ರಸ್ತೆ ಗುಂಡಿ ಹೆಸರಿನಲ್ಲಿ ಕೋಟ್ಯಂತರ ಹಣ ಪೋಲು: ರಾಮಲಿಂಗಾರೆಡ್ಡಿ ಆರೋಪ

ಬಿಜೆಪಿಯವರು ಸ್ವತಃ ಅಭಿವೃದ್ಧಿ ಕೆಲಸ ಮಾಡುವುದಿಲ್ಲ, ಬೇರೆಯವರು ಮಾಡಿದರೆ ಅದಕ್ಕೆ ಟೀಕೆ ಮಾಡುತ್ತಾರೆ ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.

ರಸ್ತೆ ಗುಂಡಿ ಹೆಸರಿನಲ್ಲಿ ಕೋಟ್ಯಂತರ ಹಣ ಪೋಲು: ರಾಮಲಿಂಗಾರೆಡ್ಡಿ ಆರೋಪ
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 28, 2021 | 3:55 PM

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಪೋಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಪ್ರಮುಖ ರಸ್ತೆಗಳೇ ಹಾಳಾಗಿ ಹೋಗಿದೆ. ಬಿಜೆಪಿ ಸರ್ಕಾರ ಬಂದು 2 ವರ್ಷ 4 ತಿಂಗಳು ಆಗಿದೆ. ಆದರೆ ಇವರಿಂದ ರಸ್ತೆ ಗುಂಡಿ ಮುಚ್ಚುವುದಕ್ಕೆ ಆಗುತ್ತಿಲ್ಲ. ಬಿಜೆಪಿಯವರು ಸ್ವತಃ ಅಭಿವೃದ್ಧಿ ಕೆಲಸ ಮಾಡುವುದಿಲ್ಲ, ಬೇರೆಯವರು ಮಾಡಿದರೆ ಅದಕ್ಕೆ ಟೀಕೆ ಮಾಡುತ್ತಾರೆ. ಅಭಿವೃದ್ಧಿ ಕೆಲಸ ಮಾಡಿದರೆ ಅದಕ್ಕೆ ಟೀಕೆ ಮಾಡುತ್ತಾರೆ ಎಂದು ವಿಷಾದಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಸ್ತೆ ನಮ್ಮ ವಿರುದ್ಧ ಅಕ್ರಮ ನಡೆಸಿರುವ ಆರೋಪ ಮಾಡುತ್ತಿದ್ದರು. ಈಗ ಬೆಂಗಳೂರು ನಗರದಲ್ಲಿಯೇ 7 ಮಂದಿ ಸಚಿವರಿದ್ದಾರೆ. ಮುಖ್ಯಮಂತ್ರಿ ಬಳಿಯೇ ಬೆಂಗಳೂರು ನಗರ ಉಸ್ತುವಾರಿ ಖಾತೆ ಇದೆ. ನಾನು ಉಸ್ತುವಾರಿಯಾಗಿದ್ದಾಗ ವಾರಕ್ಕೆ 3 ಬಾರಿ ಸಿಟಿ ರೌಂಡ್ಸ್ ಮಾಡುತ್ತಿದ್ದೆ. ಆದರೆ ಇವರೇನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಟಿವಿಗಳಲ್ಲಿ ಪತ್ರಿಕೆಗಳಲ್ಲಿ ಪ್ರತಿನಿತ್ಯ ರಸ್ತೆ ಗುಂಡಿ ಬಗ್ಗೆ ಸುದ್ದಿ ಬರುತ್ತಲೇ ಇದೆ. ಮಳೆ ಬಂದಾಗ ಯಾವಾಗಲೂ ಸಮಸ್ಯೆ ಆಗಿದೆ. ನಮ್ಮ ಸರ್ಕಾರದ ಇದ್ದಾಗ ರಸ್ತೆಗಳು ಅಭಿವೃದ್ಧಿ ಆಗಿದ್ದವು. ಬಿಜೆಪಿ ಅವರಿಗೆ ಆಡಳಿತ ಮಾಡಲು ಬರುವುದಿಲ್ಲ. ಯಾರಾದರೂ ಆಡಳಿತ ‌ಮಾಡಿದ್ರೆ ದೂರೋಕೆ ಮಾತ್ರ ಚೆನ್ನಾಗಿ ಬರುತ್ತೆ. ಹೈಕೋರ್ಟ್ ಸಹ ಬಿಜೆಪಿ ಸರ್ಕಾರಕ್ಕೆ ಛೀಮಾರಿ ಹಾಕಿದೆ‌. ರಸ್ತೆಗಳು ಕಿತ್ತು ಹೋಗಿವೆ, ದೂಳು ಹೆಚ್ಚಾಗಿದೆ. ನಾವು ಅಧಿಕಾರದಲ್ಲಿದ್ದಾಗ ರಸ್ತೆ ಅಭಿವೃದ್ಧಿಗಾಗಿ 2ರಿಂದ 3 ಸಾವಿರ ಕೋಟಿ ಅನುದಾನ ಕೊಟ್ಟಿದ್ದೆವು. ಟೆಂಡರ್ ಶ್ಯೂರ್ ನೀತಿ ಜಾರಿ ಮಾಡಿದ್ದೆವು. ಬಿಜೆಪಿ ಸರ್ಕಾರ ಅದ್ಯಾವುದನ್ನೂ ಮಾಡುತ್ತಿಲ್ಲ ಎಂದು ಹೇಳಿದರು.

