AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ರಾಮಲಿಂಗರೆಡ್ಡಿ ಮಹತ್ವದ ಮನವಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತಗಳಿಗೆ ಬೀಳಲಿದೆ ಬ್ರೇಕ್?

ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಂದ ಅಪಘಾತಗಳು ಹೆಚ್ಚುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಾತ್ಕಾಲಿಕ ಚಾಲಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಎಲೆಕ್ಟ್ರಿಕ್ ಬಸ್‌ಗಳಿಗೆ ಖಾಯಂ ಚಾಲಕರನ್ನು ನೇಮಿಸುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆಯಲು ಸಚಿವ ರಾಮಲಿಂಗ ರೆಡ್ಡಿ ಮುಂದಾಗಿದ್ದಾರೆ.

ಕುಮಾರಸ್ವಾಮಿಗೆ ರಾಮಲಿಂಗರೆಡ್ಡಿ ಮಹತ್ವದ ಮನವಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತಗಳಿಗೆ ಬೀಳಲಿದೆ ಬ್ರೇಕ್?
ಹೆಚ್​​ಡಿ ಕುಮಾರಸ್ವಾಮಿ, ರಾಮಲಿಂಗರೆಡ್ಡಿ
Kiran Surya
| Edited By: |

Updated on: Oct 26, 2025 | 9:16 PM

Share

ಬೆಂಗಳೂರು, ಅಕ್ಟೋಬರ್​ 26: ದಿನದಿಂದ ದಿನಕ್ಕೆ ನಗರದಲ್ಲಿ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್​ಗಳಿಂದ (BMTC electric bus) ಅಪಘಾತಗಳು ಆಗುತ್ತಿವೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲಲ್ಲಿ ಬೋನಸ್​ಗಾಗಿ ಪ್ರತಿಭಟನೆಗಳು ನಡೆಯುತ್ತಿದ್ದು, ಇದರಿಂದ ಅಸಮಾಧಾನಗೊಂಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಎಲೆಕ್ಟ್ರಿಕ್ ಬಸ್ಸ್​ಗಳಿಗೂ ಖಾಯಂ ಡ್ರೈವರ್​ಗಳನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಗೆ (HD Kumaraswamy) ಪತ್ರ ಬರೆಯಲು ಮುಂದಾಗಿದ್ದಾರೆ.

ರಾಜಧಾನಿ ಬೆಂಗಳೂರಲ್ಲಿ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್​ಗಳಿಂದ ವಿಪರೀತವಾಗಿ ಆಕ್ಸಿಡೆಂಟ್​ಗಳಾಗುತ್ತಿವೆ. ಎಲೆಕ್ಟ್ರಿಕ್ ಬಸ್ ಕಂಡರೇ ಜನರು ಭಯ ಬೀಳುವಂತಾಗಿದೆ. ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್​ಗಳಿಂದಲೇ ಮೂರು ವರ್ಷದಲ್ಲಿ 23ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ 3 ಸಾವಿರ ಎಲೆಕ್ಟ್ರಿಕ್ ಬಸ್ ಡ್ರೈವರ್​ಗಳಿಗೆ ಗೇಟ್ ಪಾಸ್ ನೀಡಲು ಸಾರಿಗೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಹೆಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆಯಲು ಮುಂದಾದ ಸಚಿವ ರಾಮಲಿಂಗ ರೆಡ್ಡಿ

ಎಲೆಕ್ಟ್ರಿಕ್ ಬಸ್​​ಗಳಿಗೆ ಖಾಸಗಿ ಚಾಲಕರು ಬೇಡ, ಬಿಎಂಟಿಸಿಯ ಪರ್ಮನೆಂಟ್ ಚಾಲಕರನ್ನೇ ನೇಮಕ ಮಾಡಿಕೊಳ್ಳಲು ಅವಕಾಶ ನೀಡಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ನಾಳೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಎಂಟಿಸಿ ಬಸ್ ಪ್ರಯಾಣಿಕರು ಸಾರಿಗೆ ಸಚಿವರು ಮಾಡುತ್ತಿರುವುದು ಸರಿ ಇದೆ ಎಂದಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಆಕ್ಸಿಡೆಂಟ್​ಗಳ ಮಾಹಿತಿ

