ಅನುಕಂಪದ ಆಧಾರದ ಮೇಲೆ 49 ಜನರಿಗೆ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ: ಸಚಿವ ರಾಮಲಿಂಗಾರೆಡ್ಡಿ

|

Updated on: Dec 14, 2023 | 10:47 PM

ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕರ್ನಾಟಕ ರಸ್ತೆ ಸಾರಿಗೆ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ಅನುಕಂಪದ ಆಧಾರದ ಮೇಲೆ 49 ಜನರಿಗೆ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ: ಸಚಿವ ರಾಮಲಿಂಗಾರೆಡ್ಡಿ
ನೇಮಕಾತಿ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
Follow us on

ಬೆಂಗಳೂರು, ಡಿಸೆಂಬರ್​​ 14: ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕರ್ನಾಟಕ ರಸ್ತೆ ಸಾರಿಗೆ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಇಂದು ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ಸದ್ಯ ಈ ಕುರಿತಾಗಿ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದು, ಮಾಹಿತಿಯೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಟ್ವೀಟ್

ಈ ಸಂದರ್ಭಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್.ಎಸ್, ಭಾಆಸೇ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್ ನೀಡಿದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ಜಾರಿ ನಂತರ ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ 15-20 ಲಕ್ಷ ಜನರ ಸಂಖ್ಯೆ ಹೆಚ್ಚಾಗಿದೆ. 4 ವರ್ಷ ಸತತವಾಗಿ ಬಸ್ ಖರೀದಿ ಮಾಡಿಲ್ಲ. 2016ರ ನಂತರ ಸಿಬ್ಬಂದಿ ನೇಮಕಾತಿಯೂ ಆಗಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಆ ಮೂಲಕ ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ನಂತರ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.