AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ಹೇಳಿಕೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​ಗೆ ಲೀಗಲ್ ನೋಟಿಸ್​

ಪಾಕ್ ಅಧಿಕಾರಿಗಳ ಜೊತೆ ಬಿಜೆಪಿ ನಾಯಕ ರಾಮ್ ಮಾಧವ್ ಗೌಪ್ಯ ಸಭೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಬಿಎನ್‌ಎಸ್ ಸೆಕ್ಷನ್ 356ರ ಅಡಿಯಲ್ಲಿ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ಕೊಲಂಬೋ ಹಾಗೂ ಲಂಡನ್​ನಲ್ಲಿ 4 ಸಭೆಗಳನ್ನು ಮಾಡಿದ್ದಾರೆ. ​​ಗೌಪ್ಯ ಸಭೆಯಲ್ಲಿ ಏನು ಮಾತಾಡಿದ್ದಾರೆಂಬ ಬಗ್ಗೆ ಅವರು ಸ್ಪಷ್ಟ ಪಡಿಸಬೇಕು ಎಂದು ಹರಿಪ್ರಸಾದ್​​ ಆಗ್ರಹಿಸಿದ್ದರು.

ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ಹೇಳಿಕೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​ಗೆ ಲೀಗಲ್ ನೋಟಿಸ್​
ಬಿ.ಕೆ.ಹರಿಪ್ರಸಾದ್​​Image Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:Jul 06, 2026 | 3:40 PM

Share

ಮುಖ್ಯಾಂಶಗಳು

  • ರಾಮ್ ಮಾಧವ್ ಹೆಸರಿಗೆ ಕಳಂಕ ತರಲು ಯತ್ನ ಆರೋಪ
  • ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ಗೆ ಲೀಗಲ್​​ ನೋಟಿಸ್​​
  • ರಾಮ್ ಮಾಧವ್​ಗೆ ಕ್ಷಮೆ ಕೇಳಬೇಕೆಂದು ನೋಟಿಸ್​ನಲ್ಲಿ ಉಲ್ಲೇಖ

ಬೆಂಗಳೂರು, ಜುಲೈ 06: ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ (KPCC) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ (B K Hariprasad) ಲೀಗಲ್ ನೋಟಿಸ್​ ನೀಡಲಾಗಿದೆ. ರಾಮ್ ಮಾಧವ್ (Ram Madhav) ಹೆಸರಿಗೆ ಕಳಂಕಗೊಳಿಸಲು ಪ್ರಯತ್ನಿಸಿರುವುದಲ್ಲದೆ ಅವರ ಇಮೇಜ್ ಮತ್ತು ಖ್ಯಾತಿಯನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಬಿಎನ್​ಎಸ್​ ಸೆಕ್ಷನ್ 356ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಅಲ್ಲದೆ, ಹರಿಪ್ರಸಾದ್​​ ರಾಮ್ ಮಾಧವ್​ಗೆ ಕ್ಷಮೆ ಕೇಳಬೇಕೆಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಬಿ.ಕೆ. ಹರಿಪ್ರಸಾದ್​ ಏನು ಹೇಳಿದ್ದರು?

GBA ಚುನಾವಣಾ ಬಿಜೆಪಿ ಉಸ್ತುವಾರಿ ರಾಮ್ ಮಾಧವ್ ಪಾಕ್ ಅಧಿಕಾರಿಗಳ ಜೊತೆ ಗೌಪ್ಯಸಭೆ ನಡೆಸಿದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದರು. ಕೊಲಂಬೋ ಹಾಗೂ ಲಂಡನ್​ನಲ್ಲಿ 4 ಸಭೆಗಳನ್ನು ಮಾಡಿದ್ದಾರೆ. ​​ಹಿಲ್ಟನ್ ಹೋಟೆಲ್​ನಲ್ಲಿ ರಾಮ್ ಮಾಧವ್ ಸಭೆ ನಡೆಸಿದ್ದಾರೆ. ಪಾಕ್​​ ISI ಮಾಜಿ ಮೇಜರ್ ಜನರಲ್ ಜೊತೆ ರಹಸ್ಯ ಮೀಟಿಂಗ್​​ ನಡೆಸಿದ್ದು, ಗೌಪ್ಯ ಸಭೆಯಲ್ಲಿ ಏನು ಮಾತಾಡಿದ್ದಾರೆಂದು ಸ್ಪಷ್ಟ ಪಡಿಸಬೇಕು ಎಂದು ಹರಿಪ್ರಸಾದ್​​ ಆಗ್ರಹಿಸಿದ್ದರು. ಪಾಕ್ ಜೊತೆ ಚರ್ಚಿಸುವಂತೆ RSS​​ ಮುಖ್ಯಸ್ಥ ಮೋಹನ್​​ ಭಾಗವತ್ ಹೇಳಿದ್ದಾರೆ ಅಂತಲೂ ದೂರಿದ್ದರು.

ಇದನ್ನೂ ಓದಿ: ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್

ಆಪರೇಷನ್ ಸಿಂಧೂರ್ ಆಗಿ ಕೆಲ ತಿಂಗಳುಗಳು ಆಗಿಲ್ಲ. ಆಗಲೇ ಲಂಡನ್​​​ಗೆ ಹೋಗಿ ರಾಮ್ ಮಾಧವ್​ 4 ಸಭೆ ನಡೆಸಿದ್ದಾರೆ. ನಾನು ಬಿಜೆಪಿ ನಾಯಕ ರಾಮ್ ಮಾಧವ್​​​​​​ಗೆ ಕೇಳುತ್ತೇನೆ, ನೀವು ಬೆಂಗಳೂರಿಗೆ ಬರುವಾಗ ಇದಕ್ಕೆ ಉತ್ತರ ಕೊಡಬೇಕು. ರಹಸ್ಯ ಸಭೆ ನಡೆಸಲು ನಿಮಗೆ ಯಾರು ಅಧಿಕಾರ ಕೊಟ್ಟಿದ್ದಾರೆ? ವಿದೇಶಾಂಗ ಸಚಿವಾಲಯ ಸಭೆ ಮಾಡಬೇಕು. ಇವರು ವಿದೇಶಾಂಗ ಸಚಿವಾಲಯದಲ್ಲಿ ಮಂತ್ರಿ ಕೂಡ ಅಲ್ಲ. ಎಂಎಲ್ಎ ಅಲ್ಲ, ಎಂಪಿ ಅಲ್ಲ, ಕೇವಲ ಆರ್‌ಎಸ್‌ಎಸ್ ಪ್ರಚಾರಕ. ಹೀಗಿರುವಾಗ ಇವರಿಗೆ ಸಭೆ ಮಾಡೋಕೆ ಅಧಿಕಾರ ಕೊಟ್ಟರು ಯಾರು ಎಂದು ಬಹಿರಂಗಪಡಿಸಲಿ ಎಂದು ಹರಿಪ್ರಸಾದ್​​ ಹೇಳಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:33 pm, Mon, 6 July 26

Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!