  • 1-ವರ್ಷ- 2023 ಸಾವು- 3 ಆಕ್ಸಿಡೆಂಟ್- 6
  • 2-ವರ್ಷ- 2024-25 ಸಾವು- 11 ಆಕ್ಸಿಡೆಂಟ್- 29
  • 3-ವರ್ಷ – 2025-26 ಸಾವು- 9 ಆಕ್ಸಿಡೆಂಟ್- 33

ಇನ್ನು ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್​ಗೆ ಶನಿವಾರ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ನಗರದ ಹಂಪಿನಗರ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣದ ಒಳಗೆ ಬಲ ತಿರುವು ಪಡೆಯುವಾಗ ಈ ಆಕ್ಸಿಡೆಂಟ್ ಸಂಭವಿಸಿದೆ. ಬಸ್ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಮಾಲಾ ಎಂಬ 58 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಕರ್ನೂಲ್‌ ಬಸ್​ ದುರಂತ ಬಳಿಕ ಎಚ್ಚೆತ್ತ ಕರ್ನಾಟಕ ಸಾರಿಗೆ ಇಲಾಖೆ, ಇನ್ಮುಂದೆ ಈ ರೂಲ್ಸ್ ಕಡ್ಡಾಯ

ಇತ್ತೀಚೆಗೆ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಚಾಲಕರು ಕುಡಿದು ಡ್ಯೂಟಿಗೆ ಬರ್ತಿರೋ ಪ್ರಕರಣಗಳು ಬೆಳಕಿಗೆ ಬರ್ತಿದೆ. ಹೀಗಾಗಿ ಚಾಲಕರಿಂದ ಆಗುತ್ತಿರುವ ಅಪಘಾತಗಳಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ಎಲೆಕ್ಟ್ರಿಕ್ ಬಸ್ ಡ್ರೈವರ್​ಗಳಿಂದ ಆಗುತ್ತಿರುವ ಹತ್ತು ಸಮಸ್ಯೆಗಳನ್ನು ಪಟ್ಟಿ ಮಾಡಿ ಆ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಸಾರಿಗೆ ಸಚಿವರು ಸಿದ್ದತೆ ಮಾಡಿಕೊಂಡಿದ್ದಾರೆ.

ಎಲೆಕ್ಟ್ರಿಕ್ ಬಸ್ ಡ್ರೈವರ್​ಗಳು ತುಂಬಾ ಬೇಜವ್ದಾರಿ, ಅವರಿಂದ ಆಕ್ಸಿಡೆಂಟ್​ಗಳು ಹೆಚ್ಚಾಗುತ್ತಿದೆ. ಹಾಗಾಗಿ ಎಲೆಕ್ಟ್ರಿಕ್ ಬಸ್​ಗಳಿಗೂ ಪರ್ಮನೆಂಟ್ ಡ್ರೈವರ್​ಗಳನ್ನೇ ನೇಮಕ ಮಾಡಿಕೊಂಡರೇ ಒಳ್ಳೆಯದು ಅಂತಾರೇ ಬಿಎಂಟಿಸಿ ಬಸ್ ಪ್ರಯಾಣಿಕರಾದ ಗುರುಮೂರ್ತಿ ಅವರು.

ಇದನ್ನೂ ಓದಿ: ಬೆಂಗಳೂರು: ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು

ಒಟ್ಟಿನಲ್ಲಿ ದಿನದಿಂದ ದಿನಕ್ಕೆ ನಗರದಲ್ಲಿ ಈ ಎಲೆಕ್ಟ್ರಿಕ್ ಬಸ್​ಗಳಿಂದ ಆಕ್ಸಿಡೆಂಟ್​ಗಳಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಸಚಿವರು ಕೇಂದ್ರಕ್ಕೆ ಪತ್ರಕ್ಕೆ ಬರೆಯಲು ಮುಂದಾಗಿದ್ದಾರೆ ಆದರೆ ಇದಕ್ಕೆ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್