ಬಿಜೆಪಿಯವರು ಯಾವ ಪುರುಷಾರ್ಥಕ್ಕೆ ಸರ್ಕಾರ ನಡೆಸ್ತಿದ್ದಾರೆ ಎನ್ನುವುದೇ ಗೊತ್ತಾಗುತ್ತಿಲ್ಲ. ಸಿದ್ದರಾಮಯ್ಯ ಆಡಳಿತ ಅವಧಿ ಮತ್ತು ಮೈತ್ರಿ ಸರ್ಕಾರದಲ್ಲಿ ಮಾತ್ರ ನಗರಾಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಸಿಕ್ಕಿದೆ. ಈ ಹಿಂದೆ ಕೊಟ್ಟ ಅನುದಾನ ಬಿಟ್ಟೆ ಬೇರೆ ಯಾವುದೂ ಬಂದಿಲ್ಲ. ಘೋಷಣೆ ಮಾಡಿದ್ದಾರೆ, ಅನುದಾನ ಬಿಡುಗಡೆಯಾಗಿಲ್ಲ. ಅನುದಾನ ಕೊಟ್ಟಿದ್ದೇವೆ ಎನ್ನುವುದಾದರೆ ಅವರೇ ಹೇಳಿಬಿಡಲಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರ ಪ್ರದಕ್ಷಿಣಿ ಮಾಡಿದರೂ ಪ್ರಯೋಜನವಾಗಿಲ್ಲ. ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಆಗಲಿಲ್ಲ. ನನಗೆ ಜವಾಬ್ದಾರಿ ಕೊಟ್ಟು ನೋಡಿ, ನಾನು ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದರು.

ಬಿಟ್ ಕಾಯಿನ್ ಪ್ರಕರಣದ ಮಾಹಿತಿ ಪ್ರಧಾನಿ ಕಚೇರಿಗೆ ಹೋಗಿದೆ. ಅದು ಹೊರಬಂದ್ರೆ ಸರ್ಕಾರಕ್ಕೆ ಕಂಟಕವಿದೆ. ಪ್ರಧಾನಿ ಕಚೇರಿಯಿಂದ ಟಿಪ್ಪಣಿ ಬಂದ ಬಳಿಕ ಶ್ರೀಕಿಯನ್ನು ಬಂಧಿಸಲಾಗಿದೆ. ಇದರಲ್ಲಿ ಪ್ರಭಾವಿ ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಭಾವಿಗಳು ಅಂದ್ರೆ ಸಹಜವಾಗಿ ಆಡಳಿತ ಪಕ್ಷದವರೇ ಇರ್ತಾರೆ. ಈ ಕೇಸ್‌ನಲ್ಲಿ ಆಡಳಿತ ಪಕ್ಷದ ನಾಯಕರ ಹೆಸರು ಹೊರಬಂದರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕವಾಗುತ್ತೆ ಎಂದು ಅಭಿಪ್ರಾಯಪಟ್ಟರು. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ರಾಜ್ಯ ಸರ್ಕಾರ ನಡೆಸುವ ತನಿಖೆಯಲ್ಲಿ ನನಗೆ ನಂಬಿಕೆಯಿಲ್ಲ ಎಂದು ರಾಮಲಿಂಗಾರೆಡ್ಡಿ ನುಡಿದರು.

ಇದನ್ನೂ ಓದಿ: ಗಡಿ ಭಾಗದಲ್ಲಿ ಮಧ್ಯರಾತ್ರಿ ಡ್ರೋಣ್​ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ ಇದನ್ನೂ ಓದಿ: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿಸುವಂತೆ ಸಿಎಂ ಬೊಮ್ಮಾಯಿಗೆ ಬಾಲಕಿ ಮನವಿ; ವಿಡಿಯೋ ವೈರಲ್

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