಕರ್ನಾಟಕದಲ್ಲೆಡೆ ಕಟ್ಟೆಚ್ಚರ

ಜ.22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ವಿಚಾರವಾಗಿ ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಡಿಜಿ&ಐಜಿಪಿ ಅಲೋಕ್​ ಮೋಹನ್ ನೇತೃತ್ವದಲ್ಲಿ ನಡೆದ ಸಭೆ ಮುಕ್ತಾಯವಾಗಿದೆ. ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಅಲರ್ಟ್​ ಆದ ಇಲಾಖೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ.

ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಲೋಕಸಭಾ ಚುನಾವಣೆ: ಕರ್ನಾಟಕದಲ್ಲೆಡೆ ಕಟ್ಟೆಚ್ಚರ
ಡಿಜಿ&ಐಜಿಪಿ ಅಲೋಕ್​ ಮೋಹನ್
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Jan 17, 2024 | 8:42 PM

ಬೆಂಗಳೂರು, ಜನವರಿ 17: ಜ.22ರಂದು ರಾಮಲಲ್ಲಾ (Ram Lalla) ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ವಿಚಾರವಾಗಿ ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಡಿಜಿ&ಐಜಿಪಿ ಅಲೋಕ್​ ಮೋಹನ್ ನೇತೃತ್ವದಲ್ಲಿ ನಡೆದ ಸಭೆ ಮುಕ್ತಾಯವಾಗಿದೆ. ಪ್ರತಿಷ್ಠಾಪನಾ ಕಾರ್ಯಕ್ರಮದ ವೇಳೆ ಅಹಿತಕರ ಘಟನೆ ತಡೆಗೆ ಕ್ರಮಕೈಗೊಳ್ಳಲಾಗುವುದು. ರಾಜ್ಯದೆಲ್ಲೆಡೆ ಸೂಕ್ತ ಪೊಲೀಸ್ ಬಂದೋಬಸ್ತ್​​ಗೆ ಮತ್ತು ರೌಡಿ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ಇಡಲು ಸೂಚನೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಅಲರ್ಟ್​ ಆದ ಇಲಾಖೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ. ರೌಡಿಗಳ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಎಲ್ಲಾ ಎಸ್​​ಪಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂಓದಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವಿಚಾರ: ಅನುಮತಿ ಪಡೆದು ಕಟೌಟ್ ಹಾಕಿದ್ದರೂ FIR ದಾಖಲು

ಎಷ್ಟು ರೌಡಿಗಳು ಜೈಲಿನಲ್ಲಿದ್ದಾರೆ, ಎಷ್ಟು ರೌಡಿಗಳು ಹೊರಗಿದ್ದಾರೆ. ಯಾವ ಪಕ್ಷಗಳ ಜೊತೆ ಗುರುತಿಸಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸದ್ಯ ಬೆಂಗಳೂರು ನಗರ ಪೊಲೀಸರು ಸಂಗ್ರಹಿಸಿದ್ದಾರೆ. 1 ವಾರದಲ್ಲಿ ನಗರದ ಎಲ್ಲಾ ರೌಡಿಶೀಟರ್​ಗಳ ಪೂರ್ಣ ಮಾಹಿತಿ ಕಲೆ ಹಾಕಿ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಡಿಜಿ&ಐಜಿಪಿ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.

ಅವರು ರಾಮನ ವಿರೋಧಿಗಳು: ಛಲವಾಧಿ ನಾರಾಯಣಸ್ವಾಮಿ

ರಾಮ ಮಂದಿರ ಉದ್ಘಾಟನೆ ಬಳಿಕ ಕಾಂಗ್ರೆಸ್ ನಾಯಕರು ಅಯ್ಯೋಧ್ಯೆಗೆ ಹೋಗುತ್ತೇವೆ ಎನ್ನುವ ವಿಚಾರವಾಗಿ ಯಾದಗಿರಿಯಲ್ಲಿ ಎಂಎಲ್ಸಿ ಛಲವಾಧಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದು, ಅಯ್ಯೋಧ್ಯೆಗೆ ಆಮೇಲೆ ಹೋದರೆ ಬೇರೆ, ಇವತ್ತ ಹೋದರೆ ಬೇರೆ ಅಲ್ಲ. ರಾಮ‌ ಮಂದಿರ ಉದ್ಘಾಟನೆ ಆಗುತ್ತಿರುವುದು ವಿಶೇಷ ಸಂದರ್ಭ.

ಇದನ್ನೂ ಓದಿ: ರಾಜ್ಯ ಪದಾಧಿಕಾರಿಗಳ ನೇಮಕದಲ್ಲಿ ನಿರ್ಲಕ್ಷ್ಯ: ಬಿಜೆಪಿ ವಿರುದ್ಧ ಸಿಡಿದೆದ್ದ ಮಾದಿಗ ಸಮುದಾಯ

ಇಂತಹ ವಿಶೇಷ ಸಂದರ್ಭಕ್ಕೆ ಹೋಗಲ್ಲ ಅಂದರೆ ಅವರು ರಾಮನ ವಿರೋಧಿಗಳು. ರಾಮ ಮಂದಿರ ಉದ್ಘಾಟನೆಗೆ ನಾವು ಹೋಗಲ್ಲ ಅಂತ ಯಾವಾಗ ಕಾಂಗ್ರೆಸ್ ತಿರ್ಮಾನ ತೆಗೆದುಕೊಂಡಿದೆ. ಊಳಿದವರಿಗೆ ಆಹ್ವಾನ ಕೊಡುವುದರಲ್ಲಿ ಅರ್ಥ ಇಲ್ಲ. ಕಾಂಗ್ರೆಸ್​ನವರ ಮಾತನ್ನ ಅವರದ್ದೆ ಪಕ್ಷದವರು ತಿರಸ್ಕಾರ ಮಾಡುತ್ತಿದ್ದಾರೆ.

ಸುಮಾರು 40 ರಿಂದ 80 ಅಡಿ ಬ್ಯಾನರ್​ಗಳನ್ನ ನಮ್ಮ ಲೇಔಟ್ ಕೃಷ್ಣಪ್ಪ ಹಾಗೂ ಪ್ರೀಯ ಕೃಷ್ಣ ಇವರೆಲ್ಲ ಬೆಂಗಳೂರಲ್ಲಿ‌ ಬ್ಯಾನರ್ ಹಾಕುತ್ತಿದ್ದಾರೆ. ರಾಮ ನಮ್ಮ ಅಸ್ಮಿತೆ ಯಾರ ಏನು ಹೇಳಿದರು ನಾವು ಕೇಳೋದಿಲ್ಲ ಅಂತ ಹಾಕ್ತಿದ್ದಾರೆ. ನಾವು ರಾಮನ ಪರ ಅಂತಿದ್ದಾರೆ. ಇದು ಕಾಂಗ್ರೆಸ್​ ಪರ ಆಗಲಿಲ್ಲ. ಕಾಂಗ್ರೆಸ್​ನ ವಿರೋಧಿ ನೀತಿಯನ್ನ ಕಾಂಗ್ರೆಸ್​ನವರೇ ಖಂಡಿಸುತ್ತಿದ್ದಾರೆ. ಯಾರು ವಿರೋಧ ಮಾಡುತ್ತಾರೆ ಅವರ ಮನೆಯವರು ಅದನ್ನ ಮೆಚ್ಚುವುದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:33 pm, Wed, 17 January 24

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