
ಬೆಂಗಳೂರು, ಅಕ್ಟೋಬರ್ 26: ದಿನದಿಂದ ದಿನಕ್ಕೆ ನಗರದಲ್ಲಿ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ಗಳಿಂದ (BMTC electric bus) ಅಪಘಾತಗಳು ಆಗುತ್ತಿವೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲಲ್ಲಿ ಬೋನಸ್ಗಾಗಿ ಪ್ರತಿಭಟನೆಗಳು ನಡೆಯುತ್ತಿದ್ದು, ಇದರಿಂದ ಅಸಮಾಧಾನಗೊಂಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಎಲೆಕ್ಟ್ರಿಕ್ ಬಸ್ಸ್ಗಳಿಗೂ ಖಾಯಂ ಡ್ರೈವರ್ಗಳನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ (HD Kumaraswamy) ಪತ್ರ ಬರೆಯಲು ಮುಂದಾಗಿದ್ದಾರೆ.
ರಾಜಧಾನಿ ಬೆಂಗಳೂರಲ್ಲಿ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ಗಳಿಂದ ವಿಪರೀತವಾಗಿ ಆಕ್ಸಿಡೆಂಟ್ಗಳಾಗುತ್ತಿವೆ. ಎಲೆಕ್ಟ್ರಿಕ್ ಬಸ್ ಕಂಡರೇ ಜನರು ಭಯ ಬೀಳುವಂತಾಗಿದೆ. ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ಗಳಿಂದಲೇ ಮೂರು ವರ್ಷದಲ್ಲಿ 23ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ 3 ಸಾವಿರ ಎಲೆಕ್ಟ್ರಿಕ್ ಬಸ್ ಡ್ರೈವರ್ಗಳಿಗೆ ಗೇಟ್ ಪಾಸ್ ನೀಡಲು ಸಾರಿಗೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ.
ಎಲೆಕ್ಟ್ರಿಕ್ ಬಸ್‌ಗಳಿಗೆ ಖಾಸಗಿ ಚಾಲಕರು ಬೇಡ, ಬಿಎಂಟಿಸಿಯ ಪರ್ಮನೆಂಟ್ ಚಾಲಕರನ್ನೇ ನೇಮಕ ಮಾಡಿಕೊಳ್ಳಲು ಅವಕಾಶ ನೀಡಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ನಾಳೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಎಂಟಿಸಿ ಬಸ್ ಪ್ರಯಾಣಿಕರು ಸಾರಿಗೆ ಸಚಿವರು ಮಾಡುತ್ತಿರುವುದು ಸರಿ ಇದೆ ಎಂದಿದ್ದಾರೆ.
ಇನ್ನು ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ಗೆ ಶನಿವಾರ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ನಗರದ ಹಂಪಿನಗರ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣದ ಒಳಗೆ ಬಲ ತಿರುವು ಪಡೆಯುವಾಗ ಈ ಆಕ್ಸಿಡೆಂಟ್ ಸಂಭವಿಸಿದೆ. ಬಸ್ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಮಾಲಾ ಎಂಬ 58 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಇದನ್ನೂ ಓದಿ: ಕರ್ನೂಲ್ ಬಸ್ ದುರಂತ ಬಳಿಕ ಎಚ್ಚೆತ್ತ ಕರ್ನಾಟಕ ಸಾರಿಗೆ ಇಲಾಖೆ, ಇನ್ಮುಂದೆ ಈ ರೂಲ್ಸ್ ಕಡ್ಡಾಯ
ಇತ್ತೀಚೆಗೆ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಚಾಲಕರು ಕುಡಿದು ಡ್ಯೂಟಿಗೆ ಬರ್ತಿರೋ ಪ್ರಕರಣಗಳು ಬೆಳಕಿಗೆ ಬರ್ತಿದೆ. ಹೀಗಾಗಿ ಚಾಲಕರಿಂದ ಆಗುತ್ತಿರುವ ಅಪಘಾತಗಳಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ಎಲೆಕ್ಟ್ರಿಕ್ ಬಸ್ ಡ್ರೈವರ್ಗಳಿಂದ ಆಗುತ್ತಿರುವ ಹತ್ತು ಸಮಸ್ಯೆಗಳನ್ನು ಪಟ್ಟಿ ಮಾಡಿ ಆ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಸಾರಿಗೆ ಸಚಿವರು ಸಿದ್ದತೆ ಮಾಡಿಕೊಂಡಿದ್ದಾರೆ.
ಎಲೆಕ್ಟ್ರಿಕ್ ಬಸ್ ಡ್ರೈವರ್ಗಳು ತುಂಬಾ ಬೇಜವ್ದಾರಿ, ಅವರಿಂದ ಆಕ್ಸಿಡೆಂಟ್ಗಳು ಹೆಚ್ಚಾಗುತ್ತಿದೆ. ಹಾಗಾಗಿ ಎಲೆಕ್ಟ್ರಿಕ್ ಬಸ್ಗಳಿಗೂ ಪರ್ಮನೆಂಟ್ ಡ್ರೈವರ್ಗಳನ್ನೇ ನೇಮಕ ಮಾಡಿಕೊಂಡರೇ ಒಳ್ಳೆಯದು ಅಂತಾರೇ ಬಿಎಂಟಿಸಿ ಬಸ್ ಪ್ರಯಾಣಿಕರಾದ ಗುರುಮೂರ್ತಿ ಅವರು.
ಇದನ್ನೂ ಓದಿ: ಬೆಂಗಳೂರು: ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು
ಒಟ್ಟಿನಲ್ಲಿ ದಿನದಿಂದ ದಿನಕ್ಕೆ ನಗರದಲ್ಲಿ ಈ ಎಲೆಕ್ಟ್ರಿಕ್ ಬಸ್ಗಳಿಂದ ಆಕ್ಸಿಡೆಂಟ್ಗಳಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಸಚಿವರು ಕೇಂದ್ರಕ್ಕೆ ಪತ್ರಕ್ಕೆ ಬರೆಯಲು ಮುಂದಾಗಿದ್ದಾರೆ ಆದರೆ ಇದಕ್ಕೆ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.